Home ರಾಜ್ಯSSLC Supplementary Exam Preparation :ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗೆ‌ ಸಕಲ ಸಿದ್ದತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್..!!

SSLC Supplementary Exam Preparation :ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗೆ‌ ಸಕಲ ಸಿದ್ದತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್..!!

by EDITOR NEWS WARRIORS
0 comments


ಶಿವಮೊಗ್ಗ: 2023 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗಳು ಜಿಲ್ಲೆಯಲ್ಲಿ ಜೂನ್ 12 ರಿಂದ 19 ರವರೆಗೆ ನಡೆಯಲಿದ್ದು ಸುವ್ಯವಸ್ಥಿತ ಮತ್ತು ಶಾಂತಿಯುತವಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು.


ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯ ಪೂರ್ವಸಿದ್ದತೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಸೂಚನೆಗಳನ್ನು ನೀಡಿದರು.


ಒಟ್ಟು 3523 ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಜಿಲ್ಲೆಯ ಒಟ್ಟು 14 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಜೂನ್ 12 ರಂದು ಪ್ರಥಮ ಭಾಷೆ, ಜೂ.13 ರಂದು ವಿಜ್ಞಾನ, ಜೂ.14 ರಂದು ದ್ವಿತೀಯ ಭಾಷೆ, ಜೂನ್ 15 ಸಮಾಜ ವಿಜ್ಞಾನ, ಜೂನ್ 16 ರಂದು ತೃತೀಯ ಭಾಷೆ, ಜೂನ್ 17 ರಂದು ಗಣಿತ, ಜೂನ್ 19 ರಂದು ಇತರೆ ಕೋರ್ ವಿಷಯಗಳ ಪರೀಕ್ಷೆ ನಡೆಯಲಿದೆ.


ಈಗಾಗಲೇ 14 ಮುಖ್ಯ ಅಧೀಕ್ಷಕರರು, 14 ಜನ ಸ್ಥಾನಿಕ ಜಾಗೃತ ದಳ ಅಧಿಕಾರಿ, 7 ಜನ ಮಾರ್ಗಾಧಿಕಾರಿ, 7 ಮೊಬೈಲ್ ಸ್ವಾಧೀನಾಧಿಕಾರಿ, 9 ಜನ ವೀಕ್ಷಕರನ್ನು ನೇಮಿಸಲಾಗಿದೆ. ಹಾಗೂ ಕೊಠಡಿ ಮೇಲ್ವಿಚಾರಕು, ಸಿಬ್ಬಂದಿ ನಿಯೋಜನೆ ಆಗಿದ್ದು, ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಮತ್ತು ಇತರೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ.


ಪರೀಕ್ಷಾ ದಿನಗಳಂದು ಯಾವುದೇ ಅಹಿತರ ಘಟನೆಗಳಿಗೆ ಅವಕಾಶ ನೀಡದಂತೆ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀ.ಫಾಸಲೆಯವರೆಗೆ ಸಿಆರ್‍ಪಿಸಿ ಸೆಕ್ಷನ್ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ.


ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಆಸನ/ಪೀಠೋಪಕರಣ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿ, ಒದಗಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಕಾರ್ಯನಿರ್ವಹಣೆ ಖಾತರಿಪಡಿಸಿಕೊಳ್ಳಬೇಕು ಎಂದ ಅವರು ಸುವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಸಕಲ ಸಿದ್ದತೆ ಬಗ್ಗೆ ಸೂಚನೆ ನೀಡಿದರು.


ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಮಾತನಾಡಿ, ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ವಿವರಿಸಿದರು.


ಸಭೆಯಲ್ಲಿ ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ .ಕೆ.ಮಿಥುನ್‍ಕುಮಾರ್, ಡಯಟ್ ಪ್ರಾಚಾರ್ಯ ಬಸವರಾಜಪ್ಪ, ಶಿಕ್ಷಣಾಧಿಕಾರಿಗಳು, ಅಧಿಕಾರಿಗಳು ಪಾಲ್ಗೊಂಡಿದ್ದರು.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...