Home ರಾಜ್ಯಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪೊಲೀಸರಿಗೆ ಪಂಚ ಘೋಷಣೆಗಳು..!ಬಿಗ್ ಗಿಫ್ಟ್ ನೀಡಿದ ಗ್ಯಾರಂಟಿ ಸರ್ಕಾರ..!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪೊಲೀಸರಿಗೆ ಪಂಚ ಘೋಷಣೆಗಳು..!ಬಿಗ್ ಗಿಫ್ಟ್ ನೀಡಿದ ಗ್ಯಾರಂಟಿ ಸರ್ಕಾರ..!

by EDITOR NEWS WARRIORS
0 comments

ಬೆಂಗಳೂರು: ನಿನ್ನೆ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಪೊಲೀಸರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಮುಖ್ಯಮಂತ್ರಿ ಮಾತನಾಡುತ್ತಾ,ಪೊಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಫ್ರೀ ಹ್ಯಾಂಡ್ ಕೊಟ್ಟಿದೆ. ಪೊಲೀಸರ ಕೆಲಸದಲ್ಲಿ ಮೂಗು ತೂರಿಸಬಾರದು ಎನ್ನುವುದು ನನ್ನ ಬದ್ಧತೆ. ಆದರೆ ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದು ದುರುಪಯೋಗ ಆಗಬಾರದು. ಅದು ಜನರಿಗೆ ಅನುಕೂಲ ಆಗುವಂತಿರಬೇಕು. ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಡ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ಆರೋಪ ಪಟ್ಟಿ ಸಲ್ಲಿಕೆಯಾಗಬೇಕು ಎಂದು ತುಂಬಾ ಭಾಷಣದಲ್ಲಿ ತಿಳಿಸಿದ್ದಾರೆ.

ಪೊಲೀಸ್‌ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪಂಚ ಘೋಷಣೆಗಳು :

  • ರಾಜ್ಯದಲ್ಲಿ ಭವ್ಯವಾದ ಸುಸಜ್ಜಿತ ಸುವರ್ಣ ಪೊಲೀಸ್ ಭವನ ನಿರ್ಮಾಣ. ಇದಕ್ಕಾಗಿ ಬಜೆಟ್ ನಲ್ಲಿ ಹಣ ನಿಗದಿ.
  • ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ವಿತರಣೆ.
  • ರಾಜ್ಯದ ಎಲ್ಲಾ ಪೊಲೀಸರ ವೈದ್ಯಕೀಯ ವೆಚ್ಚ ರೂ,1,000 ದಿಂದ 1,500 ರೂ.ಗೆ ಹೆಚ್ಚಳ.
  • CEN ಠಾಣಾಧಿಕಾರಿಗಳ ಹುದ್ದೆಯನ್ನು ACP ಮತ್ತು DCP ಮಟ್ಟಕ್ಕೆ ಉನ್ನತೀಕರಣ ಮಾಡುವುದು.
  • ಬೆಂಗಳೂರು ನಗರದಲ್ಲಿ 8 ಅಡಿಷನಲ್ DCP ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಜಿಸುವುದು ಸೇರಿದಂತೆ,
  • ಕರ್ನಾಟಕ ರಾಜ್ಯವನ್ನು ಡ್ರಗ್ ಮುಕ್ತ ಗೊಳಿಸುವ ದಿಕ್ಕಿನಲ್ಲಿ ಪರಿಣಾಮಕಾರಿ ಕ್ರಮ ಕೈಗೊಳ್ಳುವುದು.
  • ಹೀಗೆ ಬಹು ಮುಖ್ಯ ಪಂಚ ಘೋಷಣೆಗಳನ್ನು ಮುಖ್ಯಮಂತ್ರಿ ಮಾಡಿದ್ದು ಘೋಷಣೆಗಳು ಘೋಷಣೆಗಳಾಗಿ ಉಳಿಯುತ್ತವೆಯೋ..? ಅಥವಾ ಅಧಿಕಾರದ ಅವಧಿಯಲ್ಲಿ ಕಾರ್ಯರೂಪಕ್ಕೆ ಬರುತ್ತಾ ಕಾದುನೋಡಬೇಕು.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...