Friday, 23 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..!
ಸಿನಿಮಾ

”ಚಿಕ್ಕಿಯ ಮೂಗುತಿ” ಚಿತ್ರದ ಪವರ್ ಫುಲ್ ಟೀಸರ್ ಬಿಡುಗಡೆ ಮಾಡಿದ ಪವರ್ ಸ್ಟಾರ್ ಪತ್ನಿ ಅಶ್ವಿನಿ ಪುನೀತ್. .!

‘ಚಿಕ್ಕಿಯ ಮೂಗುತಿ’ ಚಿತ್ರದ ಪವರ್ ಫುಲ್ ಟೀಸರ್ ಬಿಡುಗಡೆ ಮಾಡಿದ ಪವರ್ ಸ್ಟಾರ್ ಪತ್ನಿ ಅಶ್ವಿನಿ ಪುನೀತ್ ಪವರ್‌ಫುಲ್ ಪಾತ್ರದಲ್ಲಿ ನಟಿ ತಾರಾ: ಹೇಗಿದೆ ನೋಡಿ ‘ಚಿಕ್ಕಿಯ ಮೂಗುತಿ’ ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಭಿನ್ನ ಸಿನಿಮಾ ‘ಚಿಕ್ಕಿಯ ಮೂಗುತಿ’ ದೇವಿಕಾ ಜನಿತ್ರಿ ನಿರ್ದೇಶನದ…

‘ಚಿಕ್ಕಿಯ ಮೂಗುತಿ’ ಚಿತ್ರದ ಪವರ್ ಫುಲ್ ಟೀಸರ್ ಬಿಡುಗಡೆ ಮಾಡಿದ ಪವರ್ ಸ್ಟಾರ್ ಪತ್ನಿ ಅಶ್ವಿನಿ ಪುನೀತ್

ಪವರ್‌ಫುಲ್ ಪಾತ್ರದಲ್ಲಿ ನಟಿ ತಾರಾ: ಹೇಗಿದೆ ನೋಡಿ ‘ಚಿಕ್ಕಿಯ ಮೂಗುತಿ’

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಭಿನ್ನ ಸಿನಿಮಾ ‘ಚಿಕ್ಕಿಯ ಮೂಗುತಿ’

ದೇವಿಕಾ ಜನಿತ್ರಿ ನಿರ್ದೇಶನದ ‘ಚಿಕ್ಕಿಯ ಮೂಗುತಿ’ ಟೀಸರ್ ಔಟ್: ಪವರ್ ಫುಲ್ ಪಾತ್ರದಲ್ಲಿ ನಟಿ ತಾರಾ

ಲವ್ ಸ್ಟೋರಿ, ಕ್ರೈಮ್, ಹಾರರ್ ಸಿನಿಮಾಗಳ ನಡುವೆ ಆಗಾಗ ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ, ವಿನೂತನ ಕಾನ್ಸೆಪ್ಟ್‌ನ ಚಿತ್ರಗಳು ಸಹ ಸದ್ದು ಮಾಡುತ್ತಿರುತ್ತವೆ. ಇದೀಗ ಮತ್ತೊಂದು ಹೊಸ ಬಗೆಯ ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ. ಅದೇ ‘ಚಿಕ್ಕಿಯ ಮೂಗುತಿ’. ದೇವಿಕಾ ಜನಿತ್ರಿ ನಿರ್ದೇಶನದ ಚಿಕ್ಕಿಯ ಮೂಗುತಿ ಸಿನಿಮಾ ಸದ್ಯ ಟೀಸರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಟೀಸರ್ ಬಿಡುಗಡೆ ಮಾಡುವ ಮೂಲಕ ಹೊಸ ನಿರ್ದೇಶಕಿಗೆ ಸಾಥ್ ಕೊಟ್ಟಿದ್ದಾರೆ ಅಶ್ವಿನಿ ಪುನೀತ್ ರಾಜ್ ಕುಮಾರ್ . ಅಪ್ಪು ಹಾಗೂ ಅಶ್ವಿನಿಯವರ ಆತ್ಮೀಯರು ಆಗಿರುವ ದೇವಿಕಾ ನಿರ್ದೇಶದ ಮೊದಲ ಸಿನಿಮಾ ಇದಾಗಿದೆ. ಚಿಕ್ಕಿಯ ಮೂಗುತಿ ಕಾದಂಬರಿ ಆಧಾರಿತ ಸಿನಿಮಾವಾಗಿದ್ದು ವಿಶೇಷ ಎಂದರೆ ದೇವಕಿ ಜನಿತ್ರಿ ಅವರೇ ಬರೆದಿದ್ದ ಕಾದಂಬರಿ ಇದಾಗಿದೆ. ಇನ್ನು ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಅಂದಹಾಗೆ ‘ಚಿಕ್ಕಿಯ ಮೂಗುತಿ’ ಹೆಸರೇ ಹೇಳುವ ಹಾಗೆ ಇದೊಂದು ಮಹಿಳಾ ಪ್ರಧಾನ ಸಿನಿಮಾ. ಹೆಣ್ಣು ಮಕ್ಕಳ ಹೋರಾಟ, ಶೋಷಣೆ ಬಗ್ಗೆ ಇರುವ ಚಿತ್ರ ಇದಾಗಿದೆ. ಹಿರಿಯ ನಟಿ ತಾರಾ ಅನುರಾಧಾ, ಶ್ವೇತಾ ಶ್ವೀವಾತ್ಸವ್, ಭವಾನಿ ಪ್ರಕಾಶ್, ಅವಿನಾಶ್, ತಬಲ ನಾಣಿ, ರಂಗಾಯಣ ರಘು, ಭರತ್ ಬೋಪಣ್ಣ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ. ವಿಶೇಷ ಎಂದರೆ ಈ ಸಿನಿಮಾಗೆ ಹೆಣ್ಣು ಮಕ್ಕಳೇ ಶಕ್ತಿ ಎಂದರೆ ತಪ್ಪಾಗಲ್ಲ. ಯಾಕೆಂದರೆ ನಿರ್ದೇಶಕಿ ಸೇರಿದಂತೆ ಬಹುತೇಕರು ಹೆಣ್ಣು ಮಕ್ಕಳೇ ಸೇರಿಕೊಂಡು ಮಾಡಿರುವ ಸಿನಿಮಾ ಇದಾಗಿದೆ.

