Home ಶಿವಮೊಗ್ಗShivamogga Traffic police: ಪಶ್ಚಿಮ ಸಂಚಾರಿ ಠಾಣೆ ಪಿಎಸ್ಐ ತಿರುಮಲೇಶ್ ಉತ್ತಮ ಕಾರ್ಯ ವೀಲಿಂಗ್ ಸವಾರರಿಗೆ ನ್ಯಾಯಾಲಯದಿಂದ ಬಿತ್ತು ದಂಡ..!

Shivamogga Traffic police: ಪಶ್ಚಿಮ ಸಂಚಾರಿ ಠಾಣೆ ಪಿಎಸ್ಐ ತಿರುಮಲೇಶ್ ಉತ್ತಮ ಕಾರ್ಯ ವೀಲಿಂಗ್ ಸವಾರರಿಗೆ ನ್ಯಾಯಾಲಯದಿಂದ ಬಿತ್ತು ದಂಡ..!

by EDITOR NEWS WARRIORS
0 comments

ಶಿವಮೊಗ್ಗ: ನಗರದಲ್ಲಿ ಇತ್ತೀಚಿಗೆ ಬೈಕ್ ವೀಲಿಂಗ್ ಸವಾರರ ಹಾವಳಿ ಮಿತಿಮೀರಿದ್ದು ಟ್ರಾಫಿಕ್ ಪೊಲೀಸ್ ನವರು ಇದಕ್ಕೆ ಕಡಿವಾಣ ಹಾಕುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ತಮ್ಮ ಜೀವಕ್ಕೆ ಅಪಾಯ ಮಾಡಿಕೊಳ್ಳುವುದರ ಜೊತೆಗೆ ಬೇರೆಯವರಿಗೂ ತೊಂದರೆ ನೀಡುತ್ತಿರುವವರ ಇಂಥವರ ವಿರುದ್ಧ ಶಿವಮೊಗ್ಗ ಜಿಲ್ಲಾ ಟ್ರಾಫಿಕ್ ಪೊಲೀಸ್ ನವರು ಸಿಡಿದೆದ್ದಿದ್ದು ಎಲ್ಲೆಡೆ ಪ್ರಕರಣಗಳನ್ನು ದಾಖಲು ಮಾಡುತ್ತಿದ್ದಾರೆ. ಆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಘನ ನ್ಯಾಯಾಲಯ ಕೂಡ ಇಂತಾ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡಿದ್ದು ನಿರಂತರವಾಗಿ ದಂಡ ವಿಧಿಸುತ್ತಿದ್ದಾರೆ. ಅಂತದ್ದೇ ಒಂದು ಪ್ರಕರಣದಲ್ಲಿ ದಿನಾಂಕ15/08/2023 ರಂದು ಬೆಳಿಗ್ಗೆ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ವಿನೋಬನಗರ ಡಿ.ವಿ.ಎಸ್. ಶಾಲೆ ಮುಂಭಾಗದ 100 ಅಡಿ ರಸ್ತೆಯಲ್ಲಿ ಫೈಸಲ್ ಅಹ್ಮದ್ ಮತ್ತು ಸೂಫಿಯಾನ್ ಖಾನ್ ಎಂಬ ಯುವಕರಿಬ್ಬರು ಎರಡು YAMAHA RX ಬೈಕಿಗಳಲ್ಲಿ ಅತಿ ವೇಗ, ಅಜಾಗರುಕತೆ ಮತ್ತು ಅಪಾಯಕಾರಿ ರೀತಿಯಲ್ಲಿ ಸಾರ್ವಜನಿಕರ ಮತ್ತು ತನ್ನ ಪ್ರಾಣಕ್ಕೆ ಹಾನಿಯಾಗುವಂತೆ ವ್ಹೀಲಿಂಗ್ ಮಾಡುತ್ತಿದ್ದು,ಈ ಬಗ್ಗೆ ಗುನ್ನೆ ಸಂಖ್ಯೆ 0107/2023 ಕಲಂ 279 ಐಪಿಸಿ, 184, 189, 177 ಐಎಂವಿ ಕಾಯ್ದೆ ಮತ್ತು 51 ಸಿಎಂವಿ ರೂಲ್ ರೀತ್ಯಾ ಪ್ರಕರಣ ದಾಖಲಿಸಿಕೊಂಡಿರುತ್ತಾರೆ

