Home ರಾಜ್ಯಆರೋಗ್ಯ ಇಲಾಖೆಯ ಎನ್ ಹೆಚ್ ಎಂ(NHM) ನೌಕರರಿಗೆ ಶುಭ ಸುದ್ದಿ..!! ಬಹು ವರ್ಷಗಳ ನೌಕರರ ಆಸೆಯನ್ನು ಈಡೇರಿಸುತ್ತಾ ರಾಜ್ಯ ಕಾಂಗ್ರೆಸ್ ಸರ್ಕಾರ..?!

ಆರೋಗ್ಯ ಇಲಾಖೆಯ ಎನ್ ಹೆಚ್ ಎಂ(NHM) ನೌಕರರಿಗೆ ಶುಭ ಸುದ್ದಿ..!! ಬಹು ವರ್ಷಗಳ ನೌಕರರ ಆಸೆಯನ್ನು ಈಡೇರಿಸುತ್ತಾ ರಾಜ್ಯ ಕಾಂಗ್ರೆಸ್ ಸರ್ಕಾರ..?!

by EDITOR NEWS WARRIORS
0 comments

ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ನೌಕರರ ಬಹು ವರ್ಷಗಳ ಆಸೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಈಡೇರಿಸುತ್ತಾ..?! ಹಿಂದೆ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದ್ದಾಗ ಎನ್ಎಚ್ಎಮ್ ಒಳಗುತ್ತಿಗೆ ನೌಕರರು ಖಾಯಂಗಾಗಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದ್ದರು.

ಈ ಪ್ರತಿಭಟನೆಯ ಸಮಯದಲ್ಲಿ ಸ್ಥಳಕ್ಕೆ ಬಂದ ಕಾಂಗ್ರೆಸ್ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ನಮ್ಮ ಸರ್ಕಾರ ಮುಂದೆ ಅಧಿಕಾರಕ್ಕೆ ಬಂದರೆ ನಿಮ್ಮನ್ನು ಖಾಯಂಗೊಳಿಸುವುದಾಗಿ ಭರವಸೆ ನೀಡಿದ್ದರು.

ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಪಷ್ಟ ಬಹುಮತದಿಂದ ಗೆದ್ದು ಬಂದು ಸರ್ಕಾರ ರಚನೆ ಮಾಡಿದ್ದು ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿದ್ದಾರೆ. ಹಾಗೆ ದಿನೇಶ್ ಗುಂಡೂರಾವ್ ಆರೋಗ್ಯ ಸಚಿವರಾಗಿದ್ದಾರೆ.

ಹಳೆ ಪ್ರತಿಭಟನೆಗೆ ಸಿಕ್ಕಿತು ಮರುಜೀವ..!!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು, ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರಿಗೆ ಸಚಿವರಿಗೆ ಸಂಘದಿಂದ ಸಲ್ಲಿಸಲಾಗಿದ್ದಂತ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸರ್ಕಾರ ನೀಡಿರುವ ಮನವಿಯನ್ನು ವರ್ಗಾವಣೆ ಮಾಡಿದ್ದಾರೆ.

ಆರೋಗ್ಯ ಇಲಾಖೆಯ ಆಯುಕ್ತರಿಗೆ ಬರೆದಂತ ಪತ್ರದಲ್ಲಿ, ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ( NHM) ರಡಿಯಲ್ಲಿ ಒಳಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೌಕರರನ್ನು ಖಾಯಂಗೊಳಿಸುವ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯಿಂದ ತಮ್ಮನ್ನು ಕೋರಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ತಿಳಿಸಿದ್ದಾರೆ.

ಇದರಿಂದ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎನ್ ಹೆಚ್ ಎಂ ನೌಕರರಿಗೆ ಶುಭ ಸುದ್ದಿ ಒಂದು ಸಿಕ್ಕಿದ್ದು ಕಾಂಗ್ರೆಸ್ ಸರ್ಕಾರ ನೀಡಿದ ಭರವಸೆಯನ್ನು ಈಡೇರಿಸುತ್ತಾ ಕಾದು ನೋಡಬೇಕಾಗಿದೆ..

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...