Home ಶಿವಮೊಗ್ಗಕುತೂಹಲ ಮೂಡಿಸಿದ ನೈರುತ್ಯ ಪದವೀಧರ ಕ್ಷೇತ್ರದ ಆಕಾಂಕ್ಷಿಗಳ ಜಂಟಿ ಪತ್ರಿಕಾಗೋಷ್ಠಿ..!

ಕುತೂಹಲ ಮೂಡಿಸಿದ ನೈರುತ್ಯ ಪದವೀಧರ ಕ್ಷೇತ್ರದ ಆಕಾಂಕ್ಷಿಗಳ ಜಂಟಿ ಪತ್ರಿಕಾಗೋಷ್ಠಿ..!

by EDITOR NEWS WARRIORS
0 comments

ನೈರುತ್ಯ ಪದವೀಧರ ಕ್ಷೇತ್ರದ ಪ್ರಬಲ ಆಕಾಂಕ್ಷಿಗಳಾಗಿದ್ದ ಎಸ್ಪಿ ದಿನೇಶ್ ಹಾಗೂ ರಂಗಸ್ವಾಮಿ ಅವರು ನಾಳೆ ಪತ್ರಿಕಾಗೋಷ್ಠಿಯನ್ನು ಇಟ್ಟುಕೊಂಡಿದ್ದು ಅದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಈಗಾಗಲೇ ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ ಆಯನೂರು ಮಂಜುನಾಥ್ ಅವರಿಗೆ ಫೈನಲ್ ಆಗಿದ್ದು ಅವರು ಪತ್ರಿಕಾಗೋಷ್ಠಿಯಲ್ಲಿ ಎಲ್ಲರ ವಿಶ್ವಾಸಕ್ಕೆ ತೆಗೆದುಕೊಂಡು ನಾನು ಚುನಾವಣೆಯಲ್ಲಿ ಗೆದ್ದು ಬರುತ್ತೇನೆ ಇಷ್ಟು ವರ್ಷ ಬಿಜೆಪಿಗೆ ಮೀಸಲಾಗಿದ್ದ ಆ ಕ್ಷೇತ್ರವನ್ನು ಕಾಂಗ್ರೆಸ್ ಗೆ  ತರುವುದು ಸವಾಲಿನ ಕೆಲಸ ಅದನ್ನು ನಾನು ಖಂಡಿತ ಮಾಡುತ್ತೇನೆ ಇದಕ್ಕೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ಹೇಳಿದ್ದರು.

ಇದಕ್ಕೂ ಮೊದಲು ಎಸ್ಪಿ ದಿನೇಶ್  ಆಯನೂರ್ ಮಂಜುನಾಥ್ ಅವರಿಗೆ ಟಿಕೆಟ್ ನೀಡಬಾರದು ನಾನು ಪ್ರಬಲ ಆಕಾಂಕ್ಷಿ ನನಗೆ ಟಿಕೆಟ್ ನೀಡಬೇಕು ಎಂದು ತಮ್ಮ ಬೆಂಬಲಿಗರೊಡನೆ ಹಲವು ಬಾರಿ ಪತ್ರಿಕಾಗೋಷ್ಠಿ ನಡೆಸಿದ್ದರು.

ಆದರೆ ಇವೆಲ್ಲ ಗೊಂದಲಕ್ಕೆ ತೆರೆ ಎಳೆದ ಕಾಂಗ್ರೆಸ್ ಪಕ್ಷ ಕೊನೆಗೂ ಆಯನೂರ್ ಮಂಜುನಾಥ್ ಗೆ ಮಣೆ ಹಾಕಿದ್ದು ಅವರಿಗೆ ಟಿಕೆಟ್ ನೀಡುವುದರ ಮೂಲಕ ಈ ಗೊಂದಲಕ್ಕೆ ತೆರೆ ಎಳೆದಿತ್ತು.

ಆದರೆ ಈಗ ಪ್ರಬಲ ಆಕಾಂಕ್ಷಿಗಳಾಗಿದ್ದ ರಂಗಸ್ವಾಮಿ ಹಾಗೂ ಎಸ್ ಪಿ ದಿನೇಶ್ ಅವರು ನಾಳೆ ಜಂಟಿ ಪತ್ರಿಕಾಗೋಷ್ಠಿ ನಡೆಸುತ್ತಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ ಏಕೆಂದರೆ ಈ ಪತ್ರಿಕಾಗೋಷ್ಠಿಯಲ್ಲಿ ಅವರು ಈಗಾಗಲೇ ಟಿಕೆಟ್ ಘೋಷಣೆಯಾಗಿರುವ ಆಯನೂರು ಮಂಜುನಾಥ್ ಅವರಿಗೆ ತಮ್ಮ ಬೆಂಬಲ ನೀಡುತ್ತಾರೋ ಅಥವಾ ತಮ್ಮ ಅಸಮಾಧಾನವನ್ನು ಹೊರ ಹಾಕುತ್ತಾರೋ ಕಾದುನೋಡಬೇಕಾಗಿದೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...