ಶಿವಮೊಗ್ಗ ಪಶ್ಚಿಮ ಸಂಚಾರಿ ಠಾಣೆಯ ಪಿಎಸ್ಐ ಆದ ತಿರುಮಲೇಶ್ ಅವರು ಈ ಪ್ರಕರಣದ ತನಿಖಾಧಿಕಾರಿಗಳಾಗಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೈಕ್ ಗಳ ಚಾಲಕರು & ಮಾಲೀಕ ಸೇರಿ 3 ಜನ ಆರೋಪಿತರ ವಿರುದ್ದ ಘನ ನ್ಯಾಯಾಲಯಕ್ಕೆ ದೋಷರೋಪಣ ಪತ್ರವನ್ನು ಸಲ್ಲಿಸಿದರು. ಘನ ನ್ಯಾಯಾಲಯದಲ್ಲಿ ಕಿರಣ್ ಕುಮಾರ್ ಸಹಾಯಕ ಸರ್ಕಾರಿ ಅಭಿಯೋಜಕರು ಪ್ರಕರಣವಾದ ಮಂಡಿಸಿದ್ದು, ಘನ 3ನೇ ಎಸಿಜೆ & ಜೆಎಂಎಫ್ ಸಿ, ಶಿವಮೊಗ್ಗ, ನ್ಯಾಯಾಲಯದಲ್ಲಿಪ್ರಕರಣದ ವಿಚಾರಣೆ ನಡೆದಿದ್ದು, ಪ್ರಕರಣದ ಆರೋಪಿತರ ವಿರುದ್ಧ ಆರೋಪ ದೃಢ ಪಟ್ಟ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಧೀಶರಾದ ಮಾಯಪ್ಪ ರವರು ದಿನಾಂಕ:-06/12/2023ರಂದು ಆರೋಪಿ 1) ಫೈಸಲ್ ಅಹ್ಮದ್, 20 ವರ್ಷ, ಇಲಿಯಾಸ್ ನಗರ ಶಿವಮೊಗ್ಗ ಟೌನ್ ಈತನಿಗೆ 11,000 ರೂ, ದಂಡ, 2) ಸೂಫಿಯಾನ್ ಖಾನ್, 21 ವರ್ಷ ಟ್ಯಾಂಕ್ ಮೊಹಲ್ಲಾ , ಶಿವಮೊಗ್ಗ ಟೌನ್ ಈತನಿಗೆ 8000 ರೂ ದಂಡ ಮತ್ತು ಬೈಕಿನ ಆರ್ ಸಿ ಮಾಲೀಕನಾದ 3) ಮೊಹಮ್ಮದ್ ಸೈಫುಲ್ಲಾ, 50 ವರ್ಷ, ಇಲಿಯಾಸ್ ನಗರ ಶಿವಮೊಗ್ಗ ಟೌನ್ ಈತನಿಗೆ 4500 ರೂ ದಂಡ ವಿಧಿಸಿ ಆದೇಶ ನೀಡಿರುತ್ತಾರೆ.

ಇನ್ನು ಮುಂದಾದರೂ ವೀಲಿಂಗ್ ಮಾಡುವ ಬೈಕ್ ಸವಾರರು ಎಚ್ಚೆತ್ತುಕೊಂಡು ತಮಗೂ ಸಾಮಾಜಿಕ ಜವಾಬ್ದಾರಿ ಇದೆ ಎಂದು ಅರಿತುಕೊಂಡು ಇದ್ದರೆ ಒಳಿತು.

ರಘುರಾಜ್ ಹೆಚ್‌. ಕೆ.9449553305.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...