Home ರಾಜ್ಯಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮ ಸಾಲ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ..!

ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮ ಸಾಲ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ..!

by EDITOR NEWS WARRIORS
0 comments

ಕ್ಯುಆರ್ ಕೋಡ್

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ವೆಬ್‍ಸೈಟ್ kacdc.karnataka.gov.in ಮೂಲಕ ಸೆ.18 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು. ಅರ್ಜಿದಾರರ ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ಜೋಡಣೆಯಾಗಿರಬೇಕು. ಬ್ಯಾಂಕ್ ಖಾತೆಗೆ ಆಧಾರ್ ನಂಬರ್‍ನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಗಳಿಗೆ ಶೇ.5 ಮೀಸಲಾತಿ ಇರಿಸಿದೆ

.
ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಯ ಅರ್ಹತೆಗಳು :

ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.3,00,000/-ಗಳ ಮಿತಿಯೊಳಗಿರಬೇಕು. ಅರ್ಜಿದಾರರು 18 ರಿಂದ 45 ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಲ್ಲಿ ಕನಿಷ್ಠ ರೂ.50,000/-ಗಳಿಂದ ಗರಿಷ್ಠ ರೂ.1,00,000/-ಗಳ ಸಾಲ ಒದಗಿಸಲಾಗುವುದು. ಈ ಮೊತ್ತದಲ್ಲಿ ಶೇ.20 ರಷ್ಟು ಸಹಾಯಧನ ಹಾಗೂ ಶೇ.80 ರಷ್ಟು ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. 2 ತಿಂಗಳ ವಿರಾಮ ಅವಧಿ ಇದ್ದು, ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.


ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆಯ ಅರ್ಹತೆಗಳು :

ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು. ಅರ್ಜಿದಾರರು 21 ವರ್ಷದಿಂದ 55 ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಡಿ ಆಹಾರ ವಾಹಿನಿ ಪ್ರಾರಂಭಿಸಲು ಬ್ಯಾಂಕ್/ಸಹಕಾರಿ ಸಂಘಗಳಿಂದ ಸಾಲ ಪಡೆಯಬೇಕು ಹಾಗೂ ನಿಗಮದಿಂದ ಗರಿಷ್ಠ ರೂ.2,00,000/-ಗಳ ಸಹಾಯಧನ ವನ್ನು ನೀಡಲಾಗುವುದು.


ವಾಸವಿ ಜಲಶಕ್ತಿ ಯೋಜನೆಯ ಅರ್ಹತೆಗಳು :

ಈ ಯೋಜನೆಯಡಿ 2 ರಿಂದ 5 ಎಕರೆ ಕೃಷಿ ಭೂಮಿ ಹೊಂದಿರುವವರಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಸಾಲ-ಸಹಾಯಧನವನ್ನು ನೀಡಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು. ಅರ್ಜಿದಾರರು 21 ವರ್ಷದಿಂದ 50 ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಡಿ ಗರಿಷ್ಠ ರೂ.2,00,000/-ಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಒದಗಿಸಲಾಗುವುದು ಹಾಗೂ ವಿದ್ಯುದೀಕರಣಕ್ಕಾಗಿ ರೂ.50,000/-ಗಳ ಸಹಾಯಧನ ನೀಡಲಾಗುವುದು. 6 ತಿಂಗಳ ವಿರಾಮಾವಧಿಯ ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಪಾವತಿಸಬೇಕು.
ಅರಿವು ಶೈಕ್ಷಣಿಕ ಸಾಲ ಯೋಜನೆಯ ಅರ್ಹತೆಗಳು : ಈ ಯೋಜನೆಯಲ್ಲಿ ಸಿ.ಇ.ಟಿ/ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ.ನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ಶೇ.2ರ ಬಡ್ಡಿದರದಲ್ಲಿ ವಾರ್ಷಿಕ ರೂ.1,00,000/-ಗಳ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ವರ್ಷದಿಂದ 35 ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು. ಈ ಯೋಜನೆಗೆ ಸಂಬಂಧಪಟ್ಟಂತೆ ಸಿ.ಇ.ಟಿ ಪರೀಕ್ಷೆಯ ಕೌನ್ಸಿಲಿಂಗ್ ಮುಗಿದ ನಂತರ ಅರ್ಜಿಯನ್ನು ಸ್ವೀಕರಿಸಲಾಗುವುದು.
ನಿಗಮದ ಯೋಜನೆಗಳ ಮಾರ್ಗಸೂಚಿ, ಆನ್‍ಲೈನ್ ಅರ್ಜಿ, ಜಿಲ್ಲಾ ಕಚೇರಿಗಳ ವಿಳಾಸ, ಸರ್ಕಾರಿ ಆದೇಶಗಳು ಹಾಗೂ ಎಲ್ಲಾ ಸಂಕ್ಷಿಪ್ತ ವಿವರಗಳನ್ನು ಕೆಳಕಂಡ ಕ್ಯುಆರ್ ಕೋಡ್‍ನ್ನು ಗೂಗಲ್‍ನಲ್ಲಿ ಸ್ಕ್ಯಾನ್ ಮಾಡಿ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ : 9448451111, 08182-229634 ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ಜಿಲ್ಲೆಯ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Latest news
Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..!