Home ಶಿವಮೊಗ್ಗಗಣಿ ಇಲಾಖೆಯ ಮಹತ್ವದ ಕಾರ್ಯಾಚರಣೆ ಮಂಡಗದ್ದೆ ಅಕ್ರಮ ಮರಳು ದಂಧೆಗೆ ತಾತ್ಕಾಲಿಕ ಬ್ರೇಕ್..!

ಗಣಿ ಇಲಾಖೆಯ ಮಹತ್ವದ ಕಾರ್ಯಾಚರಣೆ ಮಂಡಗದ್ದೆ ಅಕ್ರಮ ಮರಳು ದಂಧೆಗೆ ತಾತ್ಕಾಲಿಕ ಬ್ರೇಕ್..!

by EDITOR NEWS WARRIORS
0 comments

ಶಿವಮೊಗ್ಗ: ತಾಲೂಕಿನ ಮಂಡಗದ್ದೆಯಲ್ಲಿ ನಿರಂತರವಾಗಿ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂದು ಬಂದ ದೂರಿನ ಹಿನ್ನೆಲೆಯಲ್ಲಿ ಈಗಾಗಲೇ ಸಾಕಷ್ಟು ಬಾರಿ ಮರಳು ದಂಧೆಗೆ ಬಳಸುತ್ತಿದ್ದ ರಸ್ತೆಗಳನ್ನು  ಟ್ರಂಚ್‌ ಹೂಡಿಸಿ ಅತ್ತ ವಾಹನಗಳು ಓಡಾಡದಂತೆ ಶಿವಮೊಗ್ಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಂಡಿದ್ದರು.

ಆದರೂ ನಿರಂತರವಾಗಿ ನಡೆಯುತ್ತಿದ್ದ ಮರಳುದಂದೆ:

ಗಣಿ ಇಲಾಖೆಯ ಅಧಿಕಾರಿಗಳು ಟ್ರಂಚ್‌  ಒಡಿಸಿ ರಸ್ತೆಗಳನ್ನು ಮುಚ್ಚಿದ್ದರು ಕೂಡ ಮತ್ತೊಂದಷ್ಟು ಕಡೆ ರಸ್ತೆಗಳನ್ನು ಮಾಡಿಕೊಂಡು ಅಕ್ರಮವಾಗಿ ಮರಳುಗಳನ್ನು ತೆಗೆದು ನಿರಂತರವಾಗಿ ಹಗಲು ರಾತ್ರಿ ಎನ್ನದೆ ದಂದೆ ನಡೆಸುತ್ತಿದ್ದಾರೆ ಎಂದು ಬಂದ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಂಬಂಧಪಟ್ಟ ಎಲ್ಲಾ ಭಾಗಗಳಲ್ಲಿ ರಸ್ತೆಗಳಿಗೂ ಟ್ರಂಚ್‌ ಹೊಡಿಸಿ ಮುಚ್ಚಿ ತಾತ್ಕಾಲಿಕವಾಗಿ ಅಕ್ರಮ ಮರಳು ದಂಧೆ ನಡೆಯದಂತೆ ಬ್ರೇಕ್ ಹಾಕಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ನವೀನ್ ಬಂದಮೇಲೆ ನಿರಂತರವಾಗಿ ಅಕ್ರಮ ಮರಳು ದಂಧೆಗಳ ಮೇಲೆ ದಾಳಿ :

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ನವೀನ್ ಅವರು ಬಂದಮೇಲೆ ನಿರಂತರವಾಗಿ ಅಕ್ರಮ ಮರಳು ದಂಧೆ  ಮೇಲೆ ದಾಳಿ ನಡೆಯುತ್ತಿದ್ದು ದಿಟ್ಟ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಎಲ್ಲೇ ಖಚಿತ ಮಾಹಿತಿ ಬಂದರು ಅಲ್ಲಿಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಕಳುಹಿಸಿ ದಿಟ್ಟ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಇಲ್ಲಿವರೆಗೂ ಸುಮಾರು ಒಂದುವರೆ ಕೋಟಿ  ಅಷ್ಟು ಸರ್ಕಾರಕ್ಕೆ ವಂಚನೆ ಆಗುತ್ತಿದ್ದ ರಾಜಸ್ವ ಹಣವನ್ನು  ಅಕ್ರಮ ದಂಧೆಗೆ ಮಾಡುತ್ತಿದ್ದವರಿಂದ ವಸೂಲಿ ಮಾಡಿದ್ದಾರೆ.

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!