Home ಶಿವಮೊಗ್ಗನಂಜನಗೂಡು ರಾಯರ ಮಠದಲ್ಲಿ ಆರಾಧನಾ ಮಹೋತ್ಸವ.

ನಂಜನಗೂಡು ರಾಯರ ಮಠದಲ್ಲಿ ಆರಾಧನಾ ಮಹೋತ್ಸವ.

by Reporter Smg
0 comments

ಶಿವಮೊಗ್ಗ : ಬೊಮ್ಮನ ಕಟ್ಟೆ ರಸ್ತೆಯ ದೇವಂಗಿ ರತ್ನಾಕರ ಬಡಾವಣೆಯಲ್ಲಿರುವ 75ನೇ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಆಗಸ್ಟ್ 31ರಿಂದ ಸೆ.2ರವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವವನ್ನು ಆಚರಿಸಲಾಗುತ್ತಿದೆ.

ಆರಾಧನೆಯಲ್ಲಿ ಏನೆಲ್ಲಾ ಸೇವೆಗಳು ನಡೆಯಲಿವೆ..?

ಆರಾಧನಾ ಮಹೋತ್ಸವದ ವಿವರಣೆ ನೀಡಿದ ಮಠದ ವ್ಯವಸ್ಥಾಪಕ ಧೀರೇಂದ್ರ ಆಚಾರ್ ಆಗಸ್ಟ್ 30ರಂದು ಸಂಜೆ 6ಕ್ಕೆ ಗೋಪೂಜೆ, ಲಕ್ಷ್ಮೀ ಪೂಜೆ, ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ‌ ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ.ಎಸ್ ಈಶ್ವರಪ್ಪರವರ ಉಪಸ್ಥಿತಿ ಇರಲಿದೆ.

ಆಗಸ್ಟ್‌ 31ರ ಬೆಳಗ್ಗೆ 5.30 ಕ್ಕೆ ಸುಫ್ರಭಾತದಿಂದ ಆರಂಭವಾಗುವ ಪೂರ್ವಾರಾಧನೆ ಅಷ್ಟೋತ್ತರ, ಕ್ಷೀರಾಭಿಷೇಕ, ಪಾದಪೂಜೆಯೊಂದಿಗೆ ಕನಕಾಭಿಷೇಕ ಅರ್ಚನೆ ನಡೆಸಿ ಮಹಾಮಂಗಳಾರತಿ ತೀರ್ಥಪ್ರಸಾಧ ವಿನಿಯೋಗ ಮಾಡುವ ಮೂಲಕ ಕೊನೆಯಾಗುತ್ತದೆ.
ಸೆ.1(ದ್ವಿತೀಯ) ಗುರುರಾಜರ ಮಧ್ಯಾರಾಧನೆ ಹಾಗು ಸೆ.2 ಶ್ರೀ ಗುರುರಾಜರ ಉತ್ತರಾಧನೆ ನಡೆಯಲಿದ್ದು ಅಂದು ಬೆಳಗ್ಗೆ 9ಕ್ಕೆ ಪಲ್ಲಕ್ಕಿ ಉತ್ಸವ ನಡೆಯಲಿದೆ ಎಂದು ತಿಳಿಸಿದರು. ಭಕ್ತರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಗುರುರಾಯರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಕೋರಿದರು.

ವರದಿ- ವಿನಯ್ ಕುಮಾರ್ ಹೆಚ್.ಎಮ್

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...