Home ಶಿವಮೊಗ್ಗಆರೋಗ್ಯShivamogga:ಮೆಟ್ರೋ ಆಸ್ಪತ್ರೆಯಲ್ಲಿ ಆರಬೈಟಲ್ ಅಥೆರೆಕ್ಟಮಿ ಚಿಕಿತ್ಸೆ ಯಶಸ್ವಿ..!

Shivamogga:ಮೆಟ್ರೋ ಆಸ್ಪತ್ರೆಯಲ್ಲಿ ಆರಬೈಟಲ್ ಅಥೆರೆಕ್ಟಮಿ ಚಿಕಿತ್ಸೆ ಯಶಸ್ವಿ..!

by EDITOR NEWS WARRIORS
0 comments

ಶಿವಮೊಗ್ಗ :ಮೆಟ್ರೋ ಆಸ್ಪತ್ರೆಯಲ್ಲಿ ಆರಬೈಟಲ್ ಅಥೆರೆಕ್ಟಮಿ ಚಿಕಿತ್ಸೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು ಈ ಶುಭ ಸುದ್ದಿಯನ್ನು ಹಂಚಿಕೊಳ್ಳಲು ಇಂದು ಮೆಟ್ರೋ ಆಸ್ಪತ್ರೆಯಲ್ಲಿ ಪತ್ರಿಕೋಶ್ರೀ ಕರೆಯಲಾಗಿತ್ತು. ಈ ಸಮಯದಲ್ಲಿ ಮಾತನಾಡಿದ ಮೆಟ್ರೋ ಆಸ್ಪತ್ರೆಯ ಅಧ್ಯಕ್ಷರಾದ ಡಾ. ಲಕ್ಷ್ಮೀನಾರಾಯಣ ಆಚಾರ್ ಮಧ್ಯಮಭಾಗದ ಕರ್ನಾಟಕದಲ್ಲಿ ಪ್ರಪ್ರಥಮ ಬಾರಿಗೆ ಶಿವಮೊಗ್ಗ ನಗರದ ಮೆಟ್ರೋ ಆಸ್ಪತ್ರೆಯ ರೋಗಿ ಒಬ್ಬರ ಹೃದಯಕ್ಕೆ “ಆರಬೈಟಲ್ ಅಥೆರೆಕ್ಟಮಿ” ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ. ಆಸ್ಪತ್ರೆಯಲ್ಲಿ ಆರಬೈಟಲ್ ಅಥೆರೆಕ್ಟಮಿ ಚಿಕಿತ್ಸೆಗೆ ಒಳಗಾದ ಶಿವಮೊಗ್ಗ ನಗರದ 76 ವರ್ಷದ ಚಂದ್ರಪ್ಪ ಶೆಟ್ಟಿ ಅವರಿಗೆ ಆಸ್ಪತ್ರೆ ಹೃದಯ ರೋಗ ತಜ್ಞರಾದ ಡಾ. ಶಿವಶಂಕರ್ ಟಿ.ಹೆಚ್. ನೇತೃತ್ವದ ತಂಡ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದೆ ಎಂದು ತಿಳಿಸಿದರು. ಹೃದಯದ ರಕ್ತ ನಾಳದಲ್ಲಿ ತುಂಬಾ ಕ್ಯಾಲ್ಸಿಯಂ ಇದ್ದರೆ ಈ ಹಿಂದೆ ಓಪನ್ ಹಾರ್ಟ್ ಸರ್ಜರಿ ಮಾಡುತ್ತಿದ್ದೆವು. ಈಗ ರಕ್ತನಾಳದ ಕ್ಯಾಲ್ಸಿಯಂ ನ್ನು ಪುಡಿ ಪುಡಿ ಮಾಡಿ ಸ್ಟಂಟ್ ಹಾಕುವ ವಿಧಾನವಾಗಿದೆ. ಈ ವಿಧಾನದಿಂದ ರಕ್ತ ನಾಳಕ್ಕೆ ಅಪಾಯ ಕಡಿಮೆ ಎಂದರು.

ವೈದ್ಯರಾದ ಡಾ ಶಿವಶಂಕರ್ ಟಿ ಹೆಚ್ ಮಾತನಾಡಿ ಆರಬೈಟಲ್ ಅಥೆರೆಕ್ಟಮಿ ಡೈಮಂಡ್ ಬ್ಲಾಕ್ 360 ಸಾಧನವನ್ನು ಉಪಯೋಗಿಸಿ ರಕ್ತ ನಾಳದಲ್ಲಿ ಕ್ಯಾಲ್ಸಿಯಂ ಫ್ಯಾಟ್ ತೆಗೆದು ರಕ್ತ ನಾಳವನ್ನು ಶುದ್ದೀಕರಿಸಲಾಯಿತು, ನಂತರ ಸ್ಟಂಟ್ ಅಳವಡಿಸಲಾಗಿದೆ ಎಂದು ತಿಳಿಸಿದರು. ಇದರಿಂದ ರೋಗಿಗೆ ಯಾವುದೇ ತೊಂದರೆ ಆಗುವುದಿಲ್ಲ. ಶಸ್ತ್ರ ಚಿಕಿತ್ಸೆ ಆದ ನಂತರ 3 ದಿನಗಳಲ್ಲಿ ರೋಗಿಯನ್ನು ಮನೆಗೆ ಕಳುಹಿಸಿಕೊಡಲಾಯಿತು ಎಂದರು.

ಈ ಪತ್ರಿಕಾಗೋಷ್ಟಿಯಲ್ಲಿ ನಿರ್ದೇಶಕರುಗಳಾದ ಡಾ ಪಿ. ಲಕ್ಷ್ಮೀನಾರಾಯಣ ಆಚಾರ್ (ಅಧ್ಯಕ್ಷರು ), ಡಾ ತೇಜಸ್ವಿ ಟಿ. ಎಸ್ (ಸಿ.ಈ.ಓ), ಡಾ. ಪೃಥ್ವಿ ಬಿ. ಸಿ (ಮೆಡಿಕಲ್ ಡೈರೆಕ್ಟರ್ ), ಆಸ್ಪತ್ರೆಯ ಹೃದಯ ರೋಗ ತಜ್ಞರಾದ ಡಾ. ಶಿವಶಂಕರ್ ಟಿ. ಹೆಚ್ ಉಪಸ್ಥಿತರಿದ್ದರು.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...