Home ರಾಜ್ಯಶಿಮ್ಲಾದಿಂದ ಬಂದ ಕರೆಗೆ ಕರಗಿದ ಬಂಡೆ ಸಿದ್ದುಗೆ ಸಿಎಂ ಸ್ಥಾನ ಬಿಟ್ಟುಕೊಡಲು ಒಪ್ಪಿಗೆ ಸಿದ್ದು ಚುನಾವಣಾ ನಿವೃತ್ತಿ ನಂತರ ಡಿಕೆಗೆ ಒಲಿಯುತ್ತಾ ಸಿಎಂ ಸ್ಥಾನ..?!

ಶಿಮ್ಲಾದಿಂದ ಬಂದ ಕರೆಗೆ ಕರಗಿದ ಬಂಡೆ ಸಿದ್ದುಗೆ ಸಿಎಂ ಸ್ಥಾನ ಬಿಟ್ಟುಕೊಡಲು ಒಪ್ಪಿಗೆ ಸಿದ್ದು ಚುನಾವಣಾ ನಿವೃತ್ತಿ ನಂತರ ಡಿಕೆಗೆ ಒಲಿಯುತ್ತಾ ಸಿಎಂ ಸ್ಥಾನ..?!

by EDITOR NEWS WARRIORS
0 comments

ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಕಾಂಗ್ರೆಸ್ ಮುಖ್ಯಮಂತ್ರಿ ಪಟ್ಟಕ್ಕಾಗಿ ನಡೆದ ಹಗ್ಗ ಜಗ್ಗಾಟದಲ್ಲಿ ಕೊನೆಗೂ ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಪಟ್ಟ ಒಲಿದಿದೆ.

ತೀವ್ರ ಕುತೂಹಲ ಮೂಡಿಸಿದ್ದ ಈ ರಾಜಕೀಯ ಬೆಳವಣಿಗೆಯಲ್ಲಿ ಒಂದು ದಿನ ಸಿದ್ದು ಹೆಸರು ಇನ್ನೊಂದು ದಿನ ಡಿಕೆ ಹೆಸರು ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೇಳಿ ಬರುತ್ತಿತ್ತು. ಇಬ್ಬರೂ ಕೂಡ ರಾಜಿ ಸೂತ್ರಕ್ಕೆ ಒಪ್ಪಿಗೆ ನೀಡಿರಲಿಲ್ಲ ಆದರೆ ಕೊನೆಗೆ ಸಿಮ್ಲಾ ದಿಂದ ಕಾಂಗ್ರೆಸ್ ಅಧಿ ನಾಯಕಿ ಸೋನಿಯಾ ಗಾಂಧಿ ಡಿಕೆ ಶಿವಕುಮಾರ್ ಗೆ ತಡರಾತ್ರಿ ಕರೆ ಮಾಡಿ ನೀವು ರಾಜಿ ಸೂತ್ರಕ್ಕೆ ಒಪ್ಪಿಕೊಳ್ಳಿ ಮೊದಲ ಹಂತದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿ ನಂತರ ನೀವು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮೊದಲ ಹಂತದಲ್ಲಿ ಮುಖ್ಯಮಂತ್ರಿ ಆದ ನಂತರ ಚುನಾವಣಾ ನಿವೃತ್ತಿ ಘೋಷಣೆ ಮಾಡುತ್ತಾರೆ. ಅದೇ ಅವರ ಆಸೆ ಹಾಗಾಗಿ ಅವರಿಗೆ ಮೊದಲ ಹಂತದಲ್ಲಿ ಅವಕಾಶ ಮಾಡಿಕೊಡಿ ನಂತರ ಖಂಡಿತಾ ನಿಮ್ಮನ್ನು ಮುಖ್ಯಮಂತ್ರಿ ಹುದ್ದೆಯಲ್ಲಿ ಕೂರಿಸುತ್ತೇವೆ ಎಂದು ಹೇಳಿದಾಗ ಡಿಕೆ ಶಿವಕುಮಾರ್ ಅದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.

ಈ ಕರೆಯ ಬೆನ್ನಲ್ಲೇ ಡಿಕೆ ಶಿವಕುಮಾರ್ ಸಂಧಾನ ಸೂತ್ರಕ್ಕೆ ಒಪ್ಪಿಗೆ ನೀಡಿದ್ದು ಕೊನೆಗೂ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಫೈನಲ್ ಆಗಿದೆ. ಇನ್ನೇನು ಪ್ರಮಾಣವಚನ ಸ್ವೀಕರಿಸುವುದು ಅಷ್ಟೇ ಬಾಕಿ..

ಆದರೆ ಈ 30 ತಿಂಗಳ ಅವಧಿಯಲ್ಲಿ ಏನಾದರೂ ಆಗಬಹುದು ಮುಂದಿನ 30 ತಿಂಗಳು ಡಿಕೆ ಶಿವಕುಮಾರ್ ಗೆ ಮುಖ್ಯಮಂತ್ರಿ ಸ್ಥಾನ ಸಿಗುತ್ತಾ..?! ಮತ್ತೆ ಬಿಜೆಪಿ ಆಪರೇಷನ್ ಕಮಲಕ್ಕೆ ಕೈ ಹಾಕುತ್ತಾ..?! ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ಳುತ್ತಾರಾ..? ಡಿಕೆ ಶಿವಕುಮಾರ ಆಸೆ ಈಡೇರುತ್ತಾ..? ಎನ್ನುವುದು ಯಕ್ಷಪ್ರಶ್ನೆಯಾಗಿದೆ…

ರಘುರಾಜ್ ಹೆಚ್.ಕೆ..9449553305….

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...