Home ಧಾರವಾಡಗೊಂಬೆ ಭವಿಷ್ಯ ನಿಜವಾಗುತ್ತಾ  ಯಾರಿಗೆ ಸಿಗುತ್ತೆ ಕೇಂದ್ರದಲ್ಲಿ ಅಧಿಕಾರ..?!

ಗೊಂಬೆ ಭವಿಷ್ಯ ನಿಜವಾಗುತ್ತಾ  ಯಾರಿಗೆ ಸಿಗುತ್ತೆ ಕೇಂದ್ರದಲ್ಲಿ ಅಧಿಕಾರ..?!

by EDITOR NEWS WARRIORS
0 comments

 ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮಕ್ಕೆ ಹೊಂದಿಕೊಂಡ ಹನುಮನಕೊಪ್ಪದಲ್ಲಿ ಹಿಂದಿನ ಕಾಲದಿಂದಲೂ ಅಂದರೆ 1936 ರಿಂದ ಇಲ್ಲಿಯವರೆಗೂ ಪ್ರತಿ ವರ್ಷ ಯುಗಾದಿಯ ಹಿಂದಿನ ದಿನ ಅಮಾವಾಸ್ಯೆ ದಿನದಂದು ಗೊಂಬೆಗಳ ಪ್ರತಿಷ್ಠಾಪನೆ ಮಾಡಲಾಗುತ್ತದೆ.

ನಾಲ್ಕು ದಿಕ್ಕುಗಳಿಗೂ ನಾಲ್ಕು ಗೊಂಬೆಗಳನ್ನು ಗ್ರಾಮಸ್ಥರು ಪ್ರತಿಷ್ಠಾಪನೆ ಮಾಡುತ್ತಾರೆ. ಗ್ರಾಮದ ಹಳ್ಳದ ದಂಡೆಯಲ್ಲಿ ಈ ಪ್ರತಿಷ್ಠಾಪನೆ ನಡೆಯುತ್ತದೆ ನಂತರದ ದಿನ  ಬೆಳಗಿನ  ಜಾವ ಈ ಸ್ಥಳಕ್ಕೆ ಬಂದು ಗ್ರಾಮದ  ಹಿರಿಯರು ಗೊಂಬೆಗಳನ್ನು ಪರೀಕ್ಷಿಸುತ್ತಾರೆ.

ಆಯಾ ದಿಕ್ಕಿನ ಗೊಂಬೆಯ ಪರಿಸ್ಥಿತಿ ಆಧರಿಸಿ ರಾಜಕೀಯ ಭವಿಷ್ಯವನ್ನು ಅವಲೋಕಿಸಲಾಗುತ್ತದೆ.

ಗ್ರಾಮಸ್ಥರ ಪ್ರಕಾರ ಬೊಂಬೆಯ ಅಂಗಾಂಗಗಳಿಗೆ ಧಕ್ಕೆಯಾದರೆ ನಾಯಕತ್ವ ಹೋಗುತ್ತದೆ ಎಂಬುದು ಸಾಮಾನ್ಯ ಭವಿಷ್ಯ. ಅದೇ ರೀತಿ ಕಳೆದ ಬಾರಿ ಗೊಂಬೆಯ ಅಂಗಾಂಗಗಳಿಗೆ ಧಕ್ಕೆಯಾಗಿದ್ದು ಕರ್ನಾಟಕದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಅಧಿಕಾರ ಕಳೆದುಕೊಂಡು ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು ಭವಿಷ್ಯ ನಿಜವಾಗಿತ್ತು. ಈ ಬಾರಿ  ಗೊಂಬೆಗೆ ಯಾವುದೇ ಧಕ್ಕೆಯಾಗಿಲ್ಲ. ಹೀಗಾಗಿ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂಬ ಭವಿಷ್ಯ ನುಡಿಯಲಾಗಿದೆ.

ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿ ಬದಲಾವಣೆ  ಇಲ್ಲ ಎನ್ನುವ ಸಂದೇಶವನ್ನು ಗೊಂಬೆ ನೀಡಿದೆ ಎನ್ನಲಾಗುತ್ತಿದೆ. ಹಾಗಾಗಿ ಗೊಂಬೆ ಭವಿಷ್ಯದ ಪ್ರಕಾರ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...