Home ರಾಜ್ಯಪ್ರಗತಿಪರ ರೈತ/ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ,ಆಸಕ್ತರು ಅರ್ಜಿ ಸಲ್ಲಿಸಬಹುದು…

ಪ್ರಗತಿಪರ ರೈತ/ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ,ಆಸಕ್ತರು ಅರ್ಜಿ ಸಲ್ಲಿಸಬಹುದು…

by EDITOR NEWS WARRIORS
0 comments


ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಇವರು ಪ್ರತಿ ವರ್ಷದಂತೆ ಈ ವರ್ಷವೂ ಪ್ರಗತಿಪರ ರೈತ ಮಹಿಳೆ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.


ಸಮಗ್ರತೆಯನ್ನು ಅಳವಡಿಸಿಕೊಂಡು ಪ್ರಗತಿಯತ್ತ ಸಾಗುತ್ತಿರುವ ರೈತರನ್ನು ವಿಶ್ವವಿದ್ಯಾಲಯ ವ್ಯಾಪ್ತಿಯ ಪ್ರತಿ ಜಿಲ್ಲೆಗೆ ಒಬ್ಬರಂತೆ ಗುರುತಿಸಿ 2021 ರ ಕೃಷಿ ಮೇಳದಂದು ಪ್ರಶಸ್ತಿ ನೀಡಲಾಗುವುದು. ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ವ್ಯಾಪ್ತಿಯ ಏಳು ಜಿಲ್ಲೆಗಳಾದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗಿನ ರೈತ ಮಹಿಳೆಯರು ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:


ಆಯ್ಕೆ ಮಾಡಲು ಕೃಷಿ ಕಸುಬು ಹಾಗೂ ಇತರೆ ಎಲ್ಲಾ ಉಪ ಕಸುಬುಗಳನ್ನು ಗಣನೆಗೆ ತೆಗೆದುಕೊಂಡು ಇಡೀ ಕೃಷಿ ಕ್ಷೇತ್ರವನ್ನು ಒಂದು ಘಟಕವಾಗಿ ಪರಿಗಣಿಸಿ ಸಮಗ್ರ ಕೃಷಿ ತತ್ವಗಳನ್ನಾಧರಿಸಿ ಪ್ರಗತಿ ಸಾಧಿಸಿದ ಕೃಷಿಕರನ್ನು ಗುರುತಿಸಲಾಗುವುದು. ಅರ್ಜಿ ಸಲ್ಲಿಸಿದ ಪ್ರತಿ ಜಿಲ್ಲೆಯಿಂದ ಒಬ್ಬ ರೈತರನ್ನು ಗುರುತಿಸಲಾಗುವುದು.
ಅರ್ಜಿ ಸಲ್ಲಿಸಲು ಆಸಕ್ತ ರೈತರು/ರೈತ ಮಹಿಳೆ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೃಷಿ ವಿಜ್ಞಾನ ಕೇಂದ್ರಗಳು ಅಥವಾ ವಿಸ್ತರಣಾ ಶಿಕ್ಷಣ ಘಟಕಗಳಲ್ಲಿ ಅರ್ಜಿ ಪಡೆಯಬಹುದು ಅಥವಾ ವೆಬ್‍ಸೈಟ್ https://www.uahs.edu.in/ ನಲ್ಲಿ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 24 ರೊಳಗೆ ತಲುಪುವಂತೆ ಆಯಾ ಕೃಷಿ ಜಂಟಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.


ಹೆಚ್ಚಿನ ಮಾಹಿತಿಗೆ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಅಥವಾ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು ಕೃಷಿ ವಿಜ್ಞಾನ ಕೇಂದ್ರ, ಮೊ.ಸಂ: ಶಿವಮೊಗ್ಗ 9480838976, 8277932600, ದಾವಣಗೆರೆ 9480838209, ಚಿಕ್ಕಮಗಳೂರು 9480838203, 8277930890, ಉಡುಪಿ 9480838202, 8277932500, ಚಿತ್ರದುರ್ಗ 9480838201, ದಕ್ಷಿಣ ಕನ್ನಡ 8794706468, 8277931060, ಮಡಿಕೇರಿ 9480838210, 7259005540 ನ್ನು ಸಂಪರ್ಕಿಸಬಹುದೆಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...