Home ರಾಜ್ಯದಾವಣಗೆರೆ ಜಿಲ್ಲೆಯಲ್ಲಿ ಟ್ರಾಫಿಕ್ ಮ್ಯಾನೇಜ್ ಮೆಂಟ್ ಸೆಲ್ ಸ್ಥಾಪನೆ ಜಿಲ್ಲಾ ವರಿಷ್ಠಾಧಿಕಾರಿ ಸಿಬಿ ರಿಷ್ವಂತ್ ಘೋಷಣೆ…

ದಾವಣಗೆರೆ ಜಿಲ್ಲೆಯಲ್ಲಿ ಟ್ರಾಫಿಕ್ ಮ್ಯಾನೇಜ್ ಮೆಂಟ್ ಸೆಲ್ ಸ್ಥಾಪನೆ ಜಿಲ್ಲಾ ವರಿಷ್ಠಾಧಿಕಾರಿ ಸಿಬಿ ರಿಷ್ವಂತ್ ಘೋಷಣೆ…

by EDITOR NEWS WARRIORS
0 comments

ದಾವಣಗೆರೆ>>ಜಿಲ್ಲೆಯ ಕೇಂದ್ರ ಸ್ಥಾನ ಹಾಗೂ ತಾಲ್ಲೂಕು ಕೇಂದ್ರಗಳಾದ ಹರಿಹರ, ಹೊನ್ನಾಳಿ, ಚನ್ನಗಿರಿ ಮತ್ತು ಜಗಳೂರುಗಳಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ತಡೆಗಟ್ಟಲು ಟ್ರಾಫಿಕ್ ಮ್ಯಾನೆಜ್‍ಮೆಂಟ್ ಸೆಲ್‍ ಅನ್ನು ತೆರೆಯಲಾಗಿದ್ದು.

ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ದೂರು ದಾಖಲಿಸಬಹುದು:

ದಾವಣಗೆರೆಯ ಪೊಲೀಸ್‌ ಉಪ ವಿಭಾಗ ಕಚೇರಿಯಲ್ಲಿ ಟ್ರಾಫಿಕ್ ಮ್ಯಾನೆಜ್‍ಮೆಂಟ್ ಸೆಲ್‌ ತೆರೆಯಲಾಗಿದೆ.
ಈ ವ್ಯವಸ್ಥೆಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣಗಳನ್ನು ಹೆಚ್ಚು ಗುರುತಿಸಲು ಸಾಧ್ಯವಾಗಲಿದೆ. ನಿಯಮ ಉಲ್ಲಂಘನೆ ಪ್ರಕರಣಗಳನ್ನು ಕಡಿಮೆ ಮಾಡಲು ಪೊಲೀಸರೊಂದಿಗೆ ಸಾರ್ವಜನಿಕರು ಕೂಡ ಪಾಲ್ಗೊಳ್ಳುವ ನೂತನ ವ್ಯವಸ್ಥೆ ಇದಾಗಿದೆ. ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಸಂಚಾರ ನಿಯಮಗಳ ಉಲ್ಲಂಘನೆಯನ್ನು ತಡೆಗಟ್ಟುವಲ್ಲಿ ಟ್ರಾಫಿಕ್ ಮ್ಯಾನೆಜ್‍ಮೆಂಟ್ ವ್ಯವಸ್ಥೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಸಾರ್ವಜನಿಕರು www.davangerepolice.karnataka.gov.in ವೆಬ್‍ಸೈಟ್‍ಗೆ ಭೇಟಿ ನೀಡಿ ಪರಿಚಯ ಕಲಂನಲ್ಲಿ ವಾಹನ ಸವಾರರ ತಪ್ಪುಗಳ ಬಗ್ಗೆ ಸಾರ್ವಜನಿಕರ ಕಣ್ಗಾವಲು ವ್ಯವಸ್ಥೆ ಎಂಬ ಶಿರ್ಷಿಕೆಯಡಿಯಲ್ಲಿರುವ ಲಿಂಕನ್ನು ಬಳಸಿ ದೂರು ದಾಖಲಿಸಬಹುದು. ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣ ನಡೆದಾಗ ಸ್ಥಳದಲ್ಲಿಯೇ ಪೊಟೋ ತೆಗೆದು ಜೊತೆಗೆ ಲಿಂಕ್‌ನಲ್ಲಿ ಕೇಳಲಾಗುವ ಮಾಹಿತಿಯನ್ನು ನೀಡುವ ಮೂಲಕ ಸಾರ್ವಜನಿಕರು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಈ ನೂತನ ವ್ಯವಸ್ಥೆಯಲ್ಲಿ ಜಿಲ್ಲಾ ಪೊಲೀಸರಿಗೆ ವರದಿ ಮಾಡಬಹುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‌ ತಿಳಿಸಿದ್ದಾರೆ.

ಈ ನೂತನ ಪ್ರಯೋಗ ಜಿಲ್ಲೆಯಲ್ಲಿ ಯಶಸ್ವಿಯಾಗುತ್ತಾ ಕಾದುನೋಡಬೇಕು..

ವರದಿ …ರಘುರಾಜ್ ಹೆಚ್ ..ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ..9449553305/7892830899…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...