Home ಕಾಂಗ್ರೆಸ್ಬಂಜಾರ ಸಮುದಾಯದವರಿಂದ ಗೀತಾ ಶಿವರಾಜಕುಮಾರ್ ಗೆ ಭರ್ಜರಿ ಸ್ವಾಗತ..!

ಬಂಜಾರ ಸಮುದಾಯದವರಿಂದ ಗೀತಾ ಶಿವರಾಜಕುಮಾರ್ ಗೆ ಭರ್ಜರಿ ಸ್ವಾಗತ..!

by EDITOR NEWS WARRIORS
0 comments

ಶಿವಮೊಗ್ಗ: ‘ರಾಜ್ಯದಲ್ಲಿ ಬಿಜೆಪಿ ಪಕ್ಷದವರು ಹಣ ಹಾಗೂ ಧರ್ಮದ ಹೆಸರಿನಲ್ಲಿ ನ್ಯಾಯವನ್ನು ಸೋಲಿಸಲು ಮುಂದಾಗುತ್ತಿದ್ದಾರೆ. ಇದಕ್ಕೆ, ಜನರು ಆಸ್ಪದ ಕೊಡಬಾರದು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು.

ಸವಳಂಗ ರಸ್ತೆಯ ಕುಂಚೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ‘ನಮ್ಮೂರ ಹುಡುಗ ಡಾ.ಶಿವರಾಜಕುಮಾರ್ ಹಾಗೂ ಗೀತಾ ಶಿವರಾಜಕುಮಾರ್ ಅವರು ಬಂಜಾರ ಸಮುದಾಯದೊಂದಿಗೆ ಶೀರ್ಷಿಕೆಯಡಿಯ ಯುಗಾದಿ ಹಬ್ಬ ಆಚರಣೆಯಲ್ಲಿ ಪಾಲ್ಗೊಂಡು ಮಾತ‌ನಾಡಿದರು.

ಬಿಜೆಪಿ ಪಕ್ಷದವರು ದೇವರನ್ನು ಬೀದಿಗೆ ತಂದು ಮತ ಕೇಳುತ್ತಿದ್ದಾರೆ. ಇದು ರಾಜಕೀಯದಲ್ಲಿ ಸಲ್ಲದು. ನಾವೂ ಕೂಡ ದೇವರ ಭಕ್ತರೆ. ಇಲ್ಲಿ ನ್ಯಾಯ, ನೀತಿ, ಸತ್ಯ, ಧರ್ಮ ಮಾತ್ರ ಗೆಲ್ಲಬೇಕು. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಬಡವರ ಹಸಿವು ನೀಗಿಸಲಾಗುತ್ತಿದೆ. ಇಲ್ಲಿ ಕಷ್ಟಕ್ಕೆ ಸ್ಪಂದಿಸಿದವರಿಗೆ ಮತ ಚಲಾಯಿಸಬೇಕು ಎಂದರು.

ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರಿಗೆ ಕುಂಚೇಹಳ್ಳಿಯಲ್ಲಿ ಅಭಿಮಾನಿ ಬಳಗ ಹೆಚ್ಚು. ನನಗೆ ಹಾಗೂ ಗೀತಕ್ಕಗೆ ಈಗ ತಂದೆ ಇಲ್ಲ. ಆದ್ದರಿಂದ ನೀವೇ ನಮ್ಮ ತಂದೆ-ತಾಯಿ. ಇಂದಿನಿಂದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ಬಂಗಾರಪ್ಪ ಅವರಿಗೆ ನೀಡಿದ್ದ ಪ್ರೋತ್ಸಾಹ ಗೀತಾ ಶಿವರಾಜಕುಮಾರ್ ಅವರಿಗೂ ನೀಡಿ ಎಂದು ಕೋರಿದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಮೂಲ ಉದ್ದೇಶ ಬಡತನ ನಿರ್ಮೂಲನೆ ಹಾಗೂ ಬಡ ಕುಟುಂಬಗಳ ಹಸಿವು ನೀಗಿಸುವುದು. ಅದೇ, ಉದ್ದೇಶದಿಂದ ಲೋಕಸಭಾ ಚುನಾವಣೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಜನ ಸಾಮಾನ್ಯರಿಗೆ ಪೂರಕವಾದ ಯೋಜನೆಗಳನ್ನು ಘೋಷಿಸಲಾಗಿದೆ ಎಂದರು

ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ ಮಾತನಾಡಿ, ಕಂಚೇನಹಳ್ಳಿಗೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಹಾಗೂ ನಟ ರಾಜ್ ಕುಮಾರ್ ಕುಟುಂಬ ಸದಸ್ಯರು ಭೇಟಿ ನೀಡಿದ್ದಾರೆ. ಇದು, ನಮ್ಮ ಸೌಭಾಗ್ಯ ಎಂದ ಅವರು,

ದೇಶದಲ್ಲಿ ಬಿಕ್ಷಾಟನೆ ನಡೆಸದೆ ಸ್ವಾಭಿಮಾನದ ಬದುಕನ್ನು ಬಂಜಾರ ಸಮುದಾಯ ಸಾಗಿಸುತ್ತಿದೆ. ಇಲ್ಲಿನ ಸಮಸ್ಯೆಗಳನ್ನು ನೀಗಿಸಲು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಇಲ್ಲ ಎನ್ನುವುದನ್ನು ತೊಡೆದು ಹಾಕಿ, ಅವರ ಸ್ಥಾನವನ್ನು ಗೀತಾ ಶಿವರಾಜಕುಮಾರ್ ಅವರು ತುಂಬಲಿದ್ದಾರೆ ಎಂದರು.

ಕಾಂಗ್ರೆಸ್ ಮುಖಂಡರಾದ ಶ್ರೀನಿವಾಸ ಕರಿಯಣ್ಣ ಮಾತನಾಡಿ, ಬಡವರಿಗೆ ನೆರವಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಆ ಎಲ್ಲಾ ಯೋಜನೆಗಳು ಜನಸಾಮಾನ್ಯರಿಗೆ ಸಮರ್ಪಕವಾಗಿ ತಲುಪಲು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಬೆಂಬಲಿಸಬೇಕಿದೆ ಎಂದರು.

ನಟ ಶಿವರಾಜಕುಮಾರ್ ಮಾತನಾಡಿದರು. ಅದೇ ರೀತಿ, ದುರ್ಗಿಗುಡಿಯ ಗಣಪತಿ ದೇವಸ್ಥಾನ ಬಳಿಯಲ್ಲಿ ಗೀತಾ ಶಿವರಾಜಕುಮಾರ್ ಪರ ಪ್ರಚಾರ ಸಭೆ ನಡೆಸಲಾಯಿತು.

ಕುಂಚೇಹಳ್ಳಿಯ ಸೇವಾಲಾಲ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು, ತೆರೆದ ವಾಹನದಲ್ಲಿ ವೇದಿಕೆ ಬಳಿಗೆ ಸಾಗಿದರು. ಬಂಜಾರ ಸಮುದಾಯದ ಮಹಿಳೆಯರು ಗೀತಾ ಶಿವರಾಜಕುಮಾರ್ ಅವರಿಗೆ ಪ್ರೀತಿಯಿಂದ ಬರ ಮಾಡಿಕೊಂಡು ಆರತಿ ಬೆಳಗಿ ಸ್ವಾಗತಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ಎಚ್.ಸಿ.ಯೋಗೀಶ್, ಅನಿತಾ ಕುಮಾರಿ, ಎಂ.ಶ್ರೀಕಾಂತ್, ಎನ್.ರಮೇಶ್, ರವಿಕುಮಾರ್, ಕಲಗೋಡು ರತ್ನಾಕರ್, ಎಸ್.ಕೆ.ಮರಿಯಣ್ಣ, ಜಗದೀಶ್ ಸೇರಿ ಬಂಜಾರದ ಸಮುದಾಯದ ಮುಖಂಡರು ಇದ್ದರು.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...