Home ರಾಜ್ಯFIR filed against Karnataka State Government Employees Association President Shadakshari : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ,ಎಸ್ ಷಡಾಕ್ಷರಿ ವಿರುದ್ಧ ದಾಖಲಾಯಿತು 504,506‌ ಕೇಸ್..!!

FIR filed against Karnataka State Government Employees Association President Shadakshari : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ,ಎಸ್ ಷಡಾಕ್ಷರಿ ವಿರುದ್ಧ ದಾಖಲಾಯಿತು 504,506‌ ಕೇಸ್..!!

by EDITOR NEWS WARRIORS
0 comments

ಸಾಗರ : ಕಳೆದ ಜನವರಿ 12ರಂದು ಸಾಗರದ ಗಾಂಧಿ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಸಾಗರ ಶಾಖೆಯ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಿವೃತ್ತ ನೌಕರರಿಗೆ, ಮಾಜಿ ಯೋಧರಿಗೆ ಅಭಿನಂದನೆ ಹಾಗೂ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಿಗೆ ಅಭಿನಂದನೆ ಹಾಗೂ ತಾಲೂಕು ನೌಕರರ ಸಮಾವೇಶ ನಡೆದಿತ್ತು .

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ, ಎಸ್ ಷಡಾಕ್ಷರಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ “ಯಾವನೋ ಆರ್.ಟಿ.ಐ ಕಾರ್ಯಕರ್ತ ತಾಳಗುಪ್ಪದವನಂತೆ ಅವನಿಗೆ ಎಚ್ಚರ ಕೊಡಲು ಬಂದಿದ್ದೇನೆ, ನಾನು ಯಾರಿಗೂ ಸಹ ಹೆದರುವುದಿಲ್ಲ. ನಾನು ಎಲ್ಲದಕ್ಕು ರೆಡಿ ಇದ್ದೇನೆ. ನನಗೆ ಕಾನೂನು ಗೊತ್ತು ಎಲ್ಲಾ ಗೊತ್ತು. ನಿನ್ನ ಆರ್ ಟಿ ಐ ಮುಂದಿಟ್ಟುಕೊಂಡು ಏನೂ ಮಾಡಲಾಗುವುದಿಲ್ಲ ಇದು ಶಿವಮೊಗ್ಗ ಜಿಲ್ಲೆ ನಿನಗೆ ನನ್ನ ವಿಷಯ ಗೊತ್ತಿಲ್ಲ, ಮುಂದೆ ಜೀವನ ನಡೆಸುವುದು ಕಷ್ಟವಾಗಬಹುದು ಈ ಹಿಂದೆ ನನ್ನ ವಿರುದ್ಧ ಹೇಳಿಕೆ ನೀಡಿದವರ ವಿರುದ್ಧ ಶಿಕಾರಿಪುರದಲ್ಲಿ, ಜಿಲ್ಲಾ ಪಂಚಾಯತ್ ಸದಸ್ಯನಿಗೆ ಜೈಲಿಗೆ ಕಳಿಸಿರುತ್ತೇನೆ ಎಚ್ಚರಿಕೆ ಇರಲಿ ಎಂದು ಏರುಧ್ವನಿಯಲ್ಲಿ, ಬೈದು ಪ್ರಾಣ ಬೆದರಿಕೆ ಹಾಕಿದ್ದು, ಇದನ್ನು ಮುಂದಿಟ್ಟುಕೊಂಡು ಓಂಕಾರ ಎಸ್ ವಿ ತಾಳಗುಪ್ಪ ನನಗೆ ಜೀವ ಬೆದರಿಕೆ ಇದೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು ಹಾಗೂ ಪತ್ರಿಕಾಗೋಷ್ಠಿ ನಡೆದು ಬಹಿರಂಗವಾಗಿ ಹೇಳಿಕೆಗಳು ಸಹ ನೀಡಿದ್ದರು. ಆದರೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿರಲಿಲ್ಲ ಎಪರ್ ದಾಖಲಿಸುವಂತೆ ಕೋರ್ಟ್ ಮೊರೆ ಹೋಗಿದ್ದರು.ಈಗ‌ ಘನ ನ್ಯಾಯಾಲಯ ಎಫ್ಐಆರ್ ದಾಖಲಿಸುವಂತೆ ಪಿಸಿಆರ್ ಅಡಿಯಲ್ಲಿ ಪೊಲೀಸ್ ಇಲಾಖೆಗೆ ತಿಳಿಸಿದೆ…

ಘನ ನ್ಯಾಯಾಲಯದ ಆದೇಶದ ಮೇರೆಗೆ ಸಾಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ವಿರುದ್ಧ 504,506 ಕೇಸ್ ಗಳನ್ನು ದಾಖಲಿಸಿದ್ದಾರೆ.

ಈಗ ಷಡಾಕ್ಷರಿ ಜಾಮೀನು ತೆಗೆದುಕೊಳ್ಳಬೇಕು ಹಾಗೂ ಪೊಲೀಸ್ ಇಲಾಖೆಯ ವಿಚಾರಣೆಯನ್ನು ಎದುರಿಸಬೇಕು…

ರಘುರಾಜ್ ಹೆಚ್.ಕೆ…9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...