Home ಶಿವಮೊಗ್ಗಕೆಯುಡಬ್ಲ್ಯುಜೆ ಹೋರಾಟದ ಫಲ ನನಸಾದ ಪತ್ರಕರ್ತರ ಬಸ್ ಪಾಸ್ ಸಿಹಿ ಹಂಚಿ ಸಂಭ್ರಮಿಸಿದ ಪತ್ರಕರ್ತರು..!

ಕೆಯುಡಬ್ಲ್ಯುಜೆ ಹೋರಾಟದ ಫಲ ನನಸಾದ ಪತ್ರಕರ್ತರ ಬಸ್ ಪಾಸ್ ಸಿಹಿ ಹಂಚಿ ಸಂಭ್ರಮಿಸಿದ ಪತ್ರಕರ್ತರು..!

by EDITOR NEWS WARRIORS
0 comments


ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ.

ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಕೆಯುಡಬ್ಲ್ಯೂಜೆ ಶಿವಮೊಗ್ಗ ಜಿಲ್ಲಾ ಶಾಖೆ ಧನ್ಯವಾದಗಳನ್ನು ಸಲ್ಲಿಸಿದೆ..

ಮಂಡ್ಯ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಉಚಿತ ಬಸ್ ಪಾಸ್ ಬಗ್ಗೆ ಕೆಯುಡಬ್ಲ್ಯುಜೆ ಮಂಡಿಸಿದ್ದ ಹಕ್ಕೊತ್ತಾಯ ಬಗ್ಗೆ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದು,
ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲಾ ಹಂತದಲ್ಲಿಯೂ ಸಹಕಾರ ನೀಡಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಮತ್ತು ಬೇಡಿಕೆ ಈಡೇರಿಕೆಗೆ ಅವಿರತವಾಗಿ ಶ್ರಮಿಸಿದ ಕೆಯುಡಬ್ಲ್ಯುಜೆ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರು ಅವರುಗಳಿಗೆ ಕರ್ನಾಟಕ ಕಾರ್ಯನಿರತ ತ್ರಕರ್ತ ರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯ ಅಧ್ಯಕ್ಷರಾದ ಕೆ ವಿ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ವಿ ಟಿ ಅರುಣ್, ರಾಜ್ಯ ಸಮಿತಿ ನಿರ್ದೇಶಕರಾದ ಎನ್ ರವಿಕುಮಾರ್ ಟೆಲೆಕ್ಸ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಇದೇ ಸಂತೋಷದಲ್ಲಿ ಶಿವಮೊಗ್ಗ ಪತ್ರಕರ್ತರು ನಗರದ ಮೀಡಿಯಾ ಹೌಸ್ ನಲ್ಲಿ ಸಿಹಿ ಹಂಚಿ ಸಂಭ್ರಮಿಸಿದರು.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...