Home ರಾಜ್ಯAll preparations for simultaneous voting in the state:ರಾಜ್ಯದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಧ್ಯದಂಗಡಿಗಳು ಬಂದ್ ಗಡಿ ಭಾಗಗಳಲ್ಲಿ ಬಿಗಿ ಬಂದೋಬಸ್ತ್‌..!!

All preparations for simultaneous voting in the state:ರಾಜ್ಯದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಧ್ಯದಂಗಡಿಗಳು ಬಂದ್ ಗಡಿ ಭಾಗಗಳಲ್ಲಿ ಬಿಗಿ ಬಂದೋಬಸ್ತ್‌..!!

by EDITOR NEWS WARRIORS
0 comments

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು ಮತದಾನಕ್ಕೆ ಎರಡೂ ದಿನಗಳು ಬಾಕಿ ಇದೆ.


ಮತದಾನ ದಿನಕ್ಕೆ ಮುಂಜಾಗ್ರತಾ ಕ್ರಮವಾಗಿ ರಾಜ್ಯದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಬಂದೋಬಸ್ತ್ ಗಾಗಿ ಬರೋಬ್ಬರಿ 1.56 ಲಕ್ಷ ಪೊಲೀಸರ ನಿಯೋಜನೆ ಮಾಡಲಾಗಿದೆ.

ಹೂರ ರಾಜ್ಯಗಳಿಂದ ರಾಜ್ಯಕ್ಕೆ ಬಂದ ಪೊಲೀಸ್ ಪಡೆ :


ರಾಜ್ಯದ 84,119 ಸಾವಿರ ಪೊಲೀಸರು, 304 ಡಿವೈಎಸ್​​ಪಿ, 991 ಇನ್ಸ್‌ಪೆಕ್ಟರ್, 20610 ಪಿಎಸ್‌ಐ ಹಾಗೂ ಹೊರರಾಜ್ಯದಿಂದ 8,500 ಪೊಲೀಸರು, 650 ಸಿಎಪಿಎಫ್ ತುಕಡಿಗಳು ನಿಯೋಜನೆ ಮಾಡಲಾಗಿದೆ. ಒಟ್ಟು 1.56 ಲಕ್ಷ ಪೊಲೀಸರಿಂದ ಮತದಾನದಿಂದು ಬಂದೋಬಸ್ತ್ ಏರ್ಪಡಿಸಲಾಗಿದೆ.

ರಾಜ್ಯದಲ್ಲಿ ಸೂಕ್ಷ್ಮ ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ :


ರಾಜ್ಯದಲ್ಲಿ ಒಟ್ಟು 58, 282 ಮತಗಟ್ಟೆಗಳ ನಿರ್ಮಾಣ ಮಾಡಲಾಗಿದ್ದು, ಇದರಲ್ಲಿ 11,617 ಸೂಕ್ಷ್ಮ ಮತಗಟ್ಟೆಗಳ ನಿರ್ಮಾಣ ಮಾಡಲಾಗಿದೆ. ಸೂಕ್ಷ್ಮ ಮತಗಟ್ಟೆಗಳಲ್ಲಿ ಸಿಎಪಿಎಫ್ ಹಾಗೂ ಪೊಲೀಸರಿಂದ ಭದ್ರತೆ ನಿಯೋಜನೆ ಮಾಡಲಾಗಿದೆ. 2,930 ಪೊಲೀಸ್ ಮೊಬೈಲ್ ಸೆಕ್ಟರ್ ಗಳ ಕಾರ್ಯಾಚರಣೆ ಮಾಡಲಾಗಿದೆ.
ಒಂದು ಮೊಬೈಲ್ ಸೆಕ್ಟರ್ 20 ಮತಗಟ್ಟೆಗಳನ್ನು ಕವರ್ ಮಾಡಬೇಕು. ಮೊಬೈಲ್ ಸೆಕ್ಟರ್ ಗಳ ಮೇಲ್ವಿಚಾರಣೆಗೆ 749 ಸೂಪರ್‌ ವೈಸರ್ ಗಳು ನಿಯೋಜನೆ ಮಾಡಲಾಗಿದೆ. 700 ಫೈಯಿಂಗ್ ಸ್ಕ್ವಾಡ್, 700 ಚೆಕ್ ಪೋಸ್ಟ್ ಗಳ ನಿರ್ಮಾಣ ಮಾಡಲಾಗಿದೆ.

ಹೊರ ರಾಜ್ಯಗಳ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಮಾಲೋಚನೆ :


ನೇರ ರಾಜ್ಯಗಳ ಹಿರಿಯ ಪೊಲೀಸರೊಂದಿಗೆ ರಾಜ್ಯ ಪೊಲೀಸರು ಸಭೆ ನಡೆಸಲಿದ್ದು, ರಾಜ್ಯದ ಗಡಿಗಳಲ್ಲಿ ವಾಹನಗಳ ತಪಾಸಣೆ ಮಾಡಿ ಒಳ ಬಿಡಲು ಸೂಚನೆ ನೀಡಿದ್ದಾರೆ. ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಗೋವಾ, ಮಹಾರಾಷ್ಟ್ರ, ಕೇರಳ ಅಧಿಕಾರಿಗಳ ಜೊತೆ ರಾಜ್ಯದ ಪೊಲೀಸರು ಚರ್ಚೆ ನಡೆಸಲಿದ್ದಾರೆ.


ಇದರೊಂದಿಗೆ ಬಿಎಎಸ್ ಎಫ್ 108, ಸಿಐಎಸ್‌ಎಫ್ 75, ಐಟಿಬಿಪಿ 70, ಆರ್ ಪಿಎಫ್-35, ಎಸ್‌ಎಸ್ ಬಿ 75 ಹಾಗೂ ರಾಜ್ಯದ 224 ಕೆಎಸ್‌ಆರ್ ಪಿ ತುಕಡಿಗಳು ಬಂದೋಬಸ್ತ್ ಗೆ ನಿಯೋಜನೆ ಮಾಡಿದ್ದಾರೆ.

ಮಧ್ಯಪ್ರಿಯರಿಗೆ ನಿರಾಸೆ ಮಧ್ಯದಂಗಡಿಗಳು ಬಂದ್ :


ಇನ್ನು, ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಇಂದು ಸಂಜೆ 5 ಗಂಟೆಯಿಂದ ಪಬ್, ಬಾರ್, ಎಂಆರ್​​ಪಿ ಔಟ್ಲೇಟ್ ಬಂದ್ ಮಾಡಲಾಗಿದೆ…

ರಘುರಾಜ್ ಹೆಚ್.ಕೆ..9449553305…

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...