Home ಸಾಗರಮರತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಶಾಂತಕುಮಾರ್ ಹಾಗೂ ಉಪಾಧ್ಯಕ್ಷರಾಗಿ ರೂಪ ಅಶೋಕ ಆಯ್ಕೆ..!

ಮರತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಶಾಂತಕುಮಾರ್ ಹಾಗೂ ಉಪಾಧ್ಯಕ್ಷರಾಗಿ ರೂಪ ಅಶೋಕ ಆಯ್ಕೆ..!

by EDITOR NEWS WARRIORS
0 comments

ಮರತ್ತೂರು :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸೊರಬ ವಿಧಾನಸಭಾ ಕ್ಷೇತ್ರದ ತಾಳಗುಪ್ಪ ಹೋಬಳಿಯ ಮರತ್ತೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯು ನೆಡೆದಿದ್ದೂ, ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಸಾಮಾನ್ಯವಿದ್ದೂ, ಉಪಾಧ್ಯಕ್ಷ ಸ್ಥಾನಕ್ಕೆ ಬಿ. ಸಿ. ಎಂ. ಎ ಮೀಸಲಾತಿ ಯು ಘೋಷಣೆಯಾಗಿತ್ತು.

*ಅಧ್ಯಕ್ಷ ಸ್ಥಾನಕ್ಕೆ ಎರಡೂ ಅಭ್ಯರ್ಥಿಗಳಾದ ಶಾಂತಕುಮಾರ ಹಾಗೂ ವೀರಭದ್ರಪ್ಪ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಶಾಂತಕುಮಾರ ರವರಿಗೆ 06 ಮತಗಳು ಹಾಗೂ ವೀರಭದ್ರಪ್ಪ ರವರಿಗೆ 05 ಮತಗಳು ಮತದಾನವಾಗಿದ್ದೂ, ಅಂತಿಮವಾಗಿ ಚುನಾವಣಾಧಿಕಾರಿ ಬಹುಮತ ಪಡೆದ ಶಾಂತಕುಮಾರ್ ರವರು ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ ಎಂದೂ, ಉಪಾಧ್ಯಕ್ಷರಾದ ರೂಪ ಅಶೋಕ ರವರು ಅವಿರೋಧವಾಗಿ ಚುನಾಯಿತರಾಗಿದ್ದಾರೆ ಎಂದೂ ಘೋಷಣೆ ಮಾಡಿದ್ದಾರೆ.

ಮರತ್ತೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಾಂತಕುಮಾರ್ ರವರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದೂ ಹೀಗೆ ” ಕಳೆದ ಸಾಲಿನಲ್ಲಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದೂ, ಅಲ್ಲದೇ ಹತ್ತಾರು ವರ್ಷಗಳಿಂದ ನಿರಂತರವಾಗಿ ಜನಸೇವೆ ಸಲ್ಲಿಸಿರುವ ಅನುಭವವಿರುವ ನಾನು ಅಧ್ಯಕ್ಷರಾಗಿ ಆಯ್ಕೆ ಮಾಡಿದ ನನ್ನ ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ಕೃತಜ್ಞತೆ ಸಲ್ಲಿಸಿ, ಗ್ರಾಮದ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ಮಂಜೂರು ಮಾಡಿಸಿ, ಉಪಾಧ್ಯಕ್ಷರು, ಸರ್ವ ಸದಸ್ಯರನ್ನೂ, ಗ್ರಾಮದ ಸರ್ವ ಗ್ರಾಮಸ್ಥರನ್ನೂ ವಿಶ್ವಾಸ ಪಡೆದು ಮರತ್ತೂರು ಗ್ರಾಮ ಪಂಚಾಯಿತಿಯನ್ನೂ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದೂ ತಿಳಿಸಿದರು.

ಉಪಾಧ್ಯಕ್ಷರಾದ ರೂಪ ಅಶೋಕ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ, ಈ ಹಿಂದೇ ಅಧ್ಯಕ್ಷರಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದೂ , ಗ್ರಾಮ ಪಂಚಾಯಿತಿ ಅಧ್ಯಕ್ಷರೂ, ಸರ್ವ ಸದಸ್ಯರನ್ನೂ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರನ್ನೂ ವಿಶ್ವಾಸ ಪಡೆದು ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡುವುದಾಗಿ ತಿಳಿಸಿದರು.

ಓಂಕಾರ ಎಸ್. ವಿ. ತಾಳಗುಪ್ಪ….

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...