Home ತೀರ್ಥಹಳ್ಳಿThirthalli: ಸಹಕಾರಿ ರತ್ನ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ/ ಮಂಜುನಾಥ್ ಗೌಡರಿಗೆ ತವರಿನಲ್ಲಿ ಅದ್ದೂರಿ ಸನ್ಮಾನಕ್ಕೆ ಸಿದ್ಧತೆ..!

Thirthalli: ಸಹಕಾರಿ ರತ್ನ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ/ ಮಂಜುನಾಥ್ ಗೌಡರಿಗೆ ತವರಿನಲ್ಲಿ ಅದ್ದೂರಿ ಸನ್ಮಾನಕ್ಕೆ ಸಿದ್ಧತೆ..!

by EDITOR NEWS WARRIORS
0 comments

ತೀರ್ಥಹಳ್ಳಿ: ನಾಳೆ ತೀರ್ಥಹಳ್ಳಿಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ ಆರ್ ಎಂ ಮಂಜುನಾಥ ಗೌಡ ಅವರಿಗೆ ತೌರೂರ ಸಂಮಾನ ಕಾರ್ಯಕ್ರಮಕ್ಕೆ ಅದ್ದೂರಿ ತಯಾರಿ ನಡೆಯುತ್ತಿದ್ದು.

ಈಗಾಗಲೇ ಇದರ ಸಂಬಂಧವಾಗಿ ಮಂಜುನಾಥ್ ಗೌಡರ ಅಭಿಮಾನಿಗಳು ಹಿತೈಷಿಗಳು ಬಂಧುಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಕಾರ್ಯಕರ್ತರು ಒಗ್ಗಟ್ಟಾಗಿ 15 ದಿನದಿಂದ ಈ ಕಾರ್ಯದಲ್ಲಿ ತೊಡಗಿದ್ದಾರೆ ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಕಳೆದ ತಿಂಗಳ ಆರನೇ ತಾರೀಕು ಈ ಕಾರ್ಯಕ್ರಮ ನಡೆಯಬೇಕಿತ್ತು ಆದರೆ ಇಡಿ ಅಧಿಕಾರಿಗಳು ದಿಡೀರ್ ದಾಳಿ ನಡೆಸಿದ್ದರಿಂದ ಆ ಕಾರ್ಯಕ್ರಮ ಮುಂದೂಡಲಾಗಿತ್ತು.

ಈಗ ಅದೇ ಆರನೇ ತಾರೀಕು ಮತ್ತೆ ಕಾರ್ಯಕ್ರಮ ನಡೆಸಲು ಮುಂದಾಗಿದ್ದು ಅದ್ದೂರಿ ತಯಾರಿ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇದು ತೀರ್ಥಹಳ್ಳಿಯ ರಾಜಕೀಯಕ್ಕೆ ಹಾಗೂ ಮುಂಬರುವ ಚುನಾವಣೆಗಳಿಗೆ ದಿಕ್ಸೂಚಿ ಆಗಲಿದೆಯಾ ಎನ್ನುವ ಗುಸು-ಗುಸು ಎಲ್ಲೆಡೆ ಹರಿದಾಡುತ್ತಿದೆ.

ಕಿಮ್ಮನೆ ರತ್ನಾಕರ್ ಹಾಗೂ ಮಂಜುನಾಥ್ ಗೌಡರು ಒಟ್ಟಿಗೆ ಸೇರಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಸ್ವತಃ ಕಿಮ್ಮನೆ ರತ್ನಾಕರ್ ಅವರೇ ಮುಂದಾಳತ್ವ ವಹಿಸಿರುವುದು ಎಲ್ಲರಿಗೂ ಅಚ್ಚರಿತಂದಿದೆ.

ಏಕೆಂದರೆ ಹಿಂದೆ ಹಲವು ಸಾರಿ ಇವರ ನಡುವೆ ಶೀತಲ ಸಮರ ಏರ್ಪಾಡಾಗಿತ್ತು ಆದರೆ ಈಗ ಕಿಮ್ಮನೆ ರತ್ನಾಕರವರೇ ಮಂಜುನಾಥ್ ಗೌಡರಿಗೆ ಸಂಪೂರ್ಣವಾಗಿ ಬೆಂಬಲ ಸೂಚಿಸಿದ್ದು ತೀರ್ಥಹಳ್ಳಿ ಕಾಂಗ್ರೆಸ್ ಪಾಳ್ಯದಲ್ಲಿ ಹರ್ಷ ವ್ಯಕ್ತವಾಗಿದೆ.

ನಾಳಿನ ಕಾರ್ಯಕ್ರಮ ಕುತೂಹಲ ಕೆರಳಿಸಿದ್ದು ಸಾಕಷ್ಟು ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ.

ರಘುರಾಜ್ ಹೆಚ್‌.ಕೆ.9449553305.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...