Home ರಾಜ್ಯಆಗಸ್ಟ್ 31 ಶಿವಮೊಗ್ಗಕ್ಕೆ ಐತಿಹಾಸಿಕ ದಿನ

ಆಗಸ್ಟ್ 31 ಶಿವಮೊಗ್ಗಕ್ಕೆ ಐತಿಹಾಸಿಕ ದಿನ

by Reporter Smg
0 comments

ಶಿವಮೊಗ್ಗ : ಮಲೆನಾಡಿನ ಹೆಬ್ಬಾಗಿಲಿನಲ್ಲಿ ಆಗಸ್ಟ್ 31ರಿಂದ  ಲೋಹದ ಹಕ್ಕಿಗಳು ಅಧಿಕೃತವಾಗಿ ಹಾರಾಡಲಿವೆ.
ಈ ಕುರಿತು ಇಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಂಸದ ಬಿ.ವೈ ರಾಘವೇಂದ್ರರವರು ಆಗಸ್ಟ್ 31ರಿಂದ ವಿಮಾನ ನಿಲ್ದಾಣದಿಂದ ಅಧಿಕೃತವಾಗಿ ವಿಮಾನಗಳು ಸಾರ್ವಜನಿಕ ಸೇವೆಗೆ ಲಭ್ಯವಾಗಲಿದೆ ಎಂದು ತಿಳಿಸಿದರು.

ಅಂದು ಬೆಳಗ್ಗೆ  ಬೆಂಗಳೂರಿನಿಂದ ಹೊರಟ ವಿಮಾನವು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿದಲ್ಲಿ 11.05ಕ್ಕೆ ಲ್ಯಾಂಡ್ ಆಗಲಿದ್ದು ಶಿವಮೊಗ್ಗ ವಿಮಾನ ನಿಲ್ದಾಣ ಆರಂಭಕ್ಕೆ ಶ್ರಮಿಸಿದ್ದ ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಬಿ.ಎಸ್ ಯಡಿಯೂರಪ್ಪರವರ ಉಪಸ್ತಿತಿಯಲ್ಲಿ ಏರ್ ಪೋರ್ಟ್ ಅಧಿಕೃತವಾಗಿ ಆರಂಭವಾಗಲಿದೆ.

ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಸಚಿವರು, ಶಾಸಕರು, ಜನ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.


ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜಾರಿಗೆ ತಂದಂತಹ ಉಡಾಣ್ ಯೋಜನೆಯಿಂದ ದೇಶದಲ್ಲಿ ಹಲವು ಏರ್ ಪೋರ್ಟ್ ಗಳು ಆರಂಭವಾಗಿದೆ.
ಸದ್ಯ ಈಗ ಶಿವಮೊಗ್ಗ ಬೆಂಗಳೂರಿಗೆ ಸೇವೆ ಲಭ್ಯವಿದ್ದು ಇನ್ನು ಒಂದು ತಿಂಗಳಲ್ಲಿ ಹೈದರಾಬಾದ್ ಹಾಗು ತಿರುಪತಿಗೆ ವಿಮಾನ ಸೇವೆಗಳು ಆರಂಭವಾಗಲಿದೆ ಎಂದು ತಿಳಿಸಿದರು.

ಸಂಸದರಿಂದ ವಿಮಾನ ನಿಲ್ದಾಣದಲ್ಲಿ ಕೊನೇ ಹಂತದ ಸಿದ್ದತೆ ವೀಕ್ಷಿಣೆ.


ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್‌ ಲ್ಯಾಂಡಿಂಗ್ ವ್ಯವಸ್ಥೆ ಇದ್ದು ಡಿಸಂಬರ್ ವೇಳೆಗೆ ಸಾರ್ವಜನಿಕ ಸೇವೆಗೆ ಸಿಗಲಿದೆ.


ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಷ್ಟ್ರ ಕವಿ ಕುವೆಂಪು ಹೆಸರನ್ನು ಕೇಂದ್ರಕ್ಕೆ ಕಳಿಸಲಾಗಿದೆ.
ಕೇಂದ್ರ ಸರ್ಕಾರದಿಂದ ಗೆಜೆಟ್ ನೋಟಿಫಿಕೇಶನ್ ಕೆಲಸ ಆಗಬೇಕಿದೆ ನಾವು ಕುವೆಂಪು ಹೆಸರನ್ನು ಅಂತಿಮವಾಗಿ ಕಳಿಸಿಕೊಟ್ಟಿದ್ದೇವೆ.
ಕಾರ್ಗೋ ಏರಲೈನ್ಸ್ ವ್ಯವಸ್ಥೆ ಇದೆ ಇದರಿಂದ ಶಿವಮೊಗ್ಗ ದಾವಣಗೆರೆ ಭಾಗದ ಅಡಿಕೆ ಬೆಳೆಗಾರರಿಗೆ ಮತ್ತು ಚಿಕ್ಕಮಗಳೂರಿನ ಕಾಫಿ ಬೆಳೆಗಾರರಿಗೆ ಫಸಲನ್ನು ದೇಶ ವಿದೇಶಗಳಿಗೆ ರಫ್ತು ಮಾಡಲು ಅನುಕೂಲವಾಗಲಿದೆ ಎಂದರು.

ವರದಿ- ವಿನಯ್ ಕುಮಾರ್ ಹೆಚ್.ಎಮ್

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...