Home ರಾಜ್ಯಮುಖ್ಯಮಂತ್ರಿಗಳು ಹೊರಡಿಸಿದ ಆದೇಶವನ್ನು ಸ್ವತಃ ಮುಖ್ಯಮಂತ್ರಿಗಳೇ ಉಲ್ಲಂಘನೆ ಮಾಡಿದ್ದಾರೆ… ಏನಿದು ಪ್ರಕರಣ…

ಮುಖ್ಯಮಂತ್ರಿಗಳು ಹೊರಡಿಸಿದ ಆದೇಶವನ್ನು ಸ್ವತಃ ಮುಖ್ಯಮಂತ್ರಿಗಳೇ ಉಲ್ಲಂಘನೆ ಮಾಡಿದ್ದಾರೆ… ಏನಿದು ಪ್ರಕರಣ…

by EDITOR NEWS WARRIORS
0 comments

ಬೆಂಗಳೂರು>ಸೆಪ್ಟೆಂಬರ್> 5: ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಮಹತ್ವದ ಆದೇಶವನ್ನು ನೀಡಿದ ಬಸವರಾಜ್ ಬೊಮ್ಮಾಯಿ ತಾವು ನೀಡಿದ ಆದೇಶವನ್ನು ಸ್ವತಃ ತಾವೇ ಉಲ್ಲಂಘನೆ ಮಾಡಿದ್ದಾರೆ,

ಏನಿದು ಆದೇಶ?

ಸಭೆ-ಸಮಾರಂಭಗಳಲ್ಲಿ, ಸರ್ಕಾರಿ ಕಾರ್ಯಕ್ರಮಗಳಲ್ಲಿ,ಹಾರ,ತುರಾಯಿ, ದುಬಾರಿ ವೆಚ್ಚದ ಉಡುಗೊರೆಗಳನ್ನು ನೀಡುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದರು. ಇದೀಗ ತಾವು ಹೊರಡಿಸಿದ ಆದೇಶವನ್ನು ಸ್ವತಃ ತಾವೇ ಉಲ್ಲಂಘಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಆದೇಶವನ್ನು ಉಲ್ಲಂಘನೆ ಮಾಡಿದರು.


ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಸಂಸ್ಥೆಗಳ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿ, ದುಬಾರಿ ಬೆಲೆಯ ಉಡುಗೊರೆ ನೀಡುವುದನ್ನು ನಿಷೇಧಿಸಿ ಮುಖ್ಯಮಂತ್ರಿಯವರು ಕೆಲ ದಿನಗಳ ಹಿಂದೆ ಆದೇಶ ಹೊರಡಿಸಿದ್ದರು. ಹಾರ, ತುರಾಯಿ ಬದಲಿಗೆ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಬೇಕು ಎಂದು ಆದೇಶ ಹೊರಡಿಸಿದ್ದರು.

ಭಾನುವಾರ ನಡೆದ ‘ಮುಖ್ಯಮಂತ್ರಿಗಳ ರೈತ ವಿದ್ಯಾ ನಿಧಿ’ ಉದ್ಘಾಟನಾ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಯವರೇ ರೇಷ್ಮೆ ಗೂಡುಗಳಿಂದ ತಯಾರಾದ ಬೃಹತ್ ಹಾರ, ಮೈಸೂರು ಪೇಟ, ಶಾಲು ಮತ್ತು ಬೆಳ್ಳಿಯ ಸ್ಮರಣಿಕೆಯೊಂದಿಗೆ ಸನ್ಮಾನಿತರಾದರು. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರನ್ನೂ ಇದೇ ರೀತಿ ಸನ್ಮಾನಿಸಲಾಯಿತು.

ಕೃಷಿ ಸಚಿವ ಬಿ.ಸಿ. ಪಾಟೀಲ ಮತ್ತು ತೋಟಗಾರಿಕೆ ಸಚಿವ ಮುನಿರತ್ನ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರು ಎಲ್ಲರನ್ನೂ ಸನ್ಮಾನಿಸಿದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಸಂಸದರಾದ ಮುನಿಸ್ವಾಮಿ, ಡಾ.ಉಮೇಶ್ ಜಾಧವ್, ಈರಣ್ಣ ಕಡಾಡಿ ವೇದಿಕೆಯಲ್ಲಿದ್ದರು.

ಒಂದು ವೇಳೆ ಯಾವುದಾದರೂ ಅಧಿಕಾರಿಗಳು ಇಂಥ ಆದೇಶವನ್ನು ಉಲ್ಲಂಘನೆ ಮಾಡಿದರೆ ಅಂತಹ ಅಧಿಕಾರಿಗಳ ವಿರುದ್ಧ ಶಿಕ್ಷೆ ಆಗುತ್ತಿತ್ತು. ಆದರೆ ಸ್ವತಃ ಮುಖ್ಯಮಂತ್ರಿಗಳೇ ಉಲ್ಲಂಘನೆ ಮಾಡಿರುವುದರಿಂದ ಶಿಕ್ಷೆಗಿಂತ ಹೆಚ್ಚಾಗಿ ಇನ್ನೊಬ್ಬರು ಇತರ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಇನ್ನುಮುಂದಾದರೂ ಸೂಕ್ಷ್ಮತೆಯಿಂದ ಇದ್ದರೆ ಒಳಿತು.ಇಲ್ಲವಾದರೆ ತಾವು ವಿಧಿಸಿರುವ ಆದೇಶಕ್ಕೆ ಕಿಮ್ಮತ್ತು ಇರುವುದಿಲ್ಲ.

ವರದಿ… ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...