Home ಶಿವಮೊಗ್ಗಚಂದ್ರಶೇಖರ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್ ಎಂಡಿ ಹಾಗೂ ಲೆಕ್ಕಾಧಿಕಾರಿಯನ್ನು  ಅಮಾನತು ಮಾಡಿ ಸರ್ಕಾರ ಆದೇಶ..! ಬ್ಯಾಂಕ್ ಅಧಿಕಾರಿಗಳ ಮೇಲೂ ಬಿತ್ತು ಎಫ್ಐಆರ್..!

ಚಂದ್ರಶೇಖರ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್ ಎಂಡಿ ಹಾಗೂ ಲೆಕ್ಕಾಧಿಕಾರಿಯನ್ನು  ಅಮಾನತು ಮಾಡಿ ಸರ್ಕಾರ ಆದೇಶ..! ಬ್ಯಾಂಕ್ ಅಧಿಕಾರಿಗಳ ಮೇಲೂ ಬಿತ್ತು ಎಫ್ಐಆರ್..!

by EDITOR NEWS WARRIORS
0 comments

ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರಶೇಖರ್ ಶಿವಮೊಗ್ಗದ ವಿನೋಬನಗರದ ಸ್ವ ಗೃಹದಲ್ಲಿ  ಆತ್ಮಹತ್ಯೆ ಮಾಡಿಕೊಂಡಿದ್ದು ಈ ಆತ್ಮಹತ್ಯೆಗೆ ಮೂರು ಜನ ಕಾರಣರೂ ಎಂದು ಡೆತ್ ನೋಟ್ ಬರೆದು ಸಾವನ್ನಪ್ಪಿದ್ದರು ‌.

ಅದರಲ್ಲಿ ಲೆಕ್ಕಾಧಿಕಾರಿ ಪರುಶುರಾಮ್ ಹಾಗೂ ಎಂಡಿ ಜೆ  ಜೆ  ಪದ್ಮನಾಭ ಅವರುಗಳ ಹೆಸರು ಕೂಡ ಇತ್ತು ಇದೀಗ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಸರ್ಕಾರ ಎಂ ಡಿ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. 

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಸಚಿವ ನಾಗೇಂದ್ರ ಅವರು ಇದರಲ್ಲಿ ಯಾರನ್ನು ರಕ್ಷಣೆ ಮಾಡುವ ಉದ್ದೇಶ ನಮಗೆ ಇಲ್ಲ ಈಗಾಗಲೇ ಅಧಿಕಾರಿಗಳು 88 ಕೋಟಿ ಹಣವನ್ನು ವಾಪಸ್ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಬೀಡು ಬಿಟ್ಟಿರುವ ಸಿಐಡಿ ಅಧಿಕಾರಿಗಳು:

ಶಿವಮೊಗ್ಗದಲ್ಲಿ ದೇವರ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಶಿವಮೊಗ್ಗ ಹಾಗೂ ಬೆಂಗಳೂರಿನಲ್ಲಿ ತನಿಖೆ ನಡೆಸುತ್ತಿದ್ದು ಶಿವಮೊಗ್ಗದ ವಿನೋದ್ ನಗರದ ಚಂದ್ರಶೇಖರ್ ಗೃಹದಲ್ಲಿ ಇಂದು ಸುಮಾರು ಮೂರರಿಂದ ನಾಲ್ಕು ತಾಸುಗಳ ತನಕ ತನಿಖೆ ನಡೆಸಿದ್ದಾರೆ ಹಾಗೆ ಪುನಹ ತನಿಖೆ ಮುಂದುವರಿಸುವ ಸಾಧ್ಯತೆ ಕೂಡ ಇದೆ.

ಬ್ಯಾಂಕ್ ಅಧಿಕಾರಿಗಳ ವಿರುದ್ಧ ಬಿತ್ತು ಎಫ್ಐಆರ್ :

ಈ ಪ್ರಕರಣದಲ್ಲಿ ಬ್ಯಾಂಕ್ ಅಧಿಕಾರಿಗಳ ವಿರುದ್ಧವು ಗಂಭೀರ ಆರೋಪಗಳು ಕೇಳಿ ಬರುತ್ತಿದ್ದು ಅವರನ್ನು ಕೂಡ ಈ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಅವರ ವಿರುದ್ಧ ಕೂಡ ಎಫ್ ಆರ್ ದಾಖಲಿಸಿದ್ದಾರೆ.

ವಿನಿಯನ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನ ಅಧಿಕಾರಿಗಳ ವಿರುದ್ಧ ಎಫ್ಐಆರ್ ಬ್ಯಾಂಕ್ ಎಂ.ಡಿ & ಸಿಇಓ ಹಾಗೂ ಎಲ್ಲಾ ನಿರ್ದೇಶಕರ ಮೇಲೆ FIR ಒಟ್ಟು ಆರು ಜನರ ಮೇಲೆ ಎಫ್ ಐ ಆರ್ ಎಫ್. ಎಸ್. ಎಲ್ &ಸಿ. ಐ. ಡಿ ವರದಿ ಬಂದ ಮೇಲೆ ಪ್ರಕರಣದಲ್ಲಿ ಯಾರು ಆ ತಪ್ಪಿತಸ್ಥರು ಎನ್ನುವುದು ಬಹಿರಂಗವಾಗುವ ಸಾಧ್ಯತೆ ಇದೆ.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...