Home ಶಿವಮೊಗ್ಗShivamogga:ಹೊಸ ವರ್ಷ ಸಂಭ್ರಮಾಚರಣೆ ಗೆ ಎಸ್ ಪಿ ನೀಡಿದ 8 ಮಹತ್ವದ ಸೂಚನೆಗಳೇನು..?!

Shivamogga:ಹೊಸ ವರ್ಷ ಸಂಭ್ರಮಾಚರಣೆ ಗೆ ಎಸ್ ಪಿ ನೀಡಿದ 8 ಮಹತ್ವದ ಸೂಚನೆಗಳೇನು..?!

by EDITOR NEWS WARRIORS
0 comments

ಇನ್ನೇನು ಕೆಲವೇ ದಿನಗಳಲ್ಲಿ 2024 ಮುಕ್ತಾಯ ಗೊಳ್ಳಲಿದೆ ಹೊಸ ವರ್ಷ 2025ರ ಸಂಭ್ರಮಾಚರಣೆ ಗೆ ಎಲ್ಲೆಡೆ ಸಕಲ ಸಿದ್ಧತೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ, ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜಿ.ಕೆ, ನೇತೃತ್ವದಲ್ಲಿ, ಶಿವಮೊಗ್ಗ ಜಿಲ್ಲೆಯ ಎಲ್ಲಾ ಹೋಂ ಸ್ಟೇ, ಹೋಟೆಲ್, ಲಾಡ್ಜ್, ಮತ್ತು ರೆಸಾರ್ಟ್ ಗಳ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯನ್ನು ನಡೆಸಿ, ಎಂಟು ಮಹತ್ವದ ಸೂಚನೆಗಳನ್ನು ನೀಡಿದರು.

1) ಹೊಸ ವರ್ಷ ಆಚರಣೆಯ ಹಿನ್ನೆಲೆಯಲ್ಲಿ ಯಾವುದೇ ಕಾರ್ಯಕ್ರಮ ಆಯೋಜಿಸುವ ಪೂರ್ವದಲ್ಲಿ,ಸರಹದ್ದಿನ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳುವುದು. ಪೊಲೀಸ್ ಇಲಾಖೆಯ ಗಮನಕ್ಕೆ ಬಾರದೆ / ಅನುಮತಿ ಪಡೆಯದೇ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.

2) ಕಾರ್ಯಕ್ರಮ ಆಯೋಜಿಸುವವರು ಸ್ಥಳಾವಕಾಶವನ್ನು ಗಮನದಲ್ಲಿಟ್ಟುಕೊಂಡು, ಅಷ್ಟೇ ಜನರಿಗೆ ಅನುಮತಿ ನೀಡುವುದು ಹಾಗೂ ಆಯೋಜಿಸಲಾಗುವ ಕಾರ್ಯಕ್ರಮಕ್ಕೆ ಎಷ್ಟು ಜನ ಸೇರುತ್ತಾರೆ ಮತ್ತು ಸಂಖ್ಯೆಗೆ ಅನುಗುಣವಾಗಿ ಕೈಗೊಳ್ಳಲಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡುವುದು.

3) ಕಾರ್ಯಕ್ರಮದ ಆಯೋಜಕರು ಸಂಭ್ರಮಾಚರಣೆಯಲ್ಲಿ ಮಧ್ಯಪಾನಕ್ಕೆ ಅವಕಾಶ ಇದ್ದಲ್ಲಿ, ಅಬಕಾರಿ ಇಲಾಖೆಯ ಷರತ್ತುಗಳು ಹಾಗೂ ಮಾರ್ಗ ಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡುವುದು ಹಾಗೂ ಮಧ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಸ್ಥಿತಿಯಲ್ಲಿ ಇಲ್ಲದಿದ್ದಲ್ಲಿ ಬೇರೆ ಚಾಲಕರ ಏರ್ಪಾಡು ಮಾಡಿ ಕಳುಹಿಸಿಕೊಡುವುದು ಅಥವಾ ಅಲ್ಲಿಯೇ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡುವುದು.

4) ಹೊಸ ವರ್ಷದ ಆಚರಣೆಯನ್ನು ಮಧ್ಯ ರಾತ್ರಿ 12:00 ಗಂಟೆಗೆ ಆಚರಿಸಿದ ನಂತರ ರಾತ್ರಿ 01:00 ಗಂಟೆಯ ಒಳಗಾಗಿ ಎಲ್ಲಾ ರೀತಿಯ ಹೊರಾಂಗಣ ಕಾರ್ಯಕ್ರಮಗಳನ್ನು ಮುಕ್ತಾಯ ಮಾಡುವುದು.