ಟೀಸರ್ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ತಾರಾ, ‘ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದಂತೆ ಈ ಸಿನಿಮಾದಲ್ಲೂ ಮಹಿಳೆಯರಿಗೆ ಮೀಸಲಾತಿ ಇದೆ. ಎಲ್ಲರೂ ಹೆಣ್ಣು ಮಕ್ಕಳೆ ಸೇರಿಕೊಂಡು ಮಾಡಿರುವ ಸಿನಿಮಾ, ಅದ್ಭತವಾಗಿ ಸಿನಿಮಾ ಮೂಡಿಬಂದಿ. ದೇವಿಕಾ ಅವರ ಮೊದಲು ಸಿನಿಮಾ ಅಂತ ಅನಿಸುವುದೇ ಇಲ್ಲ, ಉತ್ತಮವಾಗಿ ಮೂಡಿಬಂದಿದೆ’ ಎಂದು ಹೇಳಿದರು. ಇನ್ನು ನಟಿ ಶ್ವೇತಾ ಮಾತನಾಡಿ, ‘ಮಗುವಿಗೆ ಜನ್ಮ ನೀಡಿದ ಬಳಿಕ ನಟನೆ ಮಾಡಿದ ಮೊದಲ ಸಿನಿಮಾ’ ಎಂದು ಹೇಳಿದರು. ಭವಾನಿ ಪ್ರಕಾಶ್ ಕೂಡ ಪಾತ್ರದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ನಿರ್ದೇಶಕಿ ದೇವಿಕಾ ಅವರು ಈ ಮೊದಲು ಕಾಸ್ಟ್ಯೂಮ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದರು. ಅನೇಕ 40ಕ್ಕೂ ಅಧಿಕ ಕಾದಂಬರಿಗಳನ್ನು ಬರೆದಿದ್ದಾರೆ. ಇದೀಗ ಅವರ ಒಂದು ಕಾದಂಬರಿ ಚಿಕ್ಕಿಯ ಮೂಗುತಿ ಸಿನಿಮಾವಾಗಿ ತೆರೆ ಮೇಲೆ ಬರಲು ಸಜ್ಜಾಗಿದೆ. ಸದ್ಯ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿಕ್ಕಿಯ ಮೂಗುತಿ ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷ ತೆರೆಗೆ ಬರುವ ಸಾಧ್ಯತೆ ಇದೆ. ಸಿನಿಮಾದ ಟೀಸರ್ ಇದೇ ತಿಂಗಳು 20ಕ್ಕೆ ಪಿಆರ್‌ಕೆ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಲಿದೆ.

ಚಿಕ್ಕಿಯ ಮೂಗುತಿ ಚಿತ್ರ ಜನಿತ್ರಿ ಪ್ರೋಡಕ್ಷನ್ ನಲ್ಲಿ ನಿರ್ಮಾಣವಾಗಿದೆ, ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತ, ವೆಂಕಟೇಶ್ ಅವರು ಕ್ಯಾಮೆರಾ ವರ್ಕ್ ಜೊತೆಗೆ ಎಡಿಟಿಂಗ್ ಕೂಡ ಮಾಡಿದ್ದಾರೆ.

EDITOR NEWS WARRIORS