Home ರಾಜ್ಯನಿನ್ನೆ ಪೊಲೀಸರ ಸಮ್ಮುಖದಲ್ಲಿ ಬಾರ್ ಕ್ಯಾಶಿಯರ್​ ಕೊಲೆ ಆರೋಪ..!! ಇಂದು ಅರೆಸ್ಟ್ ಮಾಡಲು ಹೋದ ಪೊಲೀಸರ ಮೇಲೆ ಆರೋಪಿ ಹಲ್ಲೆ.!ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪಿಎಸ್​ಐ..!!

ನಿನ್ನೆ ಪೊಲೀಸರ ಸಮ್ಮುಖದಲ್ಲಿ ಬಾರ್ ಕ್ಯಾಶಿಯರ್​ ಕೊಲೆ ಆರೋಪ..!! ಇಂದು ಅರೆಸ್ಟ್ ಮಾಡಲು ಹೋದ ಪೊಲೀಸರ ಮೇಲೆ ಆರೋಪಿ ಹಲ್ಲೆ.!ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪಿಎಸ್​ಐ..!!

by EDITOR NEWS WARRIORS
0 comments

ಕೊಲೆ ಪ್ರಕರಣದ ಆರೋಪಿಯನ್ನು ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೇ ಆಗಿದ್ದು.

ಈ ವೇಳೆ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಗಾಯಗೊಂಡ ಆರೋಪಿಗಳನ್ನು ನಗರದ ಮೆಘನ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರಕರಣದ ಹಿನ್ನೆಲೆ:

ಆಯನೂರು : ಬಾರ್‌ನಲ್ಲಿ ಕಳೆದ ರಾತ್ರಿ ಕ್ಯಾಶಿಯರ್‌ಗೆ ಚಾಕು ಚುಚ್ಚಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಸತೀಶ್‌ ಎಂಬಾತನನ್ನು ಪೊಲೀಸರು ಬಂಧಿಸಲು ತೆರಳಿದ್ದರು. ಈ ವೇಳೆ ಪೊಲೀಸ್‌ ಸಿಬ್ಬಂದಿ ಪ್ರವೀಣ್‌ ಮತ್ತು ಶಿವರಾಜ್‌ ಅವರು ಆರೋಪಿ ಸತೀಶನನ್ನು ಹಿಡಿಯಲು ಯತ್ನಿಸಿದ್ದಾರೆ. ಆಗ ಸತೀಶ ಪೊಲೀಸ್‌ ಸಿಬ್ಬಂದಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ

ಈ ವೇಳೆ ಪಿಎಸ್‌ಐ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಸತೀಶನಿಗೆ ಎಚ್ಚರಿಕೆ ನೀಡಿದ್ದಾರೆ. ಹೀಗಿದ್ದೂ ಸತೀಶ ಪಿಎಸ್‌ಐ ಮೇಲೆ ಚಾಕುವಿನಿಂದ ದಾಳಿಗೆ ಮುಂದಾಗಿದ್ದ. ಆಗ ಸಬ್‌ ಇನ್ಸ್‌ಪೆಕ್ಟರ್‌ ಹಾರಿಸಿದ ಗುಂಡು ಸತೀಶನ ಕಾಲಿಗೆ ತಗುಲಿದೆ. ಸತೀಶ ಮತ್ತು ಗಾಯಗೊಂಡ ಪೊಲೀಸ್‌ ಸಿಬ್ಬಂದಿಯನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆದರೆ ನಿನ್ನೆಯ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಗಳು ಸ್ಥಳದಲ್ಲಿ ಇದ್ದರೂ ಕೂಡ 112 ರಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳು ಕೊಲೆ ಮಾಡುವುದನ್ನು ನೋಡಿಕೊಂಡು ಸುಮ್ಮನೆ ಇದ್ದರೂ ಎನ್ನುವ ಪ್ರಬಲ ಆರೋಪ ಕೇಳಿ ಬಂದಿತ್ತು ಪೋಲಿಸರ ಸಮ್ಮುಖದಲ್ಲಿ ಕೊಲೆ ನಡೆದಿತ್ತು ಎನ್ನಲಾಗತ್ತು…

ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಾದ ಸತೀಶ್ ನಿರಂಜನ್ ಅಶೋಕ್ ಅವರನ್ನು ಬಂಧಿಸಲಾಗಿದೆ…

ಓಂಕಾರ ಎಸ್. ವಿ. ತಾಳಗುಪ್ಪ…

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...