Home ಶಿವಮೊಗ್ಗಸೆ.17 ರಂದು ಬೃಹತ್ ಲಸಿಕಾ ಅಭಿಯಾನ ಲಸಿಕಾಕರಣದ ಯಶಸ್ವಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿಗಳ ಸೂಚನೆ….

ಸೆ.17 ರಂದು ಬೃಹತ್ ಲಸಿಕಾ ಅಭಿಯಾನ ಲಸಿಕಾಕರಣದ ಯಶಸ್ವಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿಗಳ ಸೂಚನೆ….

by EDITOR NEWS WARRIORS
0 comments


ಸೆಪ್ಟೆಂಬರ್ ಮಾಹೆಯಲ್ಲಿ ಗರಿಷ್ಟ ಕೋವಿಡ್ ಲಸಿಕಾಕರಣ ಮಾಡುವ ಉದ್ದೇಶದಿಂದ ಮುಖ್ಯಮಂತ್ರಿಯವರು ಸೆಪ್ಟೆಂಬರ್ 17 ರಂದು ರಾಜ್ಯಾದ್ಯಂತ ವಿಶೇಷ ಲಸಿಕಾ ಅಭಿಯಾನಕ್ಕೆ ಕರೆ ಕೊಟ್ಟಿದ್ದು, ಜಿಲ್ಲೆಗೆ 80 ಸಾವಿರ ಲಸಿಕೆ ನೀಡುವ ಗುರಿ ನೀಡಲಾಗಿದೆ. ನಿಗದಿತ ಗುರಿ ತಲುಪಲು ತಾಲ್ಲೂಕುಗಳ ತಹಶೀಲ್ದಾರರು ಎಲ್ಲ ರೀತಿಯ ಅಗತ್ಯ ತಯಾರಿ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದರು.


ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ತಾಲ್ಲೂಕುಗಳ ತಹಶೀಲ್ದಾರರೊಂದಿಗೆ ಸಭೆ ನಡೆಸಿದ ಅವರು, ಸೆಪ್ಟೆಂಬರ್ 17 ರ ವಿಶೇಷ ಲಸಿಕಾ ಅಭಿಯಾನದಲ್ಲಿ ನಿಗದಿತ ಗುರಿ ತಲುಪಿ ಯಶಸ್ಸು ಸಾಧಿಸಲು ಅಗತ್ಯ ಸಿದ್ದತೆಯನ್ನು ಈಗಿನಿಂದಲೇ ಮಾಡಿಕೊಳ್ಳುವಂತೆ ತಿಳಿಸಿದರು.


ತಹಶೀಲ್ದಾರರು ಸ್ಥಳೀಯ ನಗರ ಮತ್ತು ಗ್ರಾಮೀಣ ಸಂಸ್ಥೆಗಳ ಸಹಯೋಗದೊಂದಿಗೆ ಲಸಿಕಾಕರಣಕ್ಕೆ ಅಗತ್ಯವಾದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಮತ್ತು ಡಾಟಾ ಎಂಟ್ರಿ ಆಪರೇಟರ್ ನಿಯೋಜನೆ, ವಾಹನ ವ್ಯವಸ್ಥೆ ಮತ್ತು ಲಸಿಕಾ ಸ್ಥಳ ಗುರುತು ಮಾಡಿ ಸಿದ್ದತೆ ಮಾಡಿಕೊಳ್ಳಬೇಕು. ಅಗತ್ಯ ಸೇವೆಗಳ ಇಲಾಖೆಗಳನ್ನು ಹೊರತುಪಡಿಸಿ ಇತರೆ ಇಲಾಖೆಗಳಿಂದ ಅಗತ್ಯ ಸಿಬ್ಬಂದಿ, ವಾಹನ ವ್ಯವಸ್ಥೆ ಮಾಡಿಕೊಳ್ಳಬೇಕು.


ಲಸಿಕಾಕರಣಕ್ಕೆ ಸಂಬಂಧಿಸಿದಂತೆ ಗ್ರಾ.ಪಂ ಮತ್ತು ವಾರ್ಡ್‍ವಾರು ಪಟ್ಟಿಯು ತಾಲ್ಲೂಕು ವೈದ್ಯಾಧಿಕಾರಿಗಳ ಬಳಿ ಇದ್ದು ತಹಶೀಲ್ದಾರರು ಅದನ್ನು ಪಡೆದು ಲಸಿಕಾಕರಣಕ್ಕೆ ಅಗತ್ಯವಾದ ಸಿದ್ದತೆ ಬಗ್ಗೆ ಇಂದೇ ಕ್ರಿಯಾ ಯೋಜನೆ ತಯಾರಿಸಿ ನೀಡಬೇಕು. ಹಾಗೂ ನಾಳೆ ಕ್ಷೇತ್ರ ಭೇಟಿ ನೀಡಿ ಎಲ್ಲ ಸಿದ್ದತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ ಅವರು ಇಂದು ಸಂಜೆ ಪುನಃ ಲಸಿಕಾಕರಣ ಅಭಿಯಾನ ಸಿದ್ದತೆ ಕುರಿತು ಸಭೆ ನಡೆಸುವುದಾಗಿ ತಿಳಿಸಿದರು.
ಸಭೆಯಲ್ಲಿ ಡಿಹೆಚ್‍ಓ ಡಾ.ರಾಜೇಶ್ ಸುರಗಿಹಳ್ಳಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಓ.ಮಲ್ಲಪ್ಪ, ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಶೇಖರ್ ಇತರರು ಇದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899..

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...