Home ರಾಜ್ಯನಟಿ ಚಂದನಾ ರಾಘವೇಂದ್ರ ಅವರಿಂದ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಬೆಂಗಳೂರು ಆರ್ಟ್ಸ್‌ ಕ್ರಾಫ್ಟ್‌ ಮೇಳಕ್ಕೆ ಚಾಲನೆ…

ನಟಿ ಚಂದನಾ ರಾಘವೇಂದ್ರ ಅವರಿಂದ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಬೆಂಗಳೂರು ಆರ್ಟ್ಸ್‌ ಕ್ರಾಫ್ಟ್‌ ಮೇಳಕ್ಕೆ ಚಾಲನೆ…

by EDITOR NEWS WARRIORS
0 comments

•ಕೋವಿಡ್‌ ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳ ಅಳವಡಿಕೆ.


•ಸೆಪ್ಟೆಂಬರ್‌ 17 ರಿಂದ ಸೆಪ್ಟೆಂಬರ್‌ 26 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ.

ಬೆಂಗಳೂರು ಸೆಪ್ಟೆಂಬರ್‌> 17: ಕರೋನಾ ಸಾಂಕ್ರಾಮಿಕ ಹಾಗೂ ಲಾಕ್‌ಡೌನ್‌ ನಿಂದ ಮನೆಯಲ್ಲಿಯೇ ಇದ್ದು ಬೋರ್‌ ಆಗಿರುವ ಜನರಿಗೆ ಉತ್ತಮ ಶಾಪಿಂಗ್‌ ನ ಅವಕಾಶ ದೊರಕಿಸಿಕೊಡುವ ನಿಟ್ಟಿನಲ್ಲಿ ಸೆಪ್ಟೆಂಬರ್‌ 17 ರಿಂದ 26 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್‌ ಆವರಣದಲ್ಲಿ ಬೆಳಿಗ್ಗೆ 11 ರಿಂದ ಸಂಜೆ ೭ ಗಂಟೆಯವರೆಗೆ ಬೆಂಗಳೂರು ಆರ್ಟ್ಸ್‌ ಅಂಡ್‌ ಕ್ರಾಫ್ಟ್‌ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಕೋವಿಡ್‌ ಹರಡದಂತೆ ಎಲ್ಲಾ ರೀತಿಯ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರವೇಶ ಉಚಿತವಾಗಿದೆ. ಈ ಮೇಳಕ್ಕೆ ಇಂದು ನಟಿ ಚಂದನ ರಾಘವೇಂದ್ರ ಚಾಲನೆ ನೀಡಿದರು.

ಕರೋನಾ ಲಾಕ್‌ಡೌನ್‌ ನಿಂದಾಗಿ ಮನೆಯಲ್ಲಿಯೇ ಇದ್ದು ಬೋರ್‌ ಆಗಿರುವ ಜನರ ಶಾಪಿಂಗ್‌ ಥೆರಪಿಗೆ ಬೇಕಾಗಿರುವ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಇಲ್ಲಿ ಕಲ್ಪಿಸಲಾಗಿದೆ. ಅಲಂಕಾರಿಕ ವಸ್ತುಗಳ ಜೊತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನು ಕೊಳ್ಳಬಹುದಾಗಿದೆ. 80 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿರಲಿವೆ. ಇದರ ಜೊತೆಯಲ್ಲಿಯೇ, ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್‌ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್‌ ಲೂಮ್‌ ಸ್ಯಾರಿಯನ್ನು ಸೆಲೆಕ್ಟ್‌ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ ಎಂದು ನಟಿ ಚಂದನಾ ರಾಘವೇಂದ್ರ ತಿಳಿಸಿದರು.

ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ… 96118 35597…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...