Home ದಾವಣಗೆರೆಚುನಾವಣೆ ಕರ್ತವ್ಯದಲ್ಲಿದ ಶಿಕ್ಷಕನಿಗೆ ಜಿಲ್ಲಾಧಿಕಾರಿಗಳಿಂದ ಅಮಾನತು ಆದೇಶ..! ಕಾರಣವೇನು…?!

ಚುನಾವಣೆ ಕರ್ತವ್ಯದಲ್ಲಿದ ಶಿಕ್ಷಕನಿಗೆ ಜಿಲ್ಲಾಧಿಕಾರಿಗಳಿಂದ ಅಮಾನತು ಆದೇಶ..! ಕಾರಣವೇನು…?!

by EDITOR NEWS WARRIORS
0 comments

ದಾವಣಗೆರೆ: ತಾಲೂಕಿನ ಚನ್ನಗಿರಿಯಲ್ಲಿ ಏಪ್ರಿಲ್ 8ರಂದು ಚುನಾವಣಾ  ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ  ಏರ್ಪಡಿಸಿದ್ದ  ತರಬೇತಿ ಕಾರ್ಯಗಾರದಲ್ಲಿ ಬೆಳಿಗ್ಗೆ ಹಾಜರಾಗಿ ಮಧ್ಯಾಹ್ನ ತರಬೇತಿಗೆ ಹಾಜರಾಗದೆ ಅನ್ಯ ಮಹಿಳಾ ಸಿಬ್ಬಂದಿಯೊಂದಿಗೆ ಹೊರ ಹೋದ‌ ಶಿಕ್ಷಕನನ್ನು ಪ್ರಶ್ನಿಸಿದ ತಹಶೀಲ್ದಾರೊಂದಿಗೆ ಅನುಚಿತವಾಗಿ ವರ್ತನೆ ಮಾಡಿದ   ಚನ್ನಗಿರಿ ಎಸ್.ಕೆ.ಎಂ.ಎಸ್ ಮಿಲ್ಲತ್ ಪ್ರೌಢಶಾಲೆ ಸಹ ಶಿಕ್ಷಕರಾದ ಸೈಯದ್ ಸುಲ್ತಾನ್ ಅಹಮದ್ ರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ‌ಆದ‌ ಡಾ.ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ.

ದಾವಣಗೆರೆ ಲೋಕಸಭಾ ಕ್ಷೇತ್ರದ ಮತಗಟ್ಟೆ ಅಧ್ಯಕ್ಷ, ಸಹಾಯಕ ಅಧ್ಯಕ್ಷಾಧಿಕಾರಿ ಸಿಬ್ಬಂದಿಗಳಿಗೆ ಏಪ್ರಿಲ್ 8 ರಂದು ಮೊದಲ ಹಂತದ ತರಬೇತಿಯನ್ನು ಎಲ್ಲಾ ತಾಲ್ಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿತ್ತು. ಚನ್ನಗಿರಿಯಲ್ಲಿ ಶ್ರೀಶ್ರೀಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತರಬೇತಿ ನಡೆದಿರುತ್ತದೆ. ಬೆಳಿಗ್ಗೆ ತರಬೇತಿ ಮುಗಿದು ಮಧ್ಯಾಹ್ನ 3 ಗಂಟೆಗೆ ಕೊಠಡಿ ಸಂಖ್ಯೆ 10 ರಲ್ಲಿ ತರಬೇತಿ ಆರಂಭವಾಗಿತ್ತು. ಆದರೆ ಯಾವುದೇ ಅನುಮತಿ ಇಲ್ಲದೆ ತರಬೇತಿಗೆ ಹಾಜರಾದ ಅನ್ಯ ಮಹಿಳಾ ಸಿಬ್ಬಂದಿಯೊಂದಿಗೆ ತರಬೇತಿಯಿಂದ ಹೊರ ಹೋಗುತ್ತಿರುವಾಗ ಇದನ್ನು ಪ್ರಶ್ನಿಸಿದ ತಹಶೀಲ್ದಾರ್ ಅವರೊಂದಿಗೆ ಮಹಿಳಾ ಸಿಬ್ಬಂದಿ ಸಮ್ಮುಖದಲ್ಲಿಯೇ ಅಸಭ್ಯವಾಗಿ ವರ್ತಿಸಿದ್ದಾರೆ, ಜೊತೆಗೆ ಅನ್ಯ ಸಿಬ್ಬಂದಿಯವರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದು ಚುನಾವಣಾ ಪ್ರಾಧಿಕಾರಕ್ಕೆ ಮುಜುಗರ ಉಂಟು ಮಾಡಿರುತ್ತಾರೆ. ಇಂದು ಪ್ರಜಾಪ್ರತಿನಿಧಿ ಕಾಯ್ದೆ 1951 ರ ಕಲಂ 134 ರ ನಿಯಮ ಉಲ್ಲಂಘನೆ ಮತ್ತು ಕರ್ನಾಟಕ ನಾಗರೀಕ ಸೇವಾ ನಡತೆ ನಿಯಮಾವಳಿ 1966 ಹಾಗೂ ತಿದ್ದುಪಡಿ ನಿಯಮಗಳು 2021 ರ ನಿಯಮ ಉಲ್ಲಂಘಿಸಿ ಸರ್ಕಾರಿ ನೌಕರರಿಗೆ ತರವಲ್ಲದ ರೀತಿಯಲ್ಲಿ ನಡೆದುಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಅಮಾನತು ಮಾಡಿ ಕೇಂದ್ರಸ್ಥಾನ ಬಿಡದಂತೆ ಆದೇಶಿಸಿದ್ದಾರೆ.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...