Home ಶಿವಮೊಗ್ಗImportant news: ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ,ಖಾಸಗಿ, ಶಾಲೆಗಳಿಗೆ ರಜೆ ಘೋಷಣೆ..! ಪದವಿಪೂರ್ವ ಕಾಲೇಜುಗಳಿಗೆ ರಜೆ ಇಲ್ಲ ಜಿಲ್ಲಾಧಿಕಾರಿಗಳ ಸ್ಪಷ್ಟನೆ..!!

Important news: ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ,ಖಾಸಗಿ, ಶಾಲೆಗಳಿಗೆ ರಜೆ ಘೋಷಣೆ..! ಪದವಿಪೂರ್ವ ಕಾಲೇಜುಗಳಿಗೆ ರಜೆ ಇಲ್ಲ ಜಿಲ್ಲಾಧಿಕಾರಿಗಳ ಸ್ಪಷ್ಟನೆ..!!

by EDITOR NEWS WARRIORS
0 comments

ಶಿವಮೊಗ್ಗ: ಜಿಲ್ಲಾಧ್ಯಂತ ನಿರಂತರ ಮಳೆಯಾಗುತ್ತಿದ್ದು ಕೆಲವು ಭಾಗಗಳಲ್ಲಿ ಈಗಾಗಲೇ ಕಳೆದ ಒಂದು ವಾರಗಳಿಂದ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ನಿಲ್ಲದ ಮಳೆಯ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಾಳೆ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ನಾಳೆ ಘೋಷಿಸಲಾಗಿರುವ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ ಮಾಡಿಕೊಳ್ಳಲು ಶಾಲಾ ಮುಖ್ಯ ಶಿಕ್ಷಕರಿಗೆ ಸೂಚಿಸಿದೆ.

ಪದವಿಪೂರ್ವ ಕಾಲೇಜುಗಳಿಗೆ ರಜೆ ಇಲ್ಲ ಜಿಲ್ಲಾಧಿಕಾರಿ ಡಾ/ ಆರ್ ಸೇಲ್ವಮಣಿ ..!

ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿಲ್ಲ ಆದರೆ ಸ್ಥಳೀಯವಾಗಿ ಅಲ್ಲಿನ ಪರಿಸ್ಥಿತಿಗಳನ್ನು ನೋಡಿಕೊಂಡು ರಜೆ ಘೋಷಿಸಬಹುದು ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಜಿಲ್ಲಾಧಿಕಾರಿಗಳ ಅನುಮತಿ ಮೇರೆಗೆ ಅವಶ್ಯಕತೆ ಇದ್ದಲ್ಲಿ ರಜೆ ಘೋಷಣೆ ಮಾಡುತ್ತೇವೆ ಡಿಡಿಪಿಯು ..!

ಈಗಾಗಲೇ ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲಾ ಖಾಸಗಿ ಸರ್ಕಾರಿ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆಯ ಆದೇಶ ನೀಡಿಲ್ಲ ಆದರೆ ಸ್ಥಳೀಯವಾಗಿ ಆಯಾ ತಾಲೂಕುಗಳಲ್ಲಿ ಪರಿಸ್ಥಿತಿಗಳನ್ನು ನೋಡಿಕೊಂಡು ಅವಶ್ಯಕತೆ ಇದ್ದಲ್ಲಿ ರಜೆ ನೀಡಬಹುದು.

ಒಂದು ವೇಳೆ ಅವಶ್ಯಕತೆ ಇದ್ದು ರಜೆ ನೀಡಿದ್ದಲ್ಲಿ ಆ ರಜಾ ದಿನಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಿ ಕೊಂಡು ಹೋಗ ತಕ್ಕದ್ದು ಎಂದು ಜಿಲ್ಲಾಧಿಕಾರಿಗಳ ಅನುಮತಿ ಮೇರೆಗೆ ಡಿಡಿಪಿಯು ತಿಳಿಸಿದ್ದಾರೆ…

ರಘುರಾಜ್ ಹೆಚ್.ಕೆ…9449553305…

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...