Home ಶಿವಮೊಗ್ಗಬೈಕ್ ಜಾಥಾ ಮೂಲಕ ಜಾಗೃತಿ ಮೂಡಿಸಿದ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ ಕೆ ನೇತೃತ್ವದ ತಂಡ..!

ಬೈಕ್ ಜಾಥಾ ಮೂಲಕ ಜಾಗೃತಿ ಮೂಡಿಸಿದ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ ಕೆ ನೇತೃತ್ವದ ತಂಡ..!

by EDITOR NEWS WARRIORS
0 comments

ಶಿವಮೊಗ್ಗ: ಇಂದು ಬೆಳಗ್ಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ, ಮತ್ತು ಬುಲ್ಸ್ ಆಫ್ ಶಿವಮೊಗ್ಗ, ಬೈಕರ್ಸ್ ಆಫ್ ಶಿವಮೊಗ್ಗ, ರಾಯಲ್ ರೋಲಿಂಗ್ ಮಾಂಕ್ಸ್ ಶಿವಮೊಗ್ಗ, ರೋಡ್ ಥ್ರಿಲ್ಲರ್ಸ್ ಶಿವಮೊಗ್ಗ, ಮಲ್ನಾಡ್ ಟಸ್ಕರ್ಸ್ ಶಿವಮೊಗ್ಗ, ಕೆಟಿಎಂ ಶಿವಮೊಗ್ಗ ಮತ್ತು ಇತರೆ ಕ್ಲಬ್ ಗಳ ಸಹಯೋಗದೊಂದಿಗೆ ಸಾರ್ವಜನಿಕರಲ್ಲಿ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಬೈಕ್ ಜಾಥಾವನ್ನು ಹಮ್ಮಿಕೊಂಡಿದ್ದು, ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜಿ.ಕೆ, ರವರು ಬೈಕ್ ಜಾಥಾದಲ್ಲಿ ಪಾಲ್ಗೊಂಡು, ಜಾಥಾಕ್ಕೆ ಚಾಲನೆ ನೀಡಿದರು.

ಬೈಕ್ ಜಾಥಾವನ್ನು ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಮೈದಾನದಿಂದ ಪ್ರಾರಂಭಿಸಿ ಐಬಿ ವೃತ್ತದ ಮೂಲಕ ಆಲ್ಕೊಳ ವೃತ್ತ, ವಿನೋಬನಗರ ಚೌಕಿ, ಉಷಾ ನರ್ಸಿಂಗ್ ಹೋಂ ವೃತ್ತ, ಮಹಾವೀರ ವೃತ್ತ, ಕರ್ನಾಟಕ ಸಂಘ, ಹೊಳೆ ಬಸ್ ಸ್ಟಾಪ್, ಎಂ.ಆರ್.ಎಸ್ ವೃತ್ತ, ನ್ಯೂ ಮಂಡ್ಲಿ, ಗೋಪಾಳ, ಆಲ್ಕೊಳ ವೃತ್ತ, ಐಬಿ ವೃತ್ತ, ಕುವೆಂಪು ರಸ್ತೆ, ಜುಯಲ್ ರಾಕ್ ಹೋಟೆಲ್ ರಸ್ತೆ, ಗೋಪಿ ವೃತ್ತ, ಅಮೀರ್ ಅಹಮ್ಮದ್ ವೃತ್ತದಿಂದ ಅಶೋಕ ವೃತ್ತದ ಮೂಲಕ ಡಿಎಆರ್ ಮೈದಾನಕ್ಕೆ ಬಂದು ಮುಕ್ತಾಯ ಮಾಡಲಾಯಿತು.

ಬೈಕ್ ಜಾಥಾದಲ್ಲಿ ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಬಾಲರಾಜ್, ಡಿ.ವೈ.ಎಸ್.ಪಿ ಪೊಲೀಸ್ ಉಪಾಧೀಕ್ಷಕರು ಶಿವಮೊಗ್ಗ-ಎ ಉಪ ವಿಭಾಗ, ಪ್ರಭು ಡಿ.ಟಿ, ಡಿ.ವೈ.ಎಸ್.ಪಿ ಪೊಲೀಸ್ ಉಪಾಧೀಕ್ಷಕರು ಡಿಸಿಆರ್.ಬಿ ಶಿವಮೊಗ್ಗ, ಸುರೇಶ್ ಎಂ ಡಿ.ವೈ.ಎಸ್.ಪಿ ಪೊಲೀಸ್ ಉಪಾಧೀಕ್ಷಕರು ಶಿವಮೊಗ್ಗ-ಬಿ ಉಪ ವಿಭಾಗ, ಪ್ರಶಾಂತ್, ಆರ್.ಪಿ.ಐ ಡಿಎಆರ್ ಶಿವಮೊಗ್ಗ, ಸಂತೋಷ್ ಕುಮಾರ್, ಸಿಪಿಐ ಶಿವಮೊಗ್ಗ ಸಂಚಾರ ವೃತ್ತ, ಬೈಕ್ ಕ್ಲಬ್ ಗಳ ಬೈಕ್ ಸವಾರರು, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳು ಭಾಗವಹಿಸಿದ್ದರು.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...