Home ರಾಜ್ಯElection alert:ಮತದಾನ ಪ್ರಕ್ರಿಯೆಯಲ್ಲಿ “ನಗರ ವಾಸಿಗಳ ನಿರಾಸಕ್ತಿ” ..!

Election alert:ಮತದಾನ ಪ್ರಕ್ರಿಯೆಯಲ್ಲಿ “ನಗರ ವಾಸಿಗಳ ನಿರಾಸಕ್ತಿ” ..!

by EDITOR NEWS WARRIORS
0 comments

ವಿಷಯ: “ಮತದಾನ ಪ್ರಕ್ರಿಯೆಯಲ್ಲಿ ನಗರ ವಾಸಿಗಳ ನಿರಾಸಕ್ತಿ” (Urban apathy) ವಿಷಯದ ಕುರಿತು ಕಿರುಚಿತ್ರ (Short Video) ವನ್ನು ಚಿತ್ರೀಕರಣಕ್ಕೆ ಅವಕಾಶ.

ಕಳೆದ ಬಾರಿಯ ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ- 2023 ರ ಚುನಾವಣೆಯಲ್ಲಿ ಶೇಕಡವಾರು ಮತದಾನ ಪ್ರಮಾಣವು ರಾಜ್ಯ ಮಟ್ಟಕ್ಕೆ ಹೋಲಿಕೆ ಮಾಡಿದಲ್ಲಿ ನಗರ ಪ್ರದೇಶಗಳಲ್ಲಿ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಗಳ ವಿಧಾನ ಸಭಾ ಕ್ಷೇತ್ರಗಳಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ದಾಖಲಾಗಿರುವುದು ಕಂಡುಬರುತ್ತದೆ.

ಈ ನಿಟ್ಟಿನಲ್ಲಿ ಭಾರತ ಚುನಾವಣಾ ಆಯೋಗವು ವಿಶೇಷವಾಗಿ ಮತದಾನ ಪ್ರಕ್ರಿಯೆಯಲ್ಲಿ ನಗರ ವಾಸಿಗಳ ನಿರಾಸಕ್ತಿಗೆ (Urban apathy) ಕಾರಣ ಹಾಗೂ ನಗರ ಪ್ರದೇಶಗಳ ಕ್ಷೇತ್ರಗಳಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಒಂದು ನಿಮಿಷದೊಳಗಿನ ಕಿರುಚಿತ್ರ (Short Video) ಚಿತ್ರೀಕರಿಸಲು ತೀರ್ಮಾನಿಸಿರುತ್ತದೆ.

ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಮ್ಮ ಜಿಲ್ಲೆಗಳಲ್ಲಿರುವ ಶಾಲಾ/ಕಾಲೇಜುಗಳಲ್ಲಿನ ಮತದಾರರ ಸಾಕ್ಷರತಾ ಸಂಘಗಳ ಮುಖೇನ, ಎಲ್ಲಾ ಸಾರ್ವಜನಿಕರು ಮುಕ್ತವಾಗಿ ದಿನಾಂಕ: 10.01.2024 ರೊಳಗಾಗಿ ಭಾಗವಹಿಸಿ ವಿಡಿಯೋ ಚಿತ್ರೀಕರಿಸಿ ಸಲ್ಲಿಸುವಂತೆ ಹಾಗೂ ಪ್ರತಿ ಜಿಲ್ಲೆಯಿಂದ ಪ್ರಥಮ ಮತ್ತು ದ್ವಿತೀಯ, ತೃತೀಯ ಸ್ಥಾನ ಪಡೆದ ಕಿರುಚಿತ್ರ (Short Video) ಗಳಿಗೆ ಈ ಕೆಳಕಂಡಂತೆ

1)ಪ್ರಥಮ ಸ್ಥಾನ Rs 5,000/-

2)ದ್ವಿತೀಯ ಸ್ಥಾನ Rs 3,000/-

3)ತೃತೀಯ ಸ್ಥಾನ Rs 2,000/-

ನಗದು ಬಹುಮಾನ ಘೋಷಿಸಿ, ರಾಷ್ಟ್ರೀಯ ಮತದಾರರ ದಿನಾಚರಣೆ-2024 ರ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಿಂದ ಪ್ರಮಾಣ ಪತ್ರ ವಿತರಿಸಲು ಕ್ರಮ ವಹಿಸುವಂತೆ,-ಅಪರ ಮುಖ್ಯ ಚುನಾವಣಾಧಿಕಾರಿ ಸಿ.ಆ.ಸು.ಇಲಾಖೆ (ಚುನಾವಣೆಗಳು), ಬೆಂಗಳೂರು ಪತ್ರಿಕಾ ಪ್ರಕಟಣೆ ಮೂಲಕ ಜಾಗೃತಿ ಮೂಡಿಸುವಂತೆ ಕೋರಿದ್ದಾರೆ.

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!