Home ತೀರ್ಥಹಳ್ಳಿಗಾಂಧೀಜಿ- ಶಾಸ್ತ್ರೀಜಿ ಜಯಂತಿಯನ್ನು ವಿಶಿಷ್ಟವಾಗಿ ಸಂಭ್ರಮಿಸಿದ ತೀರ್ಥಹಳ್ಳಿ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘ..!

ಗಾಂಧೀಜಿ- ಶಾಸ್ತ್ರೀಜಿ ಜಯಂತಿಯನ್ನು ವಿಶಿಷ್ಟವಾಗಿ ಸಂಭ್ರಮಿಸಿದ ತೀರ್ಥಹಳ್ಳಿ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘ..!

by EDITOR NEWS WARRIORS
0 comments

ದೇಶ ಕಂಡ ಮಹಾನ್ ಚೇತನಗಳಾದ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿಯನ್ನು ತೀರ್ಥಹಳ್ಳಿತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘವು ಸ್ವಚ್ಚತಾ ಕಾರ್ಯವನ್ನು ನಡೆಸುವ ಮೂಲಕ ವಿಶಿಷ್ಟವಾಗಿ ಸಂಭ್ರಮಿಸಿತು.

ಶ್ರಮದಾನದ ಮೂಲಕ ಪಟ್ಟಣದ ಕುವೆಂಪು ರಸ್ತೆಯಲ್ಲಿನ ಸರ್ಕಾರಿ ನೌಕರರ ಭವನದ ಸುತ್ತಲಿನ ಪ್ರದೇಶಗಳಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಸಿದ ಸಂಘಟನೆ ರಸ್ತೆಯ ಇಕ್ಕೆಲಗಳಲ್ಲೂ ಸಂಗ್ರಹವಾಗಿದ್ದ ದೊಡ್ಡ ಸಂಖ್ಯೆಯ ತ್ಯಾಜ್ಯಗಳನ್ನು ಸಂಗ್ರಹಿಸಿ, ವಿಲೇವಾರಿ ಮಾಡುವುದರ ಜೊತೆಗೆ “ನಮ್ಮ ಪರಿಸರದ ಸ್ವಚ್ಚತೆ ನಮ್ಮ ಜವಬ್ದಾರಿ” ಎಂಬ ಸಂದೇಶದ ಮೂಲಕ ಸ್ವಚ್ಚತೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯ ನಡೆಸಿತು.

ಇದೇ ಸಂದರ್ಭದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ- 2024 ರ ಅಂಗವಾಗಿ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ನಡೆದ ಶಿವಮೊಗ್ಗ ಜಿಲ್ಲಾ ಮಟ್ಟದ ಹಿರಿಯ ನಾಗರಿಕರ ಕ್ರೀಡಾಕೂಟದ 70 ವರ್ಷ ಮೇಲ್ಪಟ್ಟವರ 100 ಮೀಟರ್ ನಡಿಗೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಕಾಡಪ್ಪ ಗೌಡರನ್ನು ಆತ್ಮೀಯವಾಗಿ ಅಭಿನಂದಿಸಲಾಯಿತು.

ಸಂಘದ ಅಧ್ಯಕ್ಷ ಸತೀಶ ಟಿ ವಿ, ಕಾರ್ಯದರ್ಶಿ ರಾಮು ಬಿ, ಖಜಾಂಚಿ ಪವಿತ್ರ ಹೆಚ್ ಸಿ, ಹಿರಿಯ ಉಪಾಧ್ಯಕ್ಷ ರಾಘವೇಂದ್ರ ಎಸ್, ಜಂಟಿ ಕಾರ್ಯದರ್ಶಿ ರಮೇಶ್, ಕಾಡಪ್ಪ ಗೌಡ, ರಾಜೇಶ್ವರಿ, ದುಗ್ಗಣ್ಣ, ಹನುಮಂತ ರೆಡ್ಡಿ ನಚಿಕೇತ್ ಎಸ್ ಶೆಟ್ಟಿ ,ಶ್ರೀನಿವಾಸ್, ಮತ್ತಿತರರಿದ್ದರು.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...