Thursday, 22 October 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..!
ಆರೋಗ್ಯ

ತೀರ್ಥಹಳ್ಳಿಯಲ್ಲಿ ಡೆಂಗ್ಯೂ ಜನ ಜಾಗೃತಿ ರಥ..!

ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ ಹಾಗೂ ಈ ವರ್ಷ ಕಂಡುಬಂದಿರುವ ಪ್ರಕರಣಗಳಲ್ಲಿ ಅತ್ಯಂತ ಅಪಾಯಕಾರಿ ಡೆಂಗ್ಯೂ ಸೀರೋಟೈಪ್ 2 ಕಂಡುಬಂದಿರುವುದು ಆತಂಕಕಾರಿ ವಿಷಯವಾಗಿದೆ. ಈ ದಿಸೆಯಲ್ಲಿಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ” ಎಲ್ಲರ ಸಹಭಾಗಿತ್ವದಿಂದ ಡೆಂಗಿಯನ್ನು…

ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ ಹಾಗೂ ಈ ವರ್ಷ ಕಂಡುಬಂದಿರುವ ಪ್ರಕರಣಗಳಲ್ಲಿ ಅತ್ಯಂತ ಅಪಾಯಕಾರಿ ಡೆಂಗ್ಯೂ ಸೀರೋಟೈಪ್ 2 ಕಂಡುಬಂದಿರುವುದು ಆತಂಕಕಾರಿ ವಿಷಯವಾಗಿದೆ. ಈ ದಿಸೆಯಲ್ಲಿ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ” ಎಲ್ಲರ ಸಹಭಾಗಿತ್ವದಿಂದ ಡೆಂಗಿಯನ್ನು ಸೋಲಿಸೋಣ” ಎಂಬ ಘೋಷಣೆಯೊಂದಿಗೆ ಜನಜಾಗೃತಿಗಾಗಿ ಡೆಂಗೀ ರಥ ಸಿದ್ದಪಡಿಸಿದ್ದು ಇದು ಜಿಲ್ಲಾದಾದ್ಯಂತ ಸಂಚರಿಸಲಿದೆ. ತೀರ್ಥಹಳ್ಳಿ ತಾಲ್ಲೂಕಿನ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲೂ ಎರಡು ದಿನಗಳ ಕಾಲ ಇದು ಸಂಚರಿಸಲಿದೆ. ಸಾರ್ವಜನಿಕರಿಗೆ ಡೆಂಗ್ಯೂ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಇದರಿಂದ ಸಹಕಾರಿಯಾಗಲಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಟರಾಜ್ ನುಡಿದರು.ಅವರು ಶುಕ್ರವಾರ ತೀರ್ಥಹಳ್ಳಿಗೆ ಆಗಮಿಸಿದ ಡೆಂಗ್ಯೂ ರಥವನ್ನು ಸ್ವಾಗತಿಸಿ ಮಾತನಾಡಿದರು.

 ಮುಂದುವರೆದು, ನಿಂತ ನೀರು ಸೊಳ್ಳೆಗಳ ಉತ್ಪತ್ತಿಗೆ ಮೂಲ.ಸಾರ್ವಜನಿಕರು ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಬಿಸಾಡದೆ ತಮ್ಮ ಮನೆ ಮತ್ತು ಸುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವ ಬಗ್ಗೆ ಆಧ್ಯತೆ ನೀಡಬೇಕು.ಸೊಳ್ಳೆ ಉತ್ಪತ್ತಿಯಾಗದಂತೆ ಹಾಗೂ ಸೊಳ್ಳೆಗಳ ಕಡಿತಕ್ಕೆ ಈಡಾಗದಂತೆ ನೋಡಿಕೊಳ್ಳುವುದು ಡೆಂಗ್ಯೂ ರೋಗ ನಿಯಂತ್ರಣದಲ್ಲಿ ಅತ್ಯಂತ ಪರಿಣಾಮಕಾರಿ ಮಾರ್ಗ. ಈ ದಿಸೆಯಲ್ಲಿ ಆರೋಗ್ಯ ಇಲಾಖೆಯ ಸಲಹೆಗಳನ್ನು ಪಾಲಿಸುವ ಮೂಲಕ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಸಾರ್ವಜನಿಕರು ಹೆಚ್ಚಿನ ಸಹಕಾರ ನೀಡುವಂತೆ ಕೋರಿದರು.

ರೋಗ ಪೀಡಿತರಿಗೆ ತಾಲ್ಲೂಕಿನ ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲೂ ಸೂಕ್ತ ಚಿಕಿತ್ಸೆ ಲಭ್ಯವಿದ್ದು ಜ್ವರ ಪೀಡಿತರು ವಿಳಂಬ ಮಾಡದೆ ಹತ್ತಿರದ ಆರೋಗ್ಯ ಕೇಂದ್ರಗಳಲ್ಲಿ ತಪಾಸಣೆ ಮಾಡಿಸಿ ಚಿಕಿತ್ಸೆ ಪಡೆದುಕೊಳ್ಳುವಂತೆ  ತಿಳಿಸಿದರು.

  ತಾಲ್ಲೂಕಿನ ವಿವಿಧ ಸಂಸ್ಥೆಗಳ ವೈದ್ಯಾಧಿಕಾರಿಗಳು , ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಇದ್ದರು.

EDITOR NEWS WARRIORS