Home ರಾಜ್ಯದ್ವೀಪದ ತೀರಕ್ಕೆ ಹೋಗಲು ನೀರಿಲ್ಲ ಆತಂಕದಲ್ಲಿ ಸ್ಥಳೀಯರು..!!

ದ್ವೀಪದ ತೀರಕ್ಕೆ ಹೋಗಲು ನೀರಿಲ್ಲ ಆತಂಕದಲ್ಲಿ ಸ್ಥಳೀಯರು..!!

by EDITOR NEWS WARRIORS
0 comments

ಸಾಗರ: ದ್ವೀಪದ ಕರೂರು ಹೋಬಳಿಯಿಂದ ಕಾರ್ಗಲ್. ಜೋಗಕ್ಕೆ ತ್ವರಿತವಾಗಿ ಸಂಪರ್ಕ ಕಲ್ಪಿಸುವ ಹಲ್ಕೆ – ಮುಪ್ಪಾನೆ ಲಾಂಚ್ ಮಾರ್ಗ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ಶರಾವತಿ ಹಿನ್ನೀರಿನಲ್ಲಿ ನೀರಿನ ಹರಿವು ಕಡಿಮೆ ಕಂಡುಬಂದ ಹಿನ್ನೆಲೆಯಲ್ಲಿ ಹಲ್ಕೆ ಮುಪ್ಪಾನೆ ಲಾಂಚ್ ಗೆ ಆಡಚಣೆ ಉಂಟಾಗಿದೆ. ಶುಕ್ರವಾರ ಬೆಳಿಗ್ಗೆ ಸಹ ಲಾಂಚ್ ಸಂಚಾರದ ವೇಳೆ ಮರದ ದಿಮ್ಮಿ ಹಾಗೂ ಮರಳಿನ ದಿಬ್ಬಗಳು ಲಾಂಚ್ ತಳಭಾಗದ ಬಾಟಮ್ ಗೆ ಲಗುಲಿದೆ. ಇದರಿಂದ ಲಾಂಚ್ ತಾಂತ್ರಿಕ ದೋಷಕ್ಕೆ ಒಳಗಾಗುವ ಸಾಧ್ಯತೆಯಿದ್ದು. ಮುಂಜಾಗ್ರತಾ ಕ್ರಮವಾಗಿ ಹಾಗೂ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಮೇ 26ರಿಂದ ತಾತ್ಕಾಲಿಕವಾಗಿ ಲಾಂಚ್ ಸೇವೆಯನ್ನು ಸ್ಥಗಿತಗೊಳಿಸಿದ್ದೇವೆ ಎಂದು ಕಡವು ನಿರೀಕ್ಷಕ ಧನೇಂದ್ರ ಕುಮಾರ್ ತಿಳಿಸಿದ್ದಾರೆ.

ಈ ಭಾಗದ ತುಮರಿ. ಮಾರಲಗೋಡು. ಬ್ಯಾಕೋಡು ಭಾಗದ ತುರ್ತು ಆರೋಗ್ಯ ಸೇವೆ ಸೇರಿದಂತೆ ಜೋಗ ಕಾರ್ಗಲ್ ತೆರಳಲು ಹಾಗೂ ಸಿಗಂದೂರು ಪ್ರವಾಸಿಗರು ಹೊಳೆಬಾಗಿಲು ಲಾಂಚ್ ನಲ್ಲಿ ಪ್ರತಿನಿತ್ಯ ಜನದಟ್ಟಣೆ ಇರುವ ಕಾರಣ ಬಹುತೇಕರು ಈ ಸುಗಮ ಮಾರ್ಗದ ಮೊರೆ ಹೋಗಿದ್ದರು ಸದ್ಯ ಇದು ಕೂಡ ಸ್ಥಗಿತಗೊಂಡಿದ್ದು ಈ ಭಾಗದ ಜನರ ಆತಂಕಕ್ಕೆ ಕಾರಣವಾಗಿದೆ.

ಸದ್ಯ ಈ ಭಾಗದಲ್ಲಿ ಮುಂಗಾರು ಇನ್ನೂ ಪ್ರಾರಂಭವಾಗಿಲ್ಲ. ವಾಡಿಕೆ ಮಳೆ ಸಹಿತ ಸರಿಯಾಗಿ ಆಗಿಲ್ಲ ಹೀಗಾಗಿ ಮುಂದಿನ ದಿನಗಳಲ್ಲಿ ನೀರಿನ ಪ್ರಮಾಣ ಆಧರಿಸಿ ಲಾಂಚ್ ಸೇವೆ ನೀಡಲಿದೆ ಎಂದು ಕಡವು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ…

ಓಂಕಾರ ಎಸ್ ವಿ ತಾಳಗುಪ್ಪ….

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!