Wednesday, 21 October 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..!
ರಾಜ್ಯ

ಶ್ರೀಕಾಂತ್ ಪೂಜಾರಿ ಬಂಧಿಸದೆ ಬಿಟ್ಟರೆ ಶ್ರೀರಾಮಚಂದ್ರನು ಕ್ಷಮಿಸಲಾರ ಮುಖ್ಯಮಂತ್ರಿ ಸಿದ್ದರಾಮಯ್ಯ..!

ಹುಬ್ಬಳ್ಳಿ: 1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ರಾಮ ಜನ್ಮ ಭೂಮಿ ಹೋರಾಟದ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು…

ಹುಬ್ಬಳ್ಳಿ: 1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ರಾಮ ಜನ್ಮ ಭೂಮಿ ಹೋರಾಟದ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ ಎಂದಿದ್ದಾರೆ.

ಅಕ್ರಮ ಸಾರಾಯಿ ಮಾರಾಟ, ದೊಂಬಿ, ಮಟಕಾ, ಜೂಜಾಟ ಮುಂತಾದ 16 ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಪರವಾಗಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಬಿಜೆಪಿ ನಾಯಕರು ಈತನ ಎಲ್ಲಾ ಅಪರಾಧ ಕೃತ್ಯಗಳಿಗೆ ತಮ್ಮ ಪಕ್ಷದ ಬೆಂಬಲವಿದೆ ಎಂಬುದನ್ನು ಬಹಿರಂಗವಾಗಿ ಹೇಳಲಿ ಅಥವಾ ಪ್ರತಿಭಟನೆ ಕೈಬಿಟ್ಟು ಸಾರ್ವಜನಿಕವಾಗಿ ಕ್ಷಮೆ ಕೋರಲಿ ಎಂದು ಒತ್ತಾಯಿಸಿದ್ದಾರೆ.

ಕಳೆದ 2023ನೇ ಸಾಲಿನಲ್ಲಿ ಹುಬ್ಬಳ್ಳಿ – ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ, ಕಳ್ಳತನ, ಸುಲಿಗೆ, ವಂಚನೆ, ದೊಂಬಿ ಮುಂತಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಎಲ್.ಪಿ.ಸಿ ( ಕಾನೂನು ವಿಚಾರಣಾ ಪ್ರಮಾಣಪತ್ರ ) ಪ್ರಕರಣಗಳಲ್ಲಿ ಒಟ್ಟು 36 ಜನರನ್ನು ದಸ್ತಗಿರಿ ಮಾಡಲಾಗಿದೆ. ಇದರಲ್ಲಿ ಶ್ರೀಕಾಂತ ಪೂಜಾರಿ 32ನೆಯ ವ್ಯಕ್ತಿ. ಈತನನ್ನು ಕರಸೇವಕನೆಂಬ ಕಾರಣಕ್ಕೆ ಹೊರಗಡೆ ಬಿಡಬೇಕೋ? ಅಥವಾ ಆರೋಪಿ ಎಂಬ ಕಾರಣಕ್ಕೆ ಬಂಧಿಸಬೇಕೋ?ಎಂದು ಕೇಳಿದ್ದಾರೆ.


ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ನಮ್ಮ ಸರ್ಕಾರದ ವಿರುದ್ಧವಲ್ಲ, ದೇಶದ ಕಾನೂನು ಮತ್ತು ಸಂವಿಧಾನದ ವಿರುದ್ಧ. ಅಪರಾಧ ಕೃತ್ಯಗಳಲ್ಲಿ ತೊಡಗುವವರು ಧರ್ಮರಕ್ಷಕರು ಎಂದು ಹೇಳಿಕೊಂಡು ಕೊಲೆ, ಸುಲಿಗೆಗಳಿಗೆ ಇಳಿದರೆ ಅದನ್ನೂ ಬಿಜೆಪಿ ನಾಯಕರು ಬೆಂಬಲಿಸುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.

ರಾಮಮಂದಿರದ ಉದ್ಘಾಟನೆ ವೇಳೆ ಶ್ರೀಕಾಂತ ಪೂಜಾರಿಯ ಬಂಧನವಾಗಿರುವುದು ಕಾಕತಾಳೀಯ ಅಷ್ಟೆ. ಹಳೆಯ ಪ್ರಕರಣಗಳನ್ನು ಪರಿಶೀಲನೆ ನಡೆಸುವ ವೇಳೆ ಪೊಲೀಸರು ಇತರೆ 36 ಜನರ ಜೊತೆಗೆ ಇವರನ್ನು ಕೂಡ ಬಂಧಿಸಿದ್ದಾರೆ. ಇದರಲ್ಲಿ ಪ್ರತೀಕಾರವೂ ಇಲ್ಲ, ತುಷ್ಟೀಕರಣವೂ ಇಲ್ಲ. ಕಾನೂನು ಪಾಲನೆ ಮಾಡಬೇಕು, ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

EDITOR NEWS WARRIORS