Home ಶಿವಮೊಗ್ಗBig news : ಮುಸ್ಲಿಂಮರ ವಿರುದ್ಧ ರಕ್ತಕ್ರಾಂತಿ ಮಾತನಾಡಿದ್ದ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ವಿರುದ್ಧ ದೂರು ದಾಖಲು..!

Big news : ಮುಸ್ಲಿಂಮರ ವಿರುದ್ಧ ರಕ್ತಕ್ರಾಂತಿ ಮಾತನಾಡಿದ್ದ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ವಿರುದ್ಧ ದೂರು ದಾಖಲು..!

by EDITOR NEWS WARRIORS
0 comments

ಕಾಂಗ್ರೆಸ್ ಮತ್ತು ಮುಸ್ಲೀಮರ ವಿರುದ್ಧ ರಕ್ತಕ್ರಾಂತಿಯ ಮಾತಾಡಿದ್ದ ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತ ಬಳಗದ ಸಂಚಾಲಕರಾದ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಯನಗರ ಪೊಲೀಸ್ ಇನ್ಸ್ ಪೆಕ್ಟರ್ ಸಿದ್ದೇಗೌಡ ಹೆಚ್.ಎಂ. ರವರು ಸ್ವ ದೂರು ನೀಡಿದ್ದು, ಈಶ್ವರಪ್ಪರ ವಿರುದ್ಧ ನವೆಂಬರ್ 14 ರಂದು 81/2024 ರಂತೆ, ಕಲಂ 196(1)(a), 299BNS ನಂತೆ ಪ್ರಕರಣ ದಾಖಲಾಗಿದೆ.

ನ.13 ರಂದು ಬೆಳಿಗ್ಗೆ ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕೆ.ಎಸ್.ಈಶ್ವರಪ್ಪ ವಕ್ಫ್ ಪ್ರಕರಣಗಳ ಬಗ್ಗೆ, ಅಂಬೇಡ್ಕರ್ ಇಸ್ಲಾಂ ಸೇರ್ಪಡೆ ಹೇಳಿಕೆ ಬಗ್ಗೆ, ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲೀಮರ ಮೀಸಲಾತಿ ಬಗ್ಗೆ ಕಾಂಗ್ರೆಸ್ ಕಾಂಗ್ರೆಸ್ ಸ್ಪಂದಿಸಿ ಹಿಂದೂಸ್ಥಾನವನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದ್ದರು.

ಅಲ್ಲದೇ, ಧಾರ್ಮಿಕ ಭಾವನೆಗಳು ಕೆರಳುವಂತೆ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿಯೇ ಪೊಲೀಸ್ ಇಲಾಖೆ ಎಚ್ಚೆತ್ತು ಕೊಂಡು ಈಶ್ವರಪ್ಪರವರ ಮೇಲೆ ಧಾರ್ಮಿಕ ಭಾವನೆ ಕೆರಳಿಸಿದ ಆರೋಪದ ಮೇಲೆ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದೆ.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...