Home ರಾಜ್ಯಡೆಂಗ್ಯೂ ತಡೆಯಲು ಅಗತ್ಯ ತುರ್ತು ಕ್ರಮ ಕೈಗೊಳ್ಳಬೇಕೆಂದು ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಇಮ್ರಾನ್ ಆಗ್ರಹ..!

ಡೆಂಗ್ಯೂ ತಡೆಯಲು ಅಗತ್ಯ ತುರ್ತು ಕ್ರಮ ಕೈಗೊಳ್ಳಬೇಕೆಂದು ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಇಮ್ರಾನ್ ಆಗ್ರಹ..!

by EDITOR NEWS WARRIORS
0 comments


ಡೆಂಗ್ಯೂ ಜ್ವರ ವೇಗವಾಗಿ ಹರಡುತ್ತಿರುವುದು ಜನರನ್ನು ಬೆಚ್ಚಿ ಬೀಳಿಸಿದೆ. ರಾಜ್ಯದಲ್ಲಿ ಸುಮಾರು 7000ಕ್ಕಿಂತ ಹೆಚ್ಚು ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಒಂದು ವರ್ಷದಲ್ಲಿ 100ಕ್ಕಿಂತ ಹೆಚ್ಚು ಕಂದಮ್ಮಗಳು ಬಲಿಯಾಗಿದ್ದು, ಕಳೆದ 24ಗಂಟೆಗಳಲ್ಲಿ 197 ಡೆಂಗ್ಯೂ ಪ್ರಕರಣಗಳು ಧೃಡವಾಗಿದೆ.


ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 50 ಡೆಂಗ್ಯೂ ಪ್ರಕರಣಗಳು ಕಾಣಿಸಿಕೊಂಡಿದ್ದು ಜನರಿಗೆ ಭಯಭೀತರಾಗಿದ್ದಾರೆ, ಶಿವಮೊಗ್ಗ ಆರೋಗ್ಯ ಇಲಾಖೆ ಇದರ ಬಗ್ಗೆ ಸರಿಯಾದ ಗಮನ ಹರಿಸಬೇಕಾಗಿದೆ, ಚರಂಡಿಗಳ ಸ್ವಚ್ಛತೆಗೆ ಮತ್ತು ಖಾಲಿ ನಿವೇಶನಗಳ ಸ್ವಚ್ಛತೆಗೆ ಮುಖ್ಯ ಆದ್ಯತೆ ನೀಡಬೇಕು ಮತ್ತು ಅಗತ್ಯ ಔಷಧಿಗಳು ಪ್ರತಿ ಸರ್ಕಾರಿ ಆರೋಗ್ಯ ಕೇಂದ್ರ ಪೂರೈಸುವ ತುರ್ತು ಕ್ರಮ ಕೈಗೊಳ್ಳಬೇಕಾಗಿದೆ.

ಸೊಳ್ಳೆ ಹೊಡೆಯುವ ಫಾಗಿಂಗ್ ಯಂತ್ರಗಳ ಮೂಲಕ ಪ್ರತಿ ಹಳ್ಳಿ ಹಳ್ಳಿಗಳಲ್ಲಿ, ಕೇರಿ ಕೇರಿಗಳಲ್ಲಿ ಫಾಗಿಂಗ್ ಮಾಡಬೇಕಾಗಿದೆ. ಜಿಲ್ಲಾ ಆರೋಗ್ಯ ಅಧಿಕಾರಿಗಳು ಮತ್ತು ಮಹಾನಗರ ಪಾಲಿಕೆಯ ಹೆಲ್ತ್ ಇನ್ಸ್ಪೆಕ್ಟರ್ ಇದರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಜನರ ಜೀವನ ನೆಮ್ಮದಿ ಕಾಪಾಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್.ಡಿ.ಪಿ.ಐ ಪಕ್ಷದ ಆಗ್ರಹ ಎಂದು ಜಿಲ್ಲಾಧ್ಯಕ್ಷರಾದ ಇಮ್ರಾನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...