Home ಶಿವಮೊಗ್ಗಸಾಹಿತ್ಯ ಕ್ಷೇತ್ರದಲ್ಲಿ ಕೆಎಸ್ ನರಸಿಂಹಸ್ವಾಮಿ ಕೊಡುಗೆ ಅಪಾರ..!

ಸಾಹಿತ್ಯ ಕ್ಷೇತ್ರದಲ್ಲಿ ಕೆಎಸ್ ನರಸಿಂಹಸ್ವಾಮಿ ಕೊಡುಗೆ ಅಪಾರ..!

by EDITOR NEWS WARRIORS
0 comments

ಶಿವಮೊಗ್ಗ: ಸುಗಮ ಸಂಗೀತ ಕ್ಷೇತ್ರದ ಸಾಹಿತ್ಯ ಲೋಕದಲ್ಲಿ ನಾಡಿನ ಸುಪ್ರಸಿದ್ದ ಪ್ರೇಮ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಕೊಡುಗೆ ಅಪಾರ. ಅವರ ಪ್ರತಿಯೊಂದು ಕವನಗಳು ನಾಡಿನ ಜನಮಾನಸವನ್ನು ಗೆದ್ದಿದೆ ಎಂದು ಪಿ.ಕಾಳಿಂಗರಾವ್ ಮೊಮ್ಮಗ, ಹಿನ್ನಲೆ ಗಾಯಕ, ನಟ ರಾಜೇಶ್ ಶಾನಭಾಗ್ ಅಭಿಪ್ರಾಯಪಟ್ಟರು.
ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಕನ್ನಡ ನಾಡಿನ ಸುಪ್ರಸಿದ್ಧ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಜನ್ಮದಿನದ ಪ್ರಯುಕ್ತ ಅವರ ರಚನೆಯ ಗೀತ ಗಾಯನ “ಗಾನ ಮಲ್ಲಿಗೆ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಲ್ಲ ವಯಸ್ಸಿನ ಕೇಳುಗರಿಗೆ ಕವನಗಳು ತಲುಪಿವೆ. ಹಾಡುವುದಕ್ಕೂ ತುಂಬಾ ಸಂತೋಷ ನೀಡಬಲ್ಲ ಸಾಹಿತ್ಯ ಎಂದು ತಿಳಿಸಿದರು.
ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ಶಾಂತಾ ಎಸ್.ಶೆಟ್ಟಿ ಮಾತನಾಡಿ, ನಾಡಿನಲ್ಲಿ ವಿಶೇಷ ಸಾಧನೆ ಮಾಡಿದ ಕವಿಗಳ ತಂಡ ಇದ್ದು, ರಚನೆಗಳ ಕೇಳುವ ಜತೆಯಲ್ಲಿ ಅಭ್ಯಾಸ ಮಾಡಬೇಕು. ಉತ್ತಮ ಗಾಯಕರಾಗಬೇಕು ಎಂದು ಹೇಳಿದರು.
ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕದ ಕೋಶಾಧ್ಯಕ್ಷ ಜಿ.ವಿಜಯಕುಮಾರ ಮಾತನಾಡಿ, ಮಕ್ಕಳು ರಿಯಾಲಿಟಿ ಶೋ, ಕಡಿಮೆ ಸಮಯದಲ್ಲಿ ಗಾಯಕರಾಗಬೇಕು ಎಂಬ ಆತುರ ತೋರದೇ ತಾಳ್ಮೆಯಿಂದ ಅಭ್ಯಾಸ ನಡೆಸಿ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ರೋಟರಿ ಸಂಸ್ಥೆಯು ಸೇವಾ ಕಾರ್ಯಗಳ ಜತೆಯಲ್ಲಿ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯ ನಡೆಸುತ್ತಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ರಾಜೇಶ್ ಶಾನಭಾಗ್ ಅವರನ್ನು ಸನ್ಮಾನಿಸಲಾಯಿತು.
ಕವಿ ಕೆ.ಎಸ್.ಎನ್. ಗೀತೆಗಳನ್ನು ಹಾಡಿ ನುಡಿ ನಮನ ಅರ್ಪಿಸಲಾಯಿತು. ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕಿಶೋರಕುಮಾರ್, ಮಂಜುನಾಥ್.ಕೆ.ಎಸ್., ಭದ್ರಾವತಿ ವಾಸು, ಜಾನಪದ ಕಲಾವಿದ ಕೆ.ಯುವರಾಜ್, ಪದಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!