Home ರಾಜ್ಯವಿಮಾನ ಹಾರಾಟ ಆರಂಭದ ಕಾರ್ಯಕ್ರಮದಲ್ಲಿ ರೈತರ ಅಸಮಧಾನ ಸ್ಪೋಟ.

ವಿಮಾನ ಹಾರಾಟ ಆರಂಭದ ಕಾರ್ಯಕ್ರಮದಲ್ಲಿ ರೈತರ ಅಸಮಧಾನ ಸ್ಪೋಟ.

by Reporter Smg
0 comments

ಶಿವಮೊಗ್ಗ : ಇಂದಿನಿಂದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ಯಾನ ಸೇವೆಗಳು ಅಧಿಕೃತವಾಗಿ ಆರಂಭವಾಗಿದೆ‌. ವಿಮಾನ ಹಾರಾಟ ಆರಂಭದ ಕಾರ್ಯಕ್ರಮವು ಏರ್ ಪೋರ್ಟ್ ನಲ್ಲಿ ನಡೆಯುತ್ತಿರುವಾಗ ಸಂಸದ ಬಿ.ವೈ ರಾಘವೇಂದ್ರ ರವರು ನಿಲ್ದಾಣ ನಿರ್ಮಾಣಕ್ಕೆ ಭೂಮಿ ಕೊಟ್ಟ ರೈತರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಸಾಂಕೇತಿಕವಾಗಿ ಕೃಷ್ಣಪ್ಪ ಮತ್ತು ಗೋವಿಂದರಾಜು  ಎಂಬ ಇಬ್ಬರು ರೈತರನ್ನು ಸನ್ಮಾನಿಸಲು ವೇದಿಕೆ ಮೇಲೆ ಆಹ್ವಾನಿಸಿದರು.

ಈ ವೇಳೆ ಕಾಂಗ್ರೆಸ್ ಮುಖಂಡ ವಿಜಯ್ ಕುಮಾರ್(ದನಿ) ವೇದಿಕೆ ಮೇಲೆ ಬಂದು ಇವರಿಬ್ಬರೇನಾ ರೈತರು ಇರೋದು ಎಂದು ಆಕ್ರೋಶ ವ್ಯಕ್ತಪಡಿಸಿದರು ತಕ್ಷಣ ಭದ್ರತಾ ಸಿಬ್ಬಂದಿಯವರು ವಿಜಯ್ ಕುಮಾರ್ ರವರನ್ನು ವಶಕ್ಕೆ ಪಡೆದರು.

ಇನ್ನೊಂದು ಭಾಗದಲ್ಲಿ ರೈತರ ಗುಂಪಿನಿಂದ ಸನ್ಮಾನಕ್ಕೆ ನೀವು ಕರೆದವರು ರೈತರಲ್ಲ ಬ್ರೋಕರ್ ಗಳು ಎಂದು ತಮ್ಮ ಅಸಮಧಾನ ಹೊರ ಹಾಕಿದರು.

ವೇದಿಕೆ ಮೇಲಿಂದ ಸಂಸದ ಬಿ.ವೈ.ರಾಘವೇಂದ್ರ ರೈತರು ಪಕ್ಷ, ಧರ್ಮ, ಜಾತಿಗಳಗಿಂತ ಮಿಗಿಲಾದವರು ಎಂದು ಹೇಳಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಂದ ಇಬ್ಬರಿಗೆ ಸನ್ಮಾನ ಮಾಡಿಸಿದರು.


ವರದಿ – ವಿನಯ್ ಕುಮಾರ್ ಹೆಚ್.ಎಮ್

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...