Home ರಾಜ್ಯಪ್ರಧಾನಿ ಮೋದಿ ಹುಟ್ಟುಹಬ್ಬದ ದಿನ ಮಾಲೂರಿನಲ್ಲಿ ಬೃಹತ್‌ ರಕ್ತದಾನ ಶಿಬಿರ – 1039 ಯೂನಿಟ್‌ ರಕ್ತ ಸಂಗ್ರಹಣೆಯ ಮೂಲಕ ದಾಖಲೆ….

ಪ್ರಧಾನಿ ಮೋದಿ ಹುಟ್ಟುಹಬ್ಬದ ದಿನ ಮಾಲೂರಿನಲ್ಲಿ ಬೃಹತ್‌ ರಕ್ತದಾನ ಶಿಬಿರ – 1039 ಯೂನಿಟ್‌ ರಕ್ತ ಸಂಗ್ರಹಣೆಯ ಮೂಲಕ ದಾಖಲೆ….

by EDITOR NEWS WARRIORS
0 comments

– 1039 ಜನರಿಂದ ರಕ್ತದಾನ – ರಾಜ್ಯದಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಅತಿ ಹೆಚ್ಚು ರಕ್ತ ಸಂಗ್ರಹಣೆ
– 17 ದಿನಗಳ ಕಾಲ ಸತತ ಸೇವಾ ಕಾರ್ಯಗಳ ಆಯೋಜನೆ

ಬೆಂಗಳೂರು ಸೆಪ್ಟೆಂಬರ್‌ 18: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮಾಲೂರಿನಲ್ಲಿ ಬಿಜೆಪಿ ಮುಖಂಡರು ಹಾಗೂ ಸಂಜೀವಿನಿ ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷ ಹೂಡಿ ವಿಜಯಕುಮಾರ್‌ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಬೃಹತ್‌ ರಕ್ತದಾನ ಶಿಬಿರದಲ್ಲಿ ಹೊಸದೊಂದು ದಾಖಲೆಯನ್ನು ಬರೆಯಲಾಗಿದೆ. ರಾಜ್ಯದಲ್ಲಿ ನಡೆದ ಎಲ್ಲಾ ಕಾರ್ಯಕ್ರಮಗಳಲ್ಲೂ ಅತಿ ಹೆಚ್ಚು 1039 ಯುನಿಟ್‌ ರಕ್ತವನ್ನು ಸಂಗ್ರಹಿಸಿದ ಹೆಗ್ಗಳಿಕೆ ಈ ಕಾರ್ಯಕ್ರಮದ್ದಾಗಿದೆ.

ಬೆಂಗಳೂರಿನ ರಾಷ್ಟ್ರೋತ್ಥಾನ ರಕ್ತ ನಿಧಿಯ ಮೂಲಕ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಒಂದು ಸಾವಿರ ಯೂನಿಟ್‌ ರಕ್ತವನ್ನು ಸಂಗ್ರಹಿಸಿ ದೇಶದಲ್ಲಿನ ರಕ್ತಹೀನ ರೋಗಿಗಳ ಪಾಲಿನ ಸಂಜೀವಿನ ಆಗುವ ನಿಟ್ಟಿನಲ್ಲಿ ತಾಲ್ಲೂಕು ಬಿಜೆಪಿ ಹಾಗೂ ಸಂಜೀವಿನಿ ಚಾರಿಟೇಬಲ್‌ ಟ್ರಸ್ಟ್‌ ನಿಗದಿಪಡಿಸಿದ್ದ ಗುರಿಯನ್ನು ಸಾಧಿಸಿದ್ದೇವೆ. ತಾಲ್ಲೂಕಿನ ಎಲ್ಲಾ ಭಾಗಗಳಿಂದ ಆಗಮಿಸಿದ್ದ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದ ಕಾರಣ ನಿಗದಿತ ಗುರಿಯನ್ನು ಸಾಧಿಸಿದ್ದೇವೆ. ಯಾವುದೇ ಪ್ರತಿಫಲಾಕ್ಷೆ ಇಲ್ಲದೆ 18 ಗಂಟೆಗಳ ಕಾಲ ದೇಶ ಸೇವೆ ಸಲ್ಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ದಿನದಂದು ದೇಶಧ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಢುವ ಮೂಲಕ ಮೋದಿ ಅವರಿಗೆ ಮತ್ತಷ್ಟು ಹುರುಪು ತುಂಬುವ ಕೆಲಸ ಮಾಡಿದ್ದಾರೆ ಎಂದು ಸಂಜೀವಿನಿ ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷ ಹೂಡಿ ವಿಜಯಕುಮಾರ್‌ ತಿಳಿಸಿದರು.

ನಿನ್ನೆ ಬೃಹತ್‌ ರಕ್ತಧಾನ ಶಿಬಿರವನ್ನು ನಡೆಸಲಾಗಿದ್ದು ಮುಂದಿನ ದಿನಗಳಲ್ಲಿ ಉಚಿತವಾಗಿ ಹೆಲ್ಮೇಟ್‌ ವಿತರಣೆ ಹೀಗೆ ಹತ್ತು ಹಲವು ಸಮಾಜ ಸೇವೆಯ ಕಾರ್ಯಗಳನ್ನು ಹಮ್ಮಿಕೊಂಡು ಬರುತ್ತಿದ್ದೇವೆ ಎಂದು ಹೇಳಿದರು.

ರಕ್ತದಾನ ಶಿಬಿರದಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ ಯುವಕರಿಗೆ ಇದೇ ಸಂಧರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...