Home ಶಿವಮೊಗ್ಗShivamogga Job vacancy:ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಸಕ್ತರು ಸಂಪರ್ಕಿಸಿ..!

Shivamogga Job vacancy:ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಸಕ್ತರು ಸಂಪರ್ಕಿಸಿ..!

by EDITOR NEWS WARRIORS
0 comments

ಶಿವಮೊಗ್ಗ: ಜಿಲ್ಲಾ ವ್ಯಾಪ್ತಿಯ 251 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಪ್ರಸ್ತುತ ಖಾಲಿ ಇರುವ 14 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಇರುವ ಸ್ಥಳಗಳು :

ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿ, ಹೋತನಕಟ್ಟೆ, ತಾಳಗುಂದ, ಮಾರವಳ್ಳಿ, ಅಗ್ರಹಾರ ಮುಚುಡಿ, ಸೊರಬ ತಾಲ್ಲೂಕಿನ ಅಂಡಿಗೆ, ಮುಟುಗುಪ್ಪೆ, ಭದ್ರಾವತಿ ತಾಲ್ಲೂಕಿನ ಹನುಮಂತಾಪುರ, ಸನ್ಯಾಸಿ ಕೋಡಮಗ್ಗೆ, ಹೊಸನಗರ ತಾಲ್ಲೂಕಿನ ರಾಮಚಂದ್ರಾಪುರ, ರಿಪ್ಪನ್‍ಪೇಟೆ, ಶಿವಮೊಗ್ಗ ತಾಲ್ಲೂಕಿನ ತುಪ್ಪೂರು, ತೀರ್ಥಹಳ್ಳಿ ತಾಲ್ಲೂಕಿನ ತೂದೂರು, ಸಾಗರ ತಾಲ್ಲೂಕಿನ ಭೀಮನಕೋಣೆ ಇಲ್ಲಿ ಮೀಸಲಾತಿಯನ್ವಯ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಫೆ.23 ಕೊನೆಯ ದಿನ:

ಅರ್ಜಿಯನ್ನು ಸಂಬಂಧಿಸಿದ 14 ಗ್ರಾಮ ಪಂಚಾಯಿತಿ ಮತ್ತು ವೆಬ್‍ಸೈಟ್ https://shimoga.nic.in ನಲ್ಲಿ ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ದೃಢೀಕರಿಸಿದ ಅಗತ್ಯ ದಾಖಲೆ ಸಹಿತ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗೆ ಸಲ್ಲಿಸಬೇಕು ಎಂದು ಗ್ರಾಮ ಪಂಚಾಯಿತಿ ಮೇಲ್ವಿಚಾರಕರ ನೇಮಕಾತಿ ಸಮಿತಿ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿಗೆ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯನ್ನು ಸಂಪರ್ಕಿಸಬಹುದು.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...