Home ಶಿವಮೊಗ್ಗಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಸ್ಥಾಪನೆ ಅಗತ್ಯ..!

ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಸ್ಥಾಪನೆ ಅಗತ್ಯ..!

by EDITOR NEWS WARRIORS
0 comments

ಶಿವಮೊಗ್ಗ: ಮಲೆನಾಡಿನ ವ್ಯಾಪ್ತಿಯ ಮೂರ‍್ನಾಲ್ಕು ಜಿಲ್ಲೆಗಳ ಪ್ರವಾಸೋದ್ಯಮ ದೃಷ್ಠಿಯಿಂದ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಅಭಿಪ್ರಾಯಪಟ್ಟರು.
ಶಿವಮೊಗ್ಗ ನಗರದ ಶಾಂತಲಾ ಸ್ಪೆರೋಕಾಸ್ಟ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಆಯೋಜಿಸಿದ್ದ “2024-25 ರಾಜ್ಯ ಮತ್ತು ಕೇಂದ್ರ ಬಜೆಟ್‌ಗಳ ವಿಚಾರವಾಗಿ ಪೂರ್ವಭಾವಿ ಸಭೆ”ಯಲ್ಲಿ ಮಾತನಾಡಿದರು.
ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಪ್ರವಾಸೋದ್ಯಮ ಅಭಿವೃದ್ದಿ ನಿಗಮ ಸ್ಥಾಪಿಸಲು ಕ್ರಮ ವಹಿಸಿ ಅನುದಾನ ಮೀಸಲಿಡಬೇಕು. ಪ್ರವಾಸೋದ್ಯಮದ ನಿಗಮದ ಮೂಲಕ ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಪೂರಕ ಪ್ರವಾಸಿ ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು. ಮಲೆನಾಡಿನ ಭಾಗದ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ವಿಮಾನ ನಿಲ್ದಾಣದಲ್ಲಿ ರಾತ್ರಿ ಲ್ಯಾಂಡಿಂಗ್ ವ್ಯವಸ್ಥೆಯು ಆರಂಭಗೊಂಡು ಹೆಚ್ಚು ವಿಮಾನ ಸೇವೆ ಆರಂಭಗೊಳ್ಳಬೇಕು. ಶಿವಮೊಗ್ಗ-ದಾವಣಗೆರೆ, ಚಿತ್ರದುರ್ಗ ಕೈಗಾರಿಕಾ ಕಾರಿಡಾರ್ ಸ್ಥಾಪನೆಗೆ ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದರು.
ಬೀರೂರು ಶಿವಮೊಗ್ಗ ರೈಲ್ವೇ ಡಬ್ಲಿಂಗ್ ಕಾಮಗಾರಿ ಪೂರ್ಣಗೊಳಿಸಬೇಕು. ತಾಳಗುಪ್ಪ – ಹುಬ್ಬಳ್ಳಿ ಹಾಗೂ ಶಿವಮೊಗ್ಗ – ಹರಿಹರ ರೈಲ್ವೇ ಮಾರ್ಗದ ಯೋಜನೆಗಳಿಗೆ ಅನುದಾನ ನೀಡಬೇಕು. ಶಿವಮೊಗ್ಗದಿಂದ ಆಗಬೇಕಿರುವ ಹೊಸ ರೈಲ್ವೇ ಕಾಮಗಾರಿಗಳ ಶೀಘ್ರ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಕ್ರಮ ವಹಿಸಬೇಕು. ಇ ತ್ಯಾಜ್ಯ ನಿರ್ವಹಣೆಗೆ ಎಲ್ಲ ಜಿಲ್ಲೆಗಳಲ್ಲಿ ಜಾಗ ಮೀಸಲಿಟ್ಟು ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳಿಗೆ ನಿರ್ವಹಣೆ ಮಾಡಲು ಅವಕಾಶ ನೀಡಬೇಕು. ಉದ್ಯೋಗ ಸೃಷ್ಠಿಗೆ ಹೆಚ್ಚಿನ ಕೆರಿಯರ್ ಪಾರ್ಕ್ ನಿರ್ಮಿಸಬೇಕು ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ತೆರಿಗೆ ಸಲಹಾ ಸಮಿತಿ ಅಧ್ಯಕ್ಷ ಇ.ಪರಮೇಶ್ವರ್ ಅವರು ತೆರಿಗೆ ಸಂಬಂಧಿಸಿದ ನೀತಿಗಳನ್ನು ಸರಳಗೊಳಿಸಬೇಕು ಎಂದು ತಿಳಿಸಿದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಉಪಸ್ಥಿತರಿದ್ದರು.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...