Home ರಾಜ್ಯಭದ್ರಾವತಿ ಪೋಲಿಸರ ಭರ್ಜರಿ ಬೇಟೆ ಕಳುವಾಗಿದ್ದ 14 ಬೈಕ್ ಗಳ ವಶ..!

ಭದ್ರಾವತಿ ಪೋಲಿಸರ ಭರ್ಜರಿ ಬೇಟೆ ಕಳುವಾಗಿದ್ದ 14 ಬೈಕ್ ಗಳ ವಶ..!

by EDITOR NEWS WARRIORS
0 comments

ಭದ್ರಾವತಿ : ತಾಲೂಕಿನಲ್ಲಿ ವರದಿಯಾದ ವಾಹನ ಕಳವು ಪ್ರಕರಣಗಳಲ್ಲಿ ಆರೋಪಿ ಮತ್ತು ಕಳುವಾದ ಬೈಕ್ ಗಳ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ ಕೆ ಅನೀಲ್ ಕುಮಾರ್ ಭೂಮರೆಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ,

ನಾಗರಾಜ ಪೊಲೀಸ್ ಉಪಾಧೀಕ್ಷರು ಭಧ್ರಾವತಿ ಉಪವಿಭಾಗ ರವರ ಮೇಲ್ವಿಚಾರಣೆಯಲ್ಲಿ ಶ್ರೀಶೈಲ್ ಕುಮಾರ್* ಸಿಪಿಐ ನಗರ ವೃತ್ತ, ಜಗದೀಶ ಹಂಚಿನಾಳ್, ಪಿಐ ಗ್ರಾಮಾಂತರ ಪೊಲೀಸ್ ಠಾಣೆ, ಶ್ರೀಮತಿ ನಾಗಮ್ಮ ಪಿಐ ಪೇಪರ್ ಟೌನ್ ಠಾಣೆ, ಲಕ್ಷ್ಮಿಪತಿ ಪಿ. ಐ ಹೊಳೆಹೊನ್ನೂರು ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ ಸುರೇಶ ಪಿ.ಎಸ್.ಐ ಹೊಳೆಹೊನ್ನೂರು, ರಮೇಶ ಪಿ.ಎಸ್.ಐ ನ್ಯೂ ಟೌನ್ ಪೊಲೀಸ್ ಠಾಣೆ, ಚಂದ್ರಶೇಖರ್ ಎ.ಎಸ್.ಐ, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಸಿಬ್ಬಂಧಿಗಳಾದ ಹೆಚ್.ಸಿ ನವೀನ್, ನ್ಯೂಟೌನ್ ಪೊಲೀಸ್ ಠಾಣೆ, ಚನ್ನಕೇಶವ, ಭದ್ರಾವತಿ ಹಳೇನಗರ ಪೊಲೀಸ್ ಠಾಣೆ, ನಾಗರಾಜ್, ಪೇಪರ್ ಟೌನ್ ಪೊಲೀಸ್ ಠಾಣೆ, ಪಿಸಿ ಆದರ್ಶ, ಹೊಸಮನೆ ಪೊಲೀಸ್ ಠಾಣೆ ರವರನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿರುತ್ತದೆ.

ಸದರಿ ತನಿಖಾ ತಂಡವು ದಿನಾಂಕಃ 16-12-2023 ರಂದು ನ್ಯೂ ಟೌನ್ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0209/2023 ಕಲಂ 379 ಐ.ಪಿ.ಸಿ ಪ್ರಕರಣದಲ್ಲಿ ದ್ವಿಚಕ್ರ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ 1) ಅಬ್ದುಲ್ ಕರೀಂ @ ಕರೀಂ @ ಮನ್ನಾ, 27 ವರ್ಷ, ಸಿದ್ದಾಫುರ ಹೊಸೂರು, ಭಧ್ರಾವತಿ ಮತ್ತು 2) ಅರ್ಷೀಲ್ ಪಾಷಾ @ ಹರ್ಷೀಲ್, 34 ವರ್ಷ, ಸಿದ್ದಾಫುರ ಹೊಸೂರು ಭದ್ರಾವತಿ ರವರನ್ನು ದಸ್ತಗಿರಿ ಮಾಡಿ ಆರೋಪಿತರಿಂದ ನ್ಯೂಟೌನ್ ಪೊಲೀಸ್ ಠಾಣೆಯ 7, ಹೊಸಮನೆ ಪೊಲೀಸ್ ಠಾಣೆಯ 2, ಪೇಪರ್ ಟೌನ್ ಪೊಲೀಸ್ ಠಾಣೆಯ 1, ದೊಡ್ಡಪೇಟೆ ಪೊಲೀಸ್ ಠಾಣೆಯ 1, ತರೀಕೆರೆ ಪೊಲೀಸ್ ಠಾಣೆಗೆ ಸೇರಿದ 1 ಪ್ರಕರಣ ಸೇರಿ ಒಟ್ಟು 12 ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣಗಳಿಗೆ ಸಂಬಂದಿಸಿದ 12 ಬೈಕ್ ಗಳು ಹಾಗೂ ಕೃತ್ಯಕ್ಕೆ ಬಳಸಲಾದ 2 ಬೈಕ್ ಗಳು ಸೇರಿ ಅಂದಾಜು ಮೌಲ್ಯ 5,20,000/- ರೂಗಳ, 14 ಬೈಕ್ ಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ.

ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...