Home ಶಿವಮೊಗ್ಗಶಾಂತಿನಗರದಲ್ಲಿ ಹೊರಗಿನಿಂದ ಬಂದವರಿಂದ ಶಾಂತಿ ಕದಡುವ ಯತ್ನ ಶಾಸಕ ಚನ್ನಬಸಪ್ಪ..! ಪರಿಸ್ಥಿತಿ ತಿಳಿಯಾಗಿದೆ ಭಯಪಡುವ ಅಗತ್ಯತೆ ಇಲ್ಲ ಎಸ್‌ಪಿ ಸ್ಪಷ್ಟನೆ..!

ಶಾಂತಿನಗರದಲ್ಲಿ ಹೊರಗಿನಿಂದ ಬಂದವರಿಂದ ಶಾಂತಿ ಕದಡುವ ಯತ್ನ ಶಾಸಕ ಚನ್ನಬಸಪ್ಪ..! ಪರಿಸ್ಥಿತಿ ತಿಳಿಯಾಗಿದೆ ಭಯಪಡುವ ಅಗತ್ಯತೆ ಇಲ್ಲ ಎಸ್‌ಪಿ ಸ್ಪಷ್ಟನೆ..!

by EDITOR NEWS WARRIORS
0 comments

ಶಿವಮೊಗ್ಗ: ನಗರದ ಶಾಂತಿನಗರ ರಾಗಿಗುಡ್ಡ ಭಾಗದಲ್ಲಿ ಇಂದು ಬೆಳಗ್ಗಿನಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ವಾತಾವರಣ ನಂತರ ಎಸ್ಪಿ ಸ್ಥಳಕ್ಕೆ ಭೇಟಿ ನೀಡಿದ ನಂತರ ವಾತಾವರಣವನ್ನು ತಿಳಿಗೊಳಿಸಿದ್ದರು.

ಆದರೆ ಸಂಜೆ ಮೆರವಣಿಗೆಯ ವೇಳೆಯಲ್ಲಿ ಕಲ್ಲುತುರಾಟ ನಡೆದು ಅನ್ಯ ಕೋಮಿನ ಕೆಲವರ ನಡುವೆ ಪರಸ್ಪರ ವಾಗ್ವಾದ ನಡೆದು ಒಂದಷ್ಟು ಜನಕ್ಕೆ ಗಾಯಗಳಾಗಿವೆ ಅದರಲ್ಲಿ ಪೊಲೀಸರು ಸಹ ಸೇರಿದ್ದಾರೆ.

ಕೂಡಲೇ ಸ್ಥಳದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಲ್ಪಿಸಿತು.ನಂತರ ಜಿಲ್ಲಾಧಿಕಾರಿಗಳು 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಿದ್ದರು.

ಈ ಬಗ್ಗೆ ಸ್ಪಷ್ಟನೆ ನೀಡಿದ ಎಸ್ ಪಿ ಮಿಥುನ್ ಕುಮಾರ್ ಅವರು ಸ್ಥಳದಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಈಗಾಗಲೇ ಸ್ಥಳದಲ್ಲಿ ಜಿಲ್ಲಾಧಿಕಾರಿಗಳು 144 ಸೆಕ್ಷನ್ ಜಾರಿಗೊಳಿಸಿದ್ದು ಸೂಕ್ತ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ ಈಗಾಗಲೇ ಈ ಘಟನೆಗೆ ಸಂಬಂಧಪಟ್ಟಂತೆ ಕೆಲವೊಂದು ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ನಾಲ್ಕರಿಂದ ಐದು ಜನಕ್ಕೆ ಗಾಯಗಳಾಗಿವೆ ಉಳಿದಂತೆ ಯಾವುದೇ ರೀತಿಯ ಗಲಾಟೆಗಳು ನಡೆದಿಲ್ಲ ದಯವಿಟ್ಟು ಯಾರು ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ಸ್ಪಷ್ಟನೆ ನೀಡಿದ್ದಾರೆ.

ಸ್ಥಳಕ್ಕೆ ಶಾಸಕರ ಭೇಟಿ ..!

ಸ್ಥಳಕ್ಕೆ ನಗರ ಶಾಸಕ ಚನ್ನಬಸಪ್ಪ ಭೇಟಿ ನೀಡಿದ್ದು ಎರಡು ಹಬ್ಬಗಳು ಶಾಂತ ರೀತಿಯಿಂದ ನಡೆದಿವೆ ಆದರೆ ರಾಗಿ ಗುಡ್ಡದಲ್ಲಿ ಕಳೆದ ಮೂರು ವರ್ಷಗಳಿಂದ ಇದೇ ತರದ ವಾತಾವರಣ ನಿರ್ಮಾಣವಾಗುತ್ತಿದೆ. ಕಟೌಟ್ ವಿಚಾರಕ್ಕೆ ಈ ಗಲಾಟೆ ನಡೆದಿದೆ ಆದರೆ ಹೊರಗಿನಿಂದ ಬಂದವರಿಂದ ಈ ವಾತಾವರಣ ಸೃಷ್ಟಿಯಾಗಿದೆ ಅವರನ್ನು ಬಿಡಬಾರದು ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು ಸದ್ಯ ಪರಿಸ್ಥಿತಿ ತಿಳಿಯಾಗಿದೆ ಯಾರು ಭಯಪಡುವ ಅಗತ್ಯತೆ ಇಲ್ಲ ಎಂದು ತಿಳಿಸಿದರು.

ರಘುರಾಜ್ ಹೆಚ್‌. ಕೆ..9449553305.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...