5) ಕಾರ್ಯಕ್ರಮಕ್ಕೆ ಬರುವ ವಾಹನಗಳಿಗೆ ಸೂಕ್ತ ಮತ್ತು ಸಮರ್ಪಕವಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡುವುದು ಹಾಗೂ 200 ಕ್ಕಿಂತ ಹೆಚ್ಚಿನ ಸಾರ್ವಜನಿಕರು ಸೇರುವ ಸ್ಥಳದಲ್ಲಿ, ಕಡ್ಡಾಯವಾಗಿ ಸಿಸಿ ಟಿವಿ ಗಳನ್ನು ಅಳವಡಿಸುವುದು ಮತ್ತು ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರ / ಅತಿಥಿಗಳ ಹೆಸರು ಮತ್ತು ವಿವರವನ್ನು ಬರೆದುಕೊಂಡು, ಯಾವುದಾದರೂ ಒಂದು ಗುರುತಿನ ಚೀಟಿಯನ್ನು ಪಡೆದುಕೊಳ್ಳತಕ್ಕದ್ದು.

6) ಕಾರ್ಯಕ್ರಮದ ಆಯೋಜಕರುಗಳು ಕಾರ್ಯಕ್ರಮದ ಆಯೋಜಿಸಿದ ಸ್ಥಳದಲ್ಲಿ ಒಳ ಬರುವ ಮತ್ತು ಹೊರ ಹೋಗುವ ದ್ವಾರದಲ್ಲಿ ತಮ್ಮ ಸಿಬ್ಬಂಧಿಗಳನ್ನು ನೇಮಿಸಿಕೊಂಡು, ಸಾರ್ವಜನಿಕರ ಸುರಕ್ಷತೆಯ ಬಗ್ಗೆ ನಿಗಾವಹಿಸುವುದು.

7) ಕಾರ್ಯಕ್ರಮದಲ್ಲಿ ಭಾಗವಹಿಸುವ ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗೆ ಆಧ್ಯತೆ ನೀಡಿ, ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು, ಎಚ್ಚರದಿಂದಿರುವುದು. ಯಾವುದೇ ಸಣ್ಣ ಪುಟ್ಟ ಘಟನೆಗಳು ಜರುಗಿದಾಗ,ಯಾವುದೇ ನಿರ್ಲಕ್ಷತನ ತೋರದೇ ಕೂಡಲೇ 112 ತುರ್ತು ಸಹಾಯವಾಣಿಗೆ ಕರೆ ಮಾಡುವುದು.

8) ಕಾರ್ಯಕ್ರಮದಲ್ಲಿ ಅಳವಡಿಸುವ ದ್ವನಿ ವರ್ದಕ, ಪಟಾಕಿ ಸಿಡಿಸುವುದರಿಂದ ಸಾರ್ವಜನಿಕರಿಗೆ ಕಿರಿಕಿರಿ / ತೊಂದರೆಯಾಗದ ರೀತಿ ನೋಡಿಕೊಳ್ಳುವುದು ಹಾಗೂ ಕಾರ್ಯಕ್ರಮ ಆಯೋಜನೆಯ ಸ್ಥಳದಲ್ಲಿ ಈಜುಕೊಳ ( ಸ್ವಿಮ್ಮಿಂಗ್ ಫೂಲ್ ) ಇದ್ದಲ್ಲಿ, ಹೆಚ್ಚಿನ ಗಮನ ಹರಿಸುವುದು ಹಾಗೂ ಈಜುಕೊಳಕ್ಕೆ ಸಾರ್ವಜನಿಕರಿಗೆ ಅವಕಾಶವಿದ್ದಲ್ಲಿ ನುರಿತ ಈಜು ತಜ್ಞರನ್ನು ನೇಮಕ ಮಾಡಿಕೊಂಡು, ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು. ಎನ್ನುವ ಮೇಲಿನ ಎಂಟು ಮಹತ್ವದ ಸೂಚನೆಗಳನ್ನು ನೀಡಿದರು.

ಸದರಿ ಸಭೆಯಲ್ಲಿ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಎ.ಜಿ ಕಾರ್ಯಪ್ಪ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಬಾಬು ಆಂಜನಪ್ಪ, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ –ಎ ಉಪ ವಿಭಾಗ, ಸುರೇಶ್, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ –ಬಿ ಉಪ ವಿಭಾಗ, ನಾಗರಾಜ್, ಪೊಲೀಸ್ ಉಪಾಧೀಕ್ಷಕರು, ಭದ್ರಾವತಿ ಉಪ ವಿಭಾಗ, ಕೇಶವ್, ಪೊಲೀಸ್ ಉಪಾಧೀಕ್ಷಕರು, ಶಿಕಾರಿಪುರ ಉಪ ವಿಭಾಗ, ಗಜಾನನ ವಾಮನ ಸುತರ ಪೊಲೀಸ್ ಉಪಾಧೀಕ್ಷಕರು, ತೀರ್ಥಹಳ್ಳಿ ಉಪ ವಿಭಾಗ ಹಾಗೂ ಪೊಲೀಸ್ ವೃತ್ತ ನಿರೀಕ್ಷಕರು, ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಹಾಗೂ ಹೋಂ ಸ್ಟೇ, ಹೋಟೆಲ್, ಲಾಡ್ಜ್, ಮತ್ತು ರೆಸಾರ್ಟ್ ಗಳ ಮಾಲೀಕರು ಹಾಗೂ ವ್ಯವಸ್ಥಾಪಕರು ಉಪಸ್ಥಿತರಿದ್ದರು.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...