Home ಬೆಂಗಳೂರುBig breaking news: ನಟ ದರ್ಶನ್ ಗೆ ಬಿಡುಗಡೆಯ ಭಾಗ್ಯ..!

Big breaking news: ನಟ ದರ್ಶನ್ ಗೆ ಬಿಡುಗಡೆಯ ಭಾಗ್ಯ..!

by EDITOR NEWS WARRIORS
0 comments

ತೀವ್ರ ಕಾತುರದಿಂದ ಕಾಯುತ್ತಿದ್ದ ನಟ ದರ್ಶನ್ ಅಭಿಮಾನಿಗಳಿಗೆ ಹಾಗೂ ಕುಟುಂಬದವರಿಗೆ ಶುಭ ಸುದ್ದಿ ಒಂದು ಸಿಕ್ಕಿದ್ದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಜಾಮೀನು ಮಂಜುರಾಗಿದೆ.

ಹೈಕೋರ್ಟ್ ನಲ್ಲಿ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠದಲ್ಲಿ ಮಂಗಳವಾರ ನಟ ದರ್ಶನ್ ಸಲ್ಲಿಸಿದ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ನಡೆಸಲಾಗಿತ್ತು ತೀರ್ಪನ್ನು ಇಂದಿಗೆ ಕಾಯ್ದಿರಿಸಲಾಗಿತ್ತು.


ನಟ ದರ್ಶನ್ ಪರ ಖ್ಯಾತ ವಕೀಲರಾದ ಸಿ.ವಿ ನಾಗೇಶ್ ಪ್ರಬಲವಾದ ವಾದ ಮಂಡಿಸಿದ್ದರು. ದರ್ಶನ್ ಗೆ ಇರುವ ಬೆನ್ನು ನೋವಿನ ಸಮಸ್ಯೆಯನ್ನು ಮುಂದಿಟ್ಟುಕೊಂಡು ವಕೀಲರು ವಾದ ಮಂಡಿಸಿದ್ದರು.

ಡಿಕೆ ಶಿವಕುಮಾರ್ ಪ್ರಕರಣವನ್ನು ಎಳೆದು ತಂದ ಸಿವಿ ನಾಗೇಶ್..?!

ಇಂದಿನ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಕರಣದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಾಗ ಜಾಮೀನು ಮಂಜೂರು ಮಾಡಿದ್ದನ್ನು ಉಲ್ಲಂಘಿಸಿ ವಾದ ಮಂಡಿಸಿದರು. ಡಿಕೆ ಶಿವಕುಮಾರ್ ಅವರಿಗಿದ್ದ ಆರೋಗ್ಯ ಸಮಸ್ಯೆಗಿಂತ ಇದು ಬಹಳ ಗಂಭೀರವಾಗಿದ್ದು. ಬೆನ್ನು ಹುರಿಯ ಸಮಸ್ಯೆಯಿಂದ ಕಾಲು ಮರಗಟ್ಟುವಿಕೆ ಆಗುತ್ತಿದೆ. ಹೀಗೆ ಆದರೆ ಮುಂದೊಂದು ದಿನ ಬಹಳ ದೊಡ್ಡ ಸಮಸ್ಯೆಗೆ ಕಾರಣ ಆಗುತ್ತದೆ. ಡಿಸ್ಕ್ ನಲ್ಲಿ ಆದ ಸಮಸ್ಯೆಯಿಂದ ರಕ್ತ ಪರಿಚಲನೆ ಆಗುತ್ತಿಲ್ಲ. ಇದು ನಾರ್ಮಲ್ ಟ್ರೀಟ್ ಮೆಂಟ್ ಆಗಲ್ಲ, ಹೀಗಾಗಿ ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ. ಆದ್ದರಿಂದ ಇದನ್ನು ಪರಿಗಣಿಸಿ ದರ್ಶನ್ ಗೆ ಜಾಮೀನು ನೀಡಬೇಕು ಎಂದು ಡಿಕೆ ಶಿವಕುಮಾರ್ ಪ್ರಕರಣವನ್ನು ಮುಂದಿಟ್ಟುಕೊಂಡು ವಾದ ಮಂಡಿಸಿದರು.

ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಲಯ ದರ್ಶನ್ ಒಬ್ಬ ವಿಚಾರಣಾಧೀನ ಕೈದಿ‌ ಆತನಿಗೂ ಉತ್ತಮ ಆರೋಗ್ಯದ ಹಕ್ಕಿದೆ . ಚಿಕಿತ್ಸೆ ಪಡೆಯುವುದು ವ್ಯಕ್ತಿಯ ಮೂಲಭೂತ ಹಕ್ಕು ಎಂದು. ನೀವು ಎಲ್ಲಿ ಚಿಕಿತ್ಸೆ ಪಡೆಯಲು ಬಯಸುತ್ತೀರಾ ಎಂದು ನ್ಯಾಯಾಧೀಶರು ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಗೆ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಸಿವಿ ನಾಗೇಶ್ ‘ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತೇವೆ ಎಂದು ಹೇಳಿದ್ದಾರೆ.

ಪ್ರಸ್ತುತ ಬಳ್ಳಾರಿ ಜೈಲ್ ನಲ್ಲಿ ಇರುವ ದರ್ಶನ್ ಗೆ ಜಾಮೀನು ಮಂಜೂರಾಗಿದ್ದು ಈಗ ಮೈಸೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಆಗುವ ಸಾಧ್ಯತೆ ಇದೆ.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...