Home ತೀರ್ಥಹಳ್ಳಿತೀರ್ಥಹಳ್ಳಿ ಸರ್ಕಾರಿ ನೌಕರರ ಸಂಘದಿಂದ ಸ್ವಾತಂತ್ರೋತ್ಸವ ಸಂಭ್ರಮಾಚರಣೆ..!

ತೀರ್ಥಹಳ್ಳಿ ಸರ್ಕಾರಿ ನೌಕರರ ಸಂಘದಿಂದ ಸ್ವಾತಂತ್ರೋತ್ಸವ ಸಂಭ್ರಮಾಚರಣೆ..!

by EDITOR NEWS WARRIORS
0 comments


ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತೀರ್ಥಹಳ್ಳಿ ತಾಲ್ಲೂಕು ಶಾಖೆಯಿಂದ ಸ್ವಾತಂತ್ರೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ಸಂಘದ ಕಚೇರಿ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಕಾರ್ಯದರ್ಶಿ ರಾಮು ಬಿ, ಸ್ವಾತಂತ್ರ್ಯಕ್ಕಾಗಿ ಬಹಳಷ್ಟು ಜನ ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ. ಆ ಎಲ್ಲಾ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ನಾವೆಲ್ಲಾ ಸದಾ ನೆನಪಿಸಿಕೊಳ್ಳಬೇಕು ಎಂದರು.

ಧ್ವಜಾರೋಹಣವನ್ನು ನೆರವೇರಿಸಿದ ಸಂಘದ ಅಧ್ಯಕ್ಷ ಟಿ ವಿ ಸತೀಶ ಸ್ವಾತಂತ್ರೋತ್ಸವದ‌ ಸಂಭ್ರಮದ ಪ್ರಯುಕ್ತ ನಮ್ಮ ಸಂಘ ಪ್ರತಿ ವರ್ಷ ರಕ್ತದಾನ ಶಿಬಿರಗಳನ್ನು ಸಂಘಟಿಸಿ ರಕ್ತದಾನ ಮಾಡುವ ಮೂಲಕ ಸ್ವಾತಂತ್ರ್ಯ ಸೇನಾನಿಗಳಿಗೆ ಗೌರವ ಸಲ್ಲಿಸುವ ಕಾರ್ಯ ಮಾಡುತ್ತಿದೆ. ನಿನ್ನೆ ಹಲವಾರು ರಕ್ತದಾನಿಗಳು ರಕ್ತ ದಾನ ಮಾಡುವ ಮೂಲಕ ನಮ್ಮೊಂದಿಗೆ ಕೈಜೋಡಿಸಿದ್ದಾರೆ. ಇಂದೂ ಕೂಡ ಕೆಲವರು ರಕ್ತದಾನ ಮಾಡುವವರಿದ್ದಾರೆ.  ನಮ್ಮೆಲ್ಲಾ ಸಮಾಜಮುಖಿ ಕಾರ್ಯಗಳಿಗೆ ಸಹಕರಿಸಿ ಬೆಂಬಲಿಸುತ್ತಿರುವ ಸಹೃದಯಿ ಬಂಧುಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುವುದಾಗಿ ತಿಳಿಸಿ ಸರ್ವರಿಗೂ ಶುಭ ಕೋರಿದರು.

ಖಜಾಂಚಿ ಪವಿತ್ರ ಹೆಚ್ ಸಿ, ಉಪಾಧ್ಯಕ್ಷರುಗಳಾದ ಸುಷ್ಮ ಎಸ್ ಪಿ,ಸತೀಶ್ ಟಿ ಆರ್, ಜಂಟಿ ಕಾರ್ಯದರ್ಶಿ ಕೌಶಿಕ್, ಸಂಘಟನಾ ಕಾರ್ಯದರ್ಶಿ ವೆಂಕಟೇಶ್, ಮಾಜಿ ಗೌರವಾಧ್ಯಕ್ಷ ಆರ್ ಎಂ ಧರ್ಮಕುಮಾರ್ ಮತ್ತಿತರರು ಇದ್ದರು….

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!