Home ರಾಜ್ಯFather Francis Fernandez’s bail application dismissed: ಶಿವಮೊಗ್ಗ ಸೆಕ್ರೆಡ್‍ಹಾರ್ಟ್ ಕಾಲೇಜಿನ ಪ್ರಾಂಶುಪಾಲ ಫ್ರಾನ್ಸಿಸ್ ಫರ್ನಾಂಡೀಸ್ ಜಾಮೀನು ಅರ್ಜಿ ವಜಾ ಪೊಲೀಸರಿಂದ ಬಿತ್ತು ಹೊಸ ಸೆಕ್ಷನ್..!

Father Francis Fernandez’s bail application dismissed: ಶಿವಮೊಗ್ಗ ಸೆಕ್ರೆಡ್‍ಹಾರ್ಟ್ ಕಾಲೇಜಿನ ಪ್ರಾಂಶುಪಾಲ ಫ್ರಾನ್ಸಿಸ್ ಫರ್ನಾಂಡೀಸ್ ಜಾಮೀನು ಅರ್ಜಿ ವಜಾ ಪೊಲೀಸರಿಂದ ಬಿತ್ತು ಹೊಸ ಸೆಕ್ಷನ್..!

by EDITOR NEWS WARRIORS
0 comments


ಶಿವಮೊಗ್ಗ, : ಶಾಲಾ ವಿದ್ಯಾರ್ಥಿನಿ/ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ಕೋಟೆ ಪೊಲೀಸ್ ಠಾಣೆಯಲ್ಲಿ ಸೆಕ್ರೆಡ್‍ಹಾರ್ಟ್ ಕಾಲೇಜಿನ ಪ್ರಾಂಶುಪಾಲ ಫ್ರಾನ್ಸಿಸ್ ಫರ್ನಾಂಡೀಸ್ ಇವರ ಮೇಲೆ ಪೋಕ್ಸೋ ಪ್ರಕರಣವು ದಾಖಲಾಗಿದ್ದು, ಆರೋಪಿಯನ್ನು ಕೋಟೆ ಪೊಲೀಸರು ದಸ್ತಗಿರಿ ಮಾಡಿ, ನ್ಯಾಯಾಂಗ ಬಂಧನದಲ್ಲಿರಿಸಲಾಗಿತ್ತು. ಆರೋಪಿಯು ತನಗೆ ಜಾಮೀನು ನೀಡುವಂತೆ ಕೋರಿ ಅರ್ಜಿಯನ್ನು ಸಲ್ಲಿಸಿಕೊಂಡಿದ್ದು, ಈ ಅರ್ಜಿಯನ್ನು ಮಾನ್ಯ 1ನೇ ಹೆಚ್ಚುವರಿ ಜಿಲ್ಲಾ & ವಿಶೇಷ ಸತ್ರ ನ್ಯಾಯಾಲಯ, (ಎಫ್ ಟಿಎಸ್ಸಿ-1) ಶಿವಮೊಗ್ಗ ಇಲ್ಲಿ ವಿಚಾರಣೆ ನಡೆಸಿ, ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದೆ.

ಸದರಿ ಪ್ರಕರಣದ ಜಾಮೀನು ಅರ್ಜಿಯನ್ನು ತಿರಸ್ಕರಿಸುವಂತೆ ಶ್ರೀಮತಿ ಮಮತಾ ಬಿ.ಎಸ್.ಸರ್ಕಾರಿ ಅಭಿಯೋಜಕರು, ಶಿವಮೊಗ್ಗ ರವರು ವಾದ ಮಂಡಿಸಿದ್ದು, 1ನೇ ಜಿಲ್ಲಾ & ವಿಶೇಷ ಪತ್ರ ನ್ಯಾಯಾಲಯ(ಎಫ್‍ಟಿಎಸ್‍ಸಿ )ದ ನ್ಯಾಯಾಧೀಶರಾದ ಶ್ರೀಮತಿ ಲತಾ ರವರು ಆರೋಪಿತನಾದ ಫ್ರಾನ್ಸಿಸ್ ಫರ್ನಾಂಡೀಸ್ ಇವರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಮಾಡಿರುತ್ತಾರೆ.

ಈಗಾಗಲೇ ಆರೋಪಿ ಫ್ರಾನ್ಸಿಸ್ ಫರ್ನಾಂಡಿಸ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ಹಾಗೂ ಜಾತಿನಿಂದನೆ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ.ಇದರ ಜೊತೆಗೆ ಪೊಲೀಸರು ನಡೆಸಿದ ತನಿಖೆಯಲ್ಲಿ ಬೆಳಕಿಗೆ ಬಂದ ಹಲವು ಅಂಶಗಳನ್ನು ಇಟ್ಟುಕೊಂಡು 376 ಬಲಾತ್ ಸಂಭೋಗಕ್ಕಾಗಿ ದಂಡನೆ ಸೆಕ್ಷನ್ ಕೂಡ ದಾಖಲಾಗಿದೆ.ಹಾಗಾಗಿ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ…

ರಘುರಾಜ್ ಹೆಚ್.ಕೆ…9449553305….

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...