Home ರಾಜ್ಯಇದೊಂದು ಪುಕ್ಕಲು ಸರ್ಕಾರ – ಚಕ್ರವರ್ತಿ ಸೂಲಿಬೆಲೆ..!

ಇದೊಂದು ಪುಕ್ಕಲು ಸರ್ಕಾರ – ಚಕ್ರವರ್ತಿ ಸೂಲಿಬೆಲೆ..!

by Reporter Smg
0 comments

ಶಿವಮೊಗ್ಗ : ಪ್ರಖರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧದ ದೂರಿಗೆ ಸಂಬಂಧಿಸಿದಂತೆ ಎಫ್ ಐ ಆರ್ ವಿನೋಬಾ ನಗರ ಪೋಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಇಂದು ಈ ಸಂಬಂದ ಸೂಲಿಬೆಲೆ ಯವರಿಗೆ ನೋಟೀಸ್ ಜಾರಿ ಮಾಡಿ ಠಾಣೆಗೆ ಕರೆಸಿಕೊಳ್ಳಲಾಗಿತ್ತು. ಶಾಸಕ ಎಸ್ ಎನ್ ಚನ್ನಬಸಪ್ಪ ಜೊತೆಗೆ ವಿನೋಬಾ ನಗರ ಪೋಲೀಸ್ ಠಾಣೆಗೆ ಆಗಮಿಸಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದರು.

ಬಳಿಕ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ ನನ್ನ ವಿರುದ್ಧ ದಾಖಲಾದ ಸಣ್ಣ ದೂರಿಗೆ ಎಫ್ ಐ ಆರ್ ದಾಖಲಿಸಿ ನನ್ನ ಸ್ಟೇಟ್ ಮೆಂಟ್ ತೆಗೆದುಕೊಳ್ಳಲು ಠಾಣೆಗೆ ಕರೆಸಿಕೊಳ್ಳಲಾಗಿತ್ತು.

ಪೋಲೀಸರು ಬಹಳ ಪ್ರೀತಿಯಿಂದ ನನ್ನ ಹೇಳಿಕೆಯನ್ನು ದಾಖಲು ಮಾಡಿಕೊಂಡಿದ್ದಾರೆ‌. ಈ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆ ನನ್ನ ಪೋಲೀಸ್ ಠಾಣೆ ಮೆಟ್ಟಿಲು ಏರುವಂತೆ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದರು ಆದರೆ ಅದು ಈ ರೀತಿ ಎಂದು ಕೊಂಡಿರಲಿಲ್ಲ.

ಕಾಂಗ್ರೆಸ್ ಸರ್ಕಾರ ಸಜ್ಜನರನ್ನು ಎದುರಿಸಲಾಗದೆ ಪೋಲೀಸರನ್ನ ಬಳಸಿಕೊಂಡು ಈ ರೀತಿಯ ಪ್ರಯತ್ನ‌ ಮಾಡುತ್ತಿದ್ದಾರೆ. ನಾವು ಇದ್ಯಾವುದಕ್ಕೂ ಹೆದರುವುದಿಲ್ಲ ಕಾಂಗ್ರೆಸ್ ಒಂದು ಪುಕ್ಕಲು ಸರ್ಕಾರ.


ಸೌಗಂಧಿಕರವರು ಫೇಸ್ ಬುಕ್ ನಲ್ಲಿ ಮೋದಿಯವರನ್ನು ಮೋರಿ ಎಂದು ಕರೆದಿದ್ದರು ಅದಕ್ಕೆ ಪ್ರತ್ಯುತ್ತರವಾಗಿ‌ ನಮ್ಮ ಸೋಷಿಯಲ್ ಮೀಡಿಯಾದ ಹುಡುಗರು ನಿನಗ್ಯಾಕೆ ಉರಿ ಎಂದು ಸಂದೇಶ ಹಾಕಿದ್ದರು.

ಮೋದಿಯವರಂತ ಮಹಾನ್ ನಾಯಕರ ಬಗ್ಗೆ ‌ಕೀಳಾದ ಹೇಳಿಕೆ ನೀಡುವ ಕಾಂಗ್ರೆಸ್ ಸೋಷಿಯಲ್ ಮೀಡಿಯಾದವರು ಎಚ್ಚೆತ್ತುಕೊಳ್ಳ ಬೇಕು ಇಲ್ಲವಾದಲ್ಲಿ ಜನರೇ ಇದಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದರು.

ವರದಿ : ವಿನಯ್ ಕುಮಾರ್ ಹೆಚ್.ಎಮ್

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...