Home ಶಿವಮೊಗ್ಗಗಾಂಜಾ ವಿರುದ್ಧ ಸಮರ‌ ಸಾರಿದ ಶಿವಮೊಗ್ಗ ಪೋಲಿಸ್:ಯಾಸಿರ್ ಪಾಷಾನಿಗೆ‌ 4 ವರ್ಷ ಕಠಿಣ ಕಾರವಾಸ 20 ಸಾವಿರ ರೂ ದಂಡ ವಿಧಿಸಿದ ಘನ ನ್ಯಾಯಾಲಯ..!

ಗಾಂಜಾ ವಿರುದ್ಧ ಸಮರ‌ ಸಾರಿದ ಶಿವಮೊಗ್ಗ ಪೋಲಿಸ್:ಯಾಸಿರ್ ಪಾಷಾನಿಗೆ‌ 4 ವರ್ಷ ಕಠಿಣ ಕಾರವಾಸ 20 ಸಾವಿರ ರೂ ದಂಡ ವಿಧಿಸಿದ ಘನ ನ್ಯಾಯಾಲಯ..!

by EDITOR NEWS WARRIORS
0 comments

ಶಿಕಾರಿಪುರ: ತಾಲೂಕಿನ ಕುಂಬಾರ ಗುಂಡಿಯ ವಾಸಿ ಯಾಸಿರ್ ಪಾಷಾ ಎನ್ನುವ ವ್ಯಕ್ತಿ ಸಾರ್ವಜನಿಕರಿಗೆ ಗಾಂಜಾ ಮಾದಕ ವಸ್ತು ಮಾರಾಟ ಮಾಡಲು ತನ್ನ ಸ್ಕೂಟಿಯನ್ನು ಬಳಸುತ್ತಿದ್ದನು ಈ ಸಮಯದಲ್ಲಿ ಖಚಿತ ಮಾಹಿತಿಯ ಮೇರೆಗೆ ಶಿಕಾರಿಪುರದ ಐಪಿಎಸ್ ಶ್ರೀನಿವಾಸಲು ಅಡ್ಡೂರ್, ಎಎಸ್ಪಿ ನೇತೃತ್ವದಲ್ಲಿ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದಾಗ ಮಾದಕ ವಸ್ತುವನ್ನು ವ್ಯಾಪಾರ ಮಾಡುತ್ತಿದ್ದ ಯಾಸೀರ್ ಪಾಷಾನನ್ನು ದಸ್ತಗಿರಿ ಮಾಡಿ ಆತನಿಂದ ಒಂದು ಕೆಜಿ 148 ಗ್ರಾಂ ತೂಕದ ಒಣ ಗಾಂಜಾವನ್ನು ವಶಪಡಿಸಿಕೊಂಡು ಆತನ ವಿರುದ್ಧ. ಗುನ್ನೆ ಸಂಖ್ಯೆ 00052/2020 ಕಲಂ 8(ಸಿ), 20(ಬಿ)(2) ಎನ್.ಡಿ.ಪಿ.ಎಸ್ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.

ಪ್ರಕರಣದ ತನಿಖಾಧಿಕಾರಿಗಳಾದ ಬೂದ್ಯಪ್ಪ ಎಎಸ್ಐ ರವರು ಪ್ರಕರಣದ ತನಿಖೆ ನಡೆಸಿ ಆರೋಪಿಯ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿರುತ್ತಾರೆ. ಸುರೇಶ್ ಕುಮಾರ್ ಸರ್ಕಾರಿ ಅಭಿಯೋಜಕರವರು ಪ್ರಕರಣದ ಪರವಾಗಿ ಘನ ನ್ಯಾಯಾಲಯದಲ್ಲಿ ವಾದಮಂಡಿಸಿದ್ದು, ಮಾನ್ಯ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗ ದಲ್ಲಿ ಪ್ರಕರಣದ ವಾದ ನಡೆದು ಆರೋಪಿ ಯಾಸೀರ್ ಪಾಷಾ 28 ವರ್ಷ, ಶಿಕಾರಿಪುರ ಟೌನ್ ‌ಈತನ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶರಾದ ಶ್ರಿ ಮಂಜುನಾಥ್ ನಾಯಕ್,ರವರು ದಿನಾಂಕಃ 02-02-2024 ರಂದು ಆರೋಪಿಗೆ 04 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 20,000/- ರೂ ದಂಡ ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿಯಾಗಿ 06 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಸಿರುತ್ತಾರೆ.

ಶಿವಮೊಗ್ಗ ಪೊಲೀಸರು ಗಾಂಜಾ ವಿರುದ್ಧ ಸಮರ ಸಾರಿದ್ದು ಈಗ ಘನ ನ್ಯಾಯಾಲಯ ಶಿಕ್ಷೆಯನ್ನು ವಿಧಿಸುತ್ತಿದ್ದು ಈ ಕೃತ್ಯವನ್ನು ಮಾಡುವವರಿಗೆ ಇದೊಂದು ಎಚ್ಚರಿಕೆಯ ಗಂಟೆಯಾಗಿದೆ.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...