Home ರಾಜ್ಯBig news: ಪೊಲೀಸ್ ಇಲಾಖೆಯಲ್ಲಿ ಭರ್ಜರಿ ಸರ್ಜರಿ ರಾಜ್ಯಾದ್ಯಂತ ವರ್ಗಾವಣೆ ಪರ್ವ..!

Big news: ಪೊಲೀಸ್ ಇಲಾಖೆಯಲ್ಲಿ ಭರ್ಜರಿ ಸರ್ಜರಿ ರಾಜ್ಯಾದ್ಯಂತ ವರ್ಗಾವಣೆ ಪರ್ವ..!

by EDITOR NEWS WARRIORS
0 comments

ಪೊಲೀಸ್ ಇಲಾಖೆಯಲ್ಲಿ ಕರ್ನಾಟಕ ರಾಜ್ಯಾದ್ಯಂತ ವರ್ಗಾವಣೆ ಪರ್ವ ಶುರುವಾಗಿದ್ದು ಭರ್ಜರಿ ಸರ್ಜರಿ ಮಾಡಿದ್ದಾರೆ. ಸ್ಥಳ ನಿರೀಕ್ಷೆಯಲ್ಲಿದ್ದ ಕೆಲವು ಅಧಿಕಾರಿಗಳಿಗೆ ಸ್ಥಳ ತೋರಿಸಿದರೆ ಪ್ರಭಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ಅಲ್ಲೇ ಮುಂದುವರಿಸಿದ್ದಾರೆ ಹಾಗೆ ಕೆಲವು ಡಿವೈಎಸ್ಪಿ ಹಾಗೂ ಪಿಐಗಳನ್ನು ವರ್ಗಾವಣೆ ಮಾಡಿದ್ದು ಕೆಲವು ಪಿಎಸ್ಐ ಗಳಿಗೆ ಮುಂಬಡ್ತಿ ನೀಡಲಾಗಿದೆ.

ಶಿವಮೊಗ್ಗ ಜಿಲ್ಲೆ:

ಜಿಲ್ಲೆಯಲ್ಲಿ ಇಬ್ಬರು ಡಿವೈಎಸ್ಪಿಗಳು, ಇಬ್ಬರು ಪೊಲೀಸ್ ಇನ್ ಸ್ಪೆಕ್ಟರ್ ಗಳ ವರ್ಗಾವಣೆಯಾದರೆ ಒಬ್ಬರಿಗೆ ಪಿಎಸ್ಐ ನಿಂದ ಪಿಐಗೆ ಬಡ್ತಿ ದೊರೆತಿದೆ.

ತೀರ್ಥಹಳ್ಳಿ :

ತೀರ್ಥಹಳ್ಳಿಯಲ್ಲಿ ಜನಸ್ನೇಹಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸದಾ ಸ್ಪಂದಿಸುತ್ತಿದ್ದ ಯುವ ಡಿವೈಎಸ್ಪಿ ಗಜಾನನ್ ವಾಮನ ಸುತಾರ್ ವರ್ಗಾವಣೆಯಾಗಿದ್ದಾರೆ. ಹಾಗೂ ಸಾಕಷ್ಟು ವಿವಾದಗಳ ನಡುವೆಯೂ ಉತ್ತಮವಾಗಿ ಕಾರ್ಯನಿರ್ವಹಿಸಿದ ಇನ್ ಸ್ಪೆಕ್ಟರ್ ಅಶ್ವಥ್ ಗೌಡರ ತಡೆಹಿಡಿದ ವರ್ಗಾವಣೆ ಈಗ ಆಗಿದೆ. ಡಿವೈಎಸ್ಪಿ ಗಜಾನನ ವಾಮನ ಸುತಾರರನ್ನ ಬಾಗಲಕೋಟೆಗೆ ವರ್ಗಾಯಿಸಲಾಗಿದ್ದರೆ. ಇನ್ಸೆಕ್ಟ‌ರ್ ಅಶ್ವಥ್ ಗೌಡರನ್ನ ಬೆಂಗಳೂರಿನ ಐಜಿ ಕಚೇರಿಗೆ ವರ್ಗಾಯಿಸಲಾಗಿದೆ. ಇನ್ನು ತೀರ್ಥಹಳ್ಳಿಗೆ ಇನ್ ಸ್ಪೆಕ್ಟರ್ ಆಗಿ ಇಮ್ರಾನ್ ಬೇಗ್ ಎಂಬುವರು ವರ್ಗಾಯಿಸಲಾಗಿದೆ ಇಲ್ಲಿ ರಾಜಕೀಯ ಕೆಲಸ ಮಾಡಿದೆ.

ಶಿವಮೊಗ್ಗ:

ಸರಳ ವ್ಯಕ್ತಿತ್ವದ ಸ್ನೇಹಪರ ವ್ಯಕ್ತಿಯಾಗಿದ್ದ ಭಾವುಕ ಜೀವಿ ಶಿವಮೊಗ್ಗ ಬಿ ವಿಭಾಗದ ಡಿವೈಎಸ್ಪಿಯಾಗಿರುವ ಸುರೇಶ್ ರವರಿಗೆ ವರ್ಗಾವಣೆಯಾಗಿದೆ. ಇವರ ಜಾಗಕ್ಕೆ ರಾಜ್ಯ ಗುಪ್ತವಾರ್ತೆಯಲ್ಲಿದ್ದ ಸಂಜೀವ್ ಕುಮಾರ್ ತಿರ‌್ಲುಕ ಅವರು ವರ್ಗಾವಣೆಯಾಗಿದ್ದಾರೆ. ಇನ್ನು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಪ್ರಸಾದ್ ಅವರು ಇನ್ ಸ್ಪೆಕ್ಟರ್ ಆಗಿ ಬಡ್ತಿಪಡೆದಿದ್ದಾರೆ. ಲೋಕಾಯುಕ್ತದಲ್ಲಿ ಇನ್ ಸ್ಪೆಕ್ಟರ್ ಆಗಿ ಬಡ್ತಿಪಡೆದು ವರ್ಗಾವಣೆಯಾಗಿದ್ದಾರೆ.

ಸಾಗರ :

ಸ್ಥಳ ನಿರೀಕ್ಷೆಯಲ್ಲಿದ್ದ ಪುಲ್ಲಯ್ಯರವನ್ನ ಸಾಗರ ಪೊಲೀಸ್ ಠಾಣೆಯ ಸಿಪಿಐ ಆಗಿ ವರ್ಗಾಯಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರದಲ್ಲಿ ಪಿಐ ಆಗಿ ಕರ್ತವ್ಯ ನಿರ್ವಹಿಸಿ ಚಿಕ್ಕಮಗಳೂರಿಗೆ ಕಳೆದ ಬಾರಿ ಗಣಪತಿ ಗಲಾಟೆ ವಿವಾದದಲ್ಲಿ ವರ್ಗಾವಣೆಯಾಗಿದ್ದ ಅಭಯ್ ಪ್ರಕಾಶ್ ಸೋಮನಾಳ್ ಚಿಕ್ಕಮಗಳೂರಿನ ಟೌನ್ ಠಾಣೆಯ ಪಿಐ ಆಗಿ ವರ್ಗವಾಗಿದ್ದಾರೆ. ಒಟ್ಟು 41 ಪಿಐಗಳು ಮತ್ತು 11 ಜನ ಡಿವೈಎಸ್ಪಿಗಳ ವರ್ಗಾವಣೆ ಮಾಡುವುದರ ಮೂಲಕ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದೆ.